ಈ ಐದು ಕಾಯಿಲೆಗಳನ್ನು ಬುಡದಿಂದಲೇ ಕಿತ್ತು ಹಾಕುತ್ತದೆ ತೊಂಡೆಕಾಯಿ !

Health Benefits Of Ivy gourd : ತೊಂಡೆಕಾಯಿ ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಇದನ್ನು ಸೇವಿಸುವುದರಿಂದ ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಕೂಡಾ ಕಡಿಮೆ ಮಾಡಬಹುದು. 

Written by - Ranjitha R K | Last Updated : May 17, 2024, 04:38 PM IST
  • ತೊಂಡೆಕಾಯಿ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ.
  • ಇದನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳು ಸಿಗುತ್ತವೆ.
  • ಅನೇಕ ಗಂಭೀರ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ
ಈ ಐದು ಕಾಯಿಲೆಗಳನ್ನು ಬುಡದಿಂದಲೇ ಕಿತ್ತು ಹಾಕುತ್ತದೆ ತೊಂಡೆಕಾಯಿ ! title=

Benefits Of Ivy gourd : ತಾಜಾ ಹಣ್ಣುಗಳು ಮತ್ತು ಹಸಿರು ತರಕಾರಿಗಳ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.ಅಂಥಹ ಒಂದು ತರಕಾರಿ ತೊಂಡೆಕಾಯಿ.ಇದು ತಿನ್ನಲು ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ.ಕೆಲವು ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡುವಂಥಹ ಅನೇಕ ಪೋಷಕಾಂಶಗಳು ತೊಂಡೆಕಾಯಿಯಲ್ಲಿ  ಕಂಡುಬರುತ್ತವೆ. ಜೀವಸತ್ವಗಳು,ಕ್ಯಾಲ್ಸಿಯಂ, ಪೊಟ್ಯಾಸಿಯಮ್,ಕಬ್ಬಿಣ, ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಪೋಷಕಾಂಶಗಳು ತೊಂಡೆಕಾಯಿಯಲ್ಲಿ ಹೇರಳವಾಗಿ ಕಂಡುಬರುತ್ತವೆ.ಇದನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಇದನ್ನು ಸೇವಿಸುವುದರಿಂದ ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಕೂಡಾ ಕಡಿಮೆ ಮಾಡಬಹುದು. 

ಮಧುಮೇಹದಲ್ಲಿ ಪ್ರಯೋಜನಕಾರಿ : 
ತೊಂಡೆಕಾಯಿ ಮಧುಮೇಹ ರೋಗಿಗಳಿಗೆ ಬಹಳ ಪ್ರಯೋಜನಕಾರಿ.ಇದು ಮಧುಮೇಹ ವಿರೋಧಿ ಪರಿಣಾಮವನ್ನು ಹೊಂದಿದೆ.ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಇದು ಸಹಾಯ ಮಾಡುತ್ತದೆ.ಗ್ಲುಕೋಸ್-6-ಫಾಸ್ಫೇಟ್,ಪಾಲಿಪೆಪ್ಟೈಡ್-ಪಿ ನಂತಹ ಸಂಯುಕ್ತಗಳನ್ನು ತೊಂಡೆಕಾಯಿ ಹೊಂದಿರುತ್ತದೆ.ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ : Boiled Eggs: ಪ್ರತಿದಿನ ಬೆಳಗಿನ ಉಪಹಾರದ ಜೊತೆಗೆ ಬೇಯಿಸಿದ ಮೊಟ್ಟೆಯನ್ನು ಸೇವಿಸಿದರೆ ಆರೋಗ್ಯಕ್ಕೆ ಉತ್ತಮ..!

ತೂಕ ನಷ್ಟಕ್ಕೆ ಸಹಾಯಕ : 
ತೂಕ ಇಳಿಸಿಕೊಳ್ಳಲು ಬಯಸುವವರು ಆಹಾರದಲ್ಲಿ ತೊಂಡೆಕಾಯಿ  ಸೇರಿಸಿಕೊಳ್ಳಬಹುದು.ಅದರಲ್ಲಿ ಕ್ಯಾಲೋರಿಗಳ ಪ್ರಮಾಣವು ತುಂಬಾ ಕಡಿಮೆಯಾಗಿದ್ದು, ಫೈಬರ್ ಹೇರಳವಾಗಿರುತ್ತದೆ.ಇದನ್ನು ಸೇವಿಸುವುದರಿಂದ ಚಯಾಪಚಯವನ್ನು ಹೆಚ್ಚುತ್ತದೆ. ಇದು ಕೊಬ್ಬನ್ನು ವೇಗವಾಗಿ ಕರಗಿಸಲು ಸಹಾಯ ಮಾಡುತ್ತದೆ. ತೊಂಡೆಕಾಯಿ ತಿನ್ನುವುದರಿಂದ ತೂಕ ನಿಯಂತ್ರಣದಲ್ಲಿರುತ್ತದೆ.

ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ : 
ತೊಂಡೆಕಾಯಿ ಸೇವನೆಯು ನಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.   ಇದು ಹೇರಳವಾಗಿ ಫೈಬರ್ ಅನ್ನು ಹೊಂದಿದ್ದು, ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.ಇದರ ನಿಯಮಿತ ಸೇವನೆಯು ಮಲಬದ್ಧತೆ, ಗ್ಯಾಸ್, ಹೊಟ್ಟೆ ನೋವು ಮತ್ತು ಸೆಳೆತದಂತಹ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.

ಇದನ್ನೂ ಓದಿ : ಒಂದು ಲೋಟ ನಿಂಬೆ ಜ್ಯೂಸ್ ಗೆ ಅರ್ಧ ಚಮಚ ಈ ಪುಡಿ ಬೆರೆಸಿ ಕುಡಿದರೆ ತಕ್ಷಣ ನಾರ್ಮಲ್ ಆಗುವುದು ಬ್ಲಡ್ ಶುಗರ್ !

ರೋಗನಿರೋಧಕ ಶಕ್ತಿ : 
ತೊಂಡೆಕಾಯಿಯಲ್ಲಿ ಕ್ಯಾಲ್ಸಿಯಂ,ಕಬ್ಬಿಣ,ಪೊಟ್ಯಾಸಿಯಮ್ ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಪೋಷಕಾಂಶಗಳು ಹೇರಳವಾಗಿ ಕಂಡುಬರುತ್ತವೆ.  ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಇದರ ಸೇವನೆಯು ದೇಹಕ್ಕೆ ಸಾಕಷ್ಟು ಪೋಷಣೆಯನ್ನು ನೀಡುವುದಲ್ಲದೆ, ಅನೇಕ ಗಂಭೀರ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

ಹೃದಯದ ಆರೋಗ್ಯ : 
ತೊಂಡೆಕಾಯಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಇದರಲ್ಲಿ ಅನೇಕ ರೀತಿಯ ಫ್ಲೇವನಾಯ್ಡ್‌ಗಳು ಮತ್ತು ಆಂಟಿಆಕ್ಸಿಡೆಂಟ್‌ಗಳು ಇರುತ್ತವೆ.ಇದು ಫ್ರೀ  ರಾಡಿಕಲ್‌ಗಳನ್ನು ನಾಶಮಾಡುವ ಕೆಲಸ ಮಾಡುತ್ತದೆ. ಇದರ ನಿಯಮಿತ ಸೇವನೆಯು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

(ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News