ಹೂಗ್ಲಿಯಲ್ಲಿ ಪ್ರಪಾತಕ್ಕೆ ಬಿದ್ದ ಬಸ್; 6 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಕೋಲ್ಕತ್ತಾ ಕಡೆಗೆ ತೆರಳುತ್ತಿದ್ದ ಬಸ್ ಹೂಗ್ಲಿಯ ಸೇತುವೆಯ ತದೆಗೊದೆಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

Last Updated : Oct 16, 2018, 06:22 PM IST
ಹೂಗ್ಲಿಯಲ್ಲಿ ಪ್ರಪಾತಕ್ಕೆ ಬಿದ್ದ ಬಸ್; 6 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ title=
Pic: ANI

ಹೂಗ್ಲಿ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಹರಿಪುರ್ ಪ್ರದೇಶದಲ್ಲಿ ಮಂಗಳವಾರ ಒಂದು ಬಸ್ ಕಾಲುವೆಗೆ ಬಿದ್ದಿದ್ದು, ಕನಿಷ್ಠ ಆರು ಸಾವು ಸಂಭವಿಸಿದೆ ಎಂದು ವರದಿಯಾಗಿದೆ. ಇದಲ್ಲದೆ, ಸುಮಾರು 22 ಮಂದಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ. 

ಕೋಲ್ಕತ್ತಾ ಕಡೆಗೆ ತೆರಳುತ್ತಿದ್ದ ಬಸ್ ಹೂಗ್ಲಿಯ ಸೇತುವೆಯ ತದೆಗೊದೆಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಸುಖೇಶ್ ಜೈನ್ ತಿಳಿಸಿದ್ದಾರೆ.

ಅಪಘಾತದಲ್ಲಿ ಕನಿಷ್ಠ 22 ಪ್ರಯಾಣಿಕರು ಗಾಯಗೊಂಡಿದ್ದಾರೆ, ಅದರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾಯಗೊಂಡ ಎಲ್ಲರನ್ನು ಹರಿಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

Trending News