ಮಧುಮೇಹಿಗಳು ಅಂಜೂರ ಹಣ್ಣುಗಳನ್ನು ತಿನ್ನಬಹುದೇ..? ತಪ್ಪದೇ ತಿಳಿದುಕೊಳ್ಳಬೇಕಾದ ವಿಚಾರ

Anjeer dry fruit for Diabetes : ಅನೇಕ ರೀತಿಯ ಹಣ್ಣುಗಳು ಪ್ರಕೃತಿಯಲ್ಲಿ ಲಭ್ಯವಿದೆ. ಹಣ್ಣುಗಳಲ್ಲಿ ದೇಹಕ್ಕೆ ಬೇಕಾದ ಪೋಷಕಾಂಶಗಳು ಹೇರಳವಾಗಿರುತ್ತವೆ. ಪ್ರತಿನಿತ್ಯ ನಿಯಮಿತವಾಗಿ ಹಣ್ಣುಗಳನ್ನು ಸೇವಿಸುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು.  

Written by - Krishna N K | Last Updated : Sep 18, 2023, 08:40 PM IST
  • ಹಣ್ಣುಗಳಲ್ಲಿ ದೇಹಕ್ಕೆ ಬೇಕಾದ ಪೋಷಕಾಂಶಗಳು ಹೇರಳವಾಗಿರುತ್ತವೆ.
  • ಪ್ರತಿನಿತ್ಯ ನಿಯಮಿತವಾಗಿ ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ಉತ್ತಮ.
  • ಅದರಂತೆ ಅಂಜೂರ ಹಣ್ಣುಗಳನ್ನು ದಿನನಿತ್ಯ ತಿನ್ನುವುದು ಒಳ್ಳೆಯದು.
ಮಧುಮೇಹಿಗಳು ಅಂಜೂರ ಹಣ್ಣುಗಳನ್ನು ತಿನ್ನಬಹುದೇ..? ತಪ್ಪದೇ ತಿಳಿದುಕೊಳ್ಳಬೇಕಾದ ವಿಚಾರ title=

Diabetes control foods : ಒಣ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇವು ಪೋಷಕಾಂಶಗಳಿಂದ ಸಮೃದ್ಧವಾಗಿರುತ್ತವೆ. ಡ್ರೈ ಫ್ರೂಟ್ಸ್‌ಗಳ ಪೈಕಿ ಅಂಜೂರ ಹಣ್ಣು ಕೂಡ ಒಂದು. ಈ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹದ ಸಮಸ್ಯೆಯನ್ನು ತಡೆಯಬಹುದು ಎಂದು ಹೇಳಲಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..

ಒಣ ಹಣ್ಣುಗಳಲ್ಲಿ ಅಂಜೂರಕ್ಕೆ ವಿಶೇಷ ಸ್ಥಾನವಿದೆ. ಇದು ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿರುತ್ತವೆ. ನಿಯಮಿತವಾಗಿ ಇವುಗಳನ್ನು ತಿನ್ನುವುದರಿಂದ ದೇಹಕ್ಕೆ ವಿಟಮಿನ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ದೊರೆಯುತ್ತದೆ. ದಿನಕ್ಕೆ ಕೇವಲ 2-3 ಅಂಜೂರದ ಹಣ್ಣುಗಳನ್ನು ತಿಂದರೆ, ದೇಹಕ್ಕೆ ಬೇಕಾದ ಪೋಷಕಾಂಶಗಳು ಸಿಗುತ್ತವೆ. ಹೊಟ್ಟೆನೋವು, ಮೂತ್ರಪಿಂಡದ ಕಲ್ಲುಗಳು, ಯಕೃತ್ತಿನ ಕಾಯಿಲೆ, ಮೈಗ್ರೇನ್ ಮುಂತಾದ ಸಮಸ್ಯೆಗಳಿಂದ ಬಳಲುತ್ತಿರುವವರು ಅಂಜೂರದ ಹಣ್ಣುಗಳನ್ನು ತಿನ್ನಬಾರದು. 

ಇದನ್ನೂ  ಓದಿ: Health Tips: ದಿನಕ್ಕೆ ಎಷ್ಟು ಮೊಟ್ಟೆ ತಿನ್ನುವುದು ಒಳ್ಳೆಯದು..?

ಅಧಿಕ ತೂಕ ಹೊಂದಿರುವವರು, ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಒಣ ಹಣ್ಣುಗಳು ತುಂಬಾ ಪ್ರಯೋಜನಕಾರಿ. ಇದರಲ್ಲಿನ ನಾರಿನಂಶದಿಂದಾಗಿ ಹೊಟ್ಟೆ ತುಂಬಿದಂತಾಗುತ್ತದೆ. ನಿಮಗೆ ಹಸಿವಾಗುವುದಿಲ್ಲ. ಪರಿಣಾಮವಾಗಿ, ಅತಿಯಾಗಿ ತಿನ್ನುವುದು ಕಡಿಮೆಯಾಗುತ್ತದೆ ಮತ್ತು ತೂಕವನ್ನು ನಿಯಂತ್ರಣಕ್ಕೆ ಬರುತ್ತದೆ. 

ಋತು ಬದಲಾದಂತೆ ಹಲವು ರೀತಿಯ ರೋಗಗಳು ಎದುರಾಗುತ್ತವೆ. ರೋಗನಿರೋಧಕ ಶಕ್ತಿಯ ಕೊರತೆಯಿಂದಾಗಿ ದೇಹ ಹಲವಾರು ವೈರಲ್ ಸೋಂಕುಗಳಿಗೆ ಬಲಿಯಾಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚುವುದರಿಂದ ಋತುಮಾನದ ಜ್ವರ, ನೆಗಡಿ ಮತ್ತು ಕೆಮ್ಮು ನಿವಾರಣೆಯಾಗುತ್ತದೆ. ಆದ್ದರಿಂದ ಪ್ರತಿದಿನ ನಿಯಮಿತವಾಗಿ ಅಂಜೂರದ ಹಣ್ಣುಗಳನ್ನು ತಿನ್ನುವುದುದು ಒಳ್ಳೆಯದು.

ಇದನ್ನೂ  ಓದಿ: ಕೆಲವೇ ದಿನಗಳಲ್ಲಿ ತೂಕ ಇಳಿಕೆ ಮಾಡಿಕೊಳ್ಳಬೇಕೆ? ಈ ಸ್ಪೆಷಲ್ ಸ್ಪ್ರೌಟ್ಸ್ ದೋಸೆ ನಿಮ್ಮ ಬೆಳಗಿನ ಉಪಹಾರದಲ್ಲಿರಲಿ!

ಎಲ್ಲಕ್ಕಿಂತ ಹೆಚ್ಚಾಗಿ, ಇದು ಮಧುಮೇಹ ರೋಗಿಗಳಿಗೆ ಅತ್ಯುತ್ತಮವಾಗಿದೆ ಎಂದು ಹೇಳಬಹುದು. ಅಂಜೂರವು 60 ರವರೆಗಿನ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತದೆ. ಮಧುಮೇಹ ರೋಗಿಗಳಿಗೆ ಇದು ಅತ್ಯಗತ್ಯ. ಅದರ ಕ್ಲೋರೊಜೆನಿಕ್ ಆಮ್ಲದ ಕಾರಣದಿಂದಾಗಿ ಟೈಪ್ 2 ಮಧುಮೇಹ ರೋಗಿಗಳಿಗೆ ಇದು ತುಂಬಾ ಒಳ್ಳೆಯದು, ಅಲ್ಲದೆ, ಚಯಾಪಚಯವನ್ನು ಹೆಚ್ಚಿಸುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News