ಆರ್ಟಿಕಲ್ 370 ರದ್ದತಿ ನಂತರ ಕಾಶ್ಮೀರದಲ್ಲಿ 366 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ: MoS ನಿತ್ಯಾನಂದ ರೈ

370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ 366 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಬುಧವಾರ ರಾಜ್ಯಸಭೆಗೆ ತಿಳಿಸಿದರು.

Edited by - Zee Kannada News Desk | Last Updated : Dec 8, 2021, 05:14 PM IST
  • 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ 366 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ
  • ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ರಾಜ್ಯಸಭೆಗೆ ಮಾಹಿತಿ
ಆರ್ಟಿಕಲ್ 370 ರದ್ದತಿ ನಂತರ ಕಾಶ್ಮೀರದಲ್ಲಿ 366 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ: MoS ನಿತ್ಯಾನಂದ ರೈ title=
MoS ನಿತ್ಯಾನಂದ ರೈ

ನವದೆಹಲಿ: 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ 366 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಬುಧವಾರ ರಾಜ್ಯಸಭೆಗೆ ತಿಳಿಸಿದರು.

2019 ರ ಆಗಸ್ಟ್ 5 ರಂದು 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ 2021 ರ ನವೆಂಬರ್ 30 ರವರೆಗೆ ಕಾಶ್ಮೀರದಲ್ಲಿ 81 ಭದ್ರತಾ ಪಡೆಗಳು ಹುತಾತ್ಮರಾಗಿದ್ದರೆ, 366 ಭಯೋತ್ಪಾದಕರು ಕೊಲ್ಲಲ್ಪಟ್ಟರು, 96 ನಾಗರಿಕರು ಸಹ ಪ್ರಾಣ ಕಳೆದುಕೊಂಡರು ಮತ್ತು 81 ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ಅವರ ಪ್ರಶ್ನೆಗೆ ರಾಯ್ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದರು.

ಆರ್ಟಿಕಲ್ 370 ರ ನಂತರ ಯಾವುದೇ ಕಾಶ್ಮೀರಿ ಪಂಡಿತ/ಹಿಂದೂ ಕಣಿವೆಯಿಂದ ಸ್ಥಳಾಂತರಗೊಂಡಿಲ್ಲ ಎಂದು ರಾಯ್ ಮೇಲ್ಮನೆಗೆ ತಿಳಿಸಿದರು. ಆದಾಗ್ಯೂ, ಇತ್ತೀಚೆಗೆ ಕಾಶ್ಮೀರದಲ್ಲಿ ವಾಸಿಸುವ ಕೆಲವು ಕಾಶ್ಮೀರಿ ಪಂಡಿತ್ ಕುಟುಂಬಗಳು, ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಜಮ್ಮು ಪ್ರದೇಶಕ್ಕೆ ತೆರಳಿದ್ದಾರೆ. ಈ ಕುಟುಂಬಗಳು ಚಳಿಗಾಲದ ರಜೆಯ ಭಾಗವಾಗಿ ಚಳಿಗಾಲದಲ್ಲಿ ಜಮ್ಮುವಿಗೆ ತೆರಳುತ್ತಾರೆ ಎಂದು ಅವರು ಹೇಳಿದರು. 

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ  ವಿಧಿಯನ್ನು 2019 ರ ಆಗಸ್ಟ್ 5 ರಂದು ರದ್ದುಗೊಳಿಸಲಾಯಿತು. ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ) ಅಧ್ಯಕ್ಷ ಮತ್ತು ಸಂಸತ್ ಸದಸ್ಯ ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಜನರ ಸಂಕ್ಷಿಪ್ತ ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ಮರುಸ್ಥಾಪನೆಗಾಗಿ ಹೋರಾಟ ನಡೆಸಿದರು. ಆದರೆ ಯಾವುದಕ್ಕೂ ಬಗ್ಗದ ಕೇಂದ್ರ ಸರ್ಕಾರ ಅದನ್ನು ಅನುಷ್ಥಾನ ಮಾಡುವಲ್ಲಿ ಯಶಸ್ವಿಯಾಯಿತು.

ಇದನ್ನೂ ಓದಿ: ರೈತರಗೆ ಸಿಹಿ ಸುದ್ದಿ : ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಿಗಲಿದೆ ಶೇ.50 ರಷ್ಟು ಸಬ್ಸಿಡಿ!

ಭಾರತೀಯ ಸಂವಿಧಾನದ  370ನೇ ವಿಧಿಯು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಸ್ವಾಯತ್ತ ಸ್ಥಾನಮಾನವನ್ನು ನೀಡುವ ವಿಧಿಯಾಗಿತ್ತು. 370 ನೇ ವಿಧಿಯನ್ನು ರದ್ದುಪಡಿಸುವ ವಿಧೇಯಕವನ್ನು ಆಗಸ್ಟ್ 5, 2019 ರಂದು ಕೇಂದ್ರ ಗೃಹಸಚಿವ ಅಮಿತ್ ಶಾ ಮಂಡಿಸಿದರು. ವಿಧೇಯಕಕ್ಕೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರಕಿತು.'=

ಜಮ್ಮುಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಯೂ, ಲಡಾಖ್ ಪ್ರದೇಶವನ್ನು ಮತ್ತೊಂದು ಕೇಂದ್ರಾಡಳಿತಪ್ರದೇಶವನ್ನಾಗಿಯೂ ಪರಿಗಣಿಸುವ ವಿಧಿಯೂ ಅಂಗೀಕೃತವಾಯಿತು. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ, 35ಎ ವಿಧಿಯನ್ನು ರದ್ದುಪಡಿಸುವ ಶಿಫಾರಸಿಗೆ ಸುಗ್ರೀವಾಜ್ಞೆ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದರು. 

Trending News