Cholesterol: ಈ ಆಹಾರ ಪದಾರ್ಥಗಳ ಸೇವನೆಯಿಂದ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ, ಎಚ್ಚರ!

Cholesterol: ಕೆಲ ಆಹಾರ ಪದಾರ್ಥಗಳ ಸೇವನೆಯಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟ ಗಣನೀಯ ಏರಿಕೆಯಾಗುವ ಅಪಾಯ ಹೆಚ್ಚಾಗಿರುತ್ತದೆ. ಹೀಗಿರುವಾಗ ನೀವೂ ಕೂಡ ಹಲವು ರೀತಿಯ ಸಲಹೆಗಳನ್ನು ಅನುಸರಿಸಬೇಕಾಗುತ್ತದೆ. ಇಲ್ಲದೆ ಹೋದರೆ ದೇಹದಲ್ಲಿ ಹೃದಯಾಘಾತದ ಅಪಾಯ ಹೆಚ್ಚಾಗುತ್ತದೆ.   

Written by - Nitin Tabib | Last Updated : Jun 13, 2022, 01:04 PM IST
  • ಕೆಲ ಆಹಾರ ಪದಾರ್ಥಗಳ ಸೇವನೆಯಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟ ಗಣನೀಯ ಏರಿಕೆಯಾಗುವ ಅಪಾಯ ಹೆಚ್ಚಾಗಿರುತ್ತದೆ.
  • ಹೀಗಿರುವಾಗ ನೀವೂ ಕೂಡ ಹಲವು ರೀತಿಯ ಸಲಹೆಗಳನ್ನು ಅನುಸರಿಸಬೇಕಾಗುತ್ತದೆ.
  • ಇಲ್ಲದೆ ಹೋದರೆ ದೇಹದಲ್ಲಿ ಹೃದಯಾಘಾತದ ಅಪಾಯ ಹೆಚ್ಚಾಗುತ್ತದೆ.
Cholesterol: ಈ ಆಹಾರ ಪದಾರ್ಥಗಳ ಸೇವನೆಯಿಂದ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ, ಎಚ್ಚರ! title=
High Cholesterol

Cholesterol: ಒಂದೊಮ್ಮೆ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದರೆ ಅದು  ಹಲವು ರೀತಿಯ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಇದನ್ನು ತಪ್ಪಿಸಲು ನಮ್ಮ ಜೀವನಶೈಲಿಯನ್ನು ನಾವು ಬದಲಾಯಿಸಿಕೊಳ್ಳಬೇಕು . ಇಲ್ಲದಿದ್ದರೆ ನಂತರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ನಮ್ಮ ಕೆಟ್ಟ ಆಹಾರ ಪದ್ಧತಿಯಿಂದಾಗಿ ಈ ರೀತಿಯ ಸಮಸ್ಯೆಗಳು ಉಂಟಾಗುತ್ತವೆ. ಕೆಲವು ವಸ್ತುಗಳ ಸೇವನೆಯಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಗಣನೀಯ ಹೆಚ್ಚಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಹೌದು, ನಾವು ಅಂತಹ ಆಹಾರಗಳಿಂದ ದೂರವಿರಬೇಕು ಇಲ್ಲದೆ ಹೋದಲ್ಲಿ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಿ ಸಮಸ್ಯೆಗಳು ಎದುರಾಗಬಹುದು.

1. ಸಂಸ್ಕರಿಸಿದ ಮಾಂಸ ಸೇವನೆಯಿಂದ ದೂರವಿರಿ
ಸಂಸ್ಕರಿಸಿದ ಮಾಂಸವು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಿ, ದೇಹದಲ್ಲಿ ಆರೋಗ್ಯ ಸಮಸ್ಯೆಗಳ ಹೆಚ್ಚಳಕ್ಕೂ ಕೂಡ ಕಾರಣವಾಗುತ್ತದೆ. ಹೀಗಿರುವಾಗ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ನಿಭಾಯಿಸಲು ನಿಮ್ಮ ಆಹಾರದಿಂದ ಸಂಸ್ಕರಿಸಿದ ಮಾಂಸವನ್ನು ನೀವು ತೆಗೆದುಹಾಕಬೇಕು, ಇಲ್ಲದಿದ್ದರೆ ಹೃದಯಾಘಾತದ ಅಪಾಯವು ಹೆಚ್ಚಾಗಬಹುದು.

2. ಡೈರಿ ಉತ್ಪನ್ನಗಳಿಂದ ದೂರವಿರಿ
ಕೆಲವರು ಡೈರಿ ಉತ್ಪನ್ನಗಳ ಮೇಲೆ ತುಂಬಾ ಅವಲಂಬಿತರಾಗಿರುತ್ತಾರೆ, ಅವರು ತಿಂಗಳಲ್ಲಿ 24 ದಿನಗಳವರೆಗೆ ಡೈರಿ ಉತ್ಪನ್ನಗಳನ್ನು ಸೇವಿಸುತ್ತಾರೆ, ಆದರೆ ಹೀಗೆ ಮಾಡುವುದರಿಂದ ಅವರು ತಮ್ಮ ಆರೋಗ್ಯದ ಜೊತೆಗೆ ಚಲ್ಲಾಟವಾಡಿದಂತೆಯೇ ಸರಿ. ಅದು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಹದಗೆಡಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಡೈರಿ ಉತ್ಪನ್ನಗಳಿಂದ ಆದಷ್ಟು ದೂರವಿರಿ.

ಕೊಲೆಸ್ಟ್ರಾಲ್ ಹೆಚ್ಚಾದಾಗ ಈ ಲಕ್ಷಣಗಳು ದೇಹದಲ್ಲಿ ಕಾಣಿಸಿಕೊಳ್ಳುತ್ತವೆ
>> ಎದೆ ನೋವು ಕೂಡ ಅಧಿಕ ಕೊಲೆಸ್ಟ್ರಾಲ್‌ನ ಲಕ್ಷಣವಾಗಿದೆ. ನಿಮಗೆ ಪದೇ ಪದೇ ಈ ಸಮಸ್ಯೆ ಇದ್ದರೆ, ಅದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಇಲ್ಲದಿದ್ದರೆ ನಿಮ್ಮ ತೊಂದರೆ ನಂತರ ಹೆಚ್ಚಾಗಬಹುದು.
>> ಬೊಜ್ಜು ಕೂಡ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯ ಲಕ್ಷಣವಾಗಿದೆ. ನಿಮ್ಮ ತೂಕ ನಿರಂತರವಾಗಿ ಹೆಚ್ಚಾಗುತ್ತಿದ್ದರೆ, ನೀವು ವೈದ್ಯರನ್ನು ಸಂಪರ್ಕಿಸಬೇಕು ಮತ್ತು ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು.

ಇದನ್ನೂ ಓದಿ-Hing Benefits: ಈ ಮೂರು ಸಮಸ್ಯೆಗಳಿಂದ ಸಂಪೂರ್ಣ ಪರಿಹಾರ ನೀಡುತ್ತದೆ ಅಡುಗೆ ರುಚಿ ಹೆಚ್ಚಿಸುವ ಇಂಗು

>> ನಿಮ್ಮ ಪಾದಗಳಲ್ಲಿ ನೋವು ಇದ್ದರೆ, ತಕ್ಷಣ ಎಚ್ಚೆತ್ತುಕೊಳ್ಳಿ, ಏಕೆಂದರೆ ಅದು ನಿಮ್ಮ ಸಮಸ್ಯೆಯನ್ನು ಹೆಚ್ಚಿಸಬಹುದು. ವಾಸ್ತವದಲ್ಲಿ ಅದು ಅಧಿಕ ಕೊಲೆಸ್ಟ್ರಾಲ್ನ ಲಕ್ಷಣವಾಗಿದ್ದು, ನಿಮ್ಮ ತೊಂದರೆಯನ್ನು ಹೆಚ್ಚಿಸಬಹುದು. ಇಂತಹ ಪರಿಸ್ಥಿತಿಯಲ್ಲಿ, ನೀವು ಈ ನೋವನ್ನು ಲಘುವಾಗಿ ತೆಗೆದುಕೊಳ್ಳಬಾರದು.

ಇದನ್ನೂ ಓದಿ-Coriander Leaves Benefits: ಹೃದಯದ ಆರೋಗ್ಯಕ್ಕೆ ಮಾತ್ರವಲ್ಲ ಈ ಸಮಸ್ಯೆಗಳಿಗೂ ಪರಿಹಾರ ನೀಡುತ್ತೆ ಕೊತ್ತಂಬರಿ ಸೊಪ್ಪು

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಮತ್ತು ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯರ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News