ಕರ್ನಾಟಕದ ಸೋಲಿನ ನಂತರ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕಾರ್ಯತಂತ್ರ ಬದಲಾಯಿಸಲು ಮುಂದಾದ ಬಿಜೆಪಿ 

ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿರುವ ಬೆನ್ನಲ್ಲೇ ಈಗ ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣೆಗಳು  ನಡೆಯುವುದರಿಂದಾಗಿ ಈಗ ಅಲ್ಲಿ ಬಿಜೆಪಿ ತನ್ನ ಪ್ರಚಾರದ ಮಾದರಿಯನ್ನು ಬದಲಾಯಿಸಲು ಮುಂದಾಗಿದೆ.

Written by - Zee Kannada News Desk | Last Updated : May 15, 2023, 09:12 PM IST
  • ಅಗತ್ಯವಿದ್ದರೆ, ಪಕ್ಷವು ಸಣ್ಣ ಪಕ್ಷಗಳೊಂದಿಗೆ ಚುನಾವಣಾ ಮೈತ್ರಿಗೆ ಮುಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
  • ಕೇಂದ್ರ ನಾಯಕರು ಮತ್ತು ರಾಜ್ಯ ಮುಖ್ಯಮಂತ್ರಿಗಳ ಮೇಲಿನ ಅಗಾಧ ಅವಲಂಬನೆಯ ಬದಲಿಗೆ ಸ್ಥಳೀಯ ನಾಯಕರ ಮೇಲೆ ಕೇಂದ್ರೀಕರಿಸುವುದು ಎನ್ನಲಾಗಿದೆ.
ಕರ್ನಾಟಕದ ಸೋಲಿನ ನಂತರ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕಾರ್ಯತಂತ್ರ ಬದಲಾಯಿಸಲು ಮುಂದಾದ ಬಿಜೆಪಿ  title=
file photo

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿರುವ ಬೆನ್ನಲ್ಲೇ ಈಗ ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣೆಗಳು  ನಡೆಯುವುದರಿಂದಾಗಿ ಈಗ ಅಲ್ಲಿ ಬಿಜೆಪಿ ತನ್ನ ಪ್ರಚಾರದ ಮಾದರಿಯನ್ನು ಬದಲಾಯಿಸಲು ಮುಂದಾಗಿದೆ.

ಇವುಗಳಲ್ಲಿ, ಮಧ್ಯಪ್ರದೇಶದಲ್ಲಿ ಮಾತ್ರ ಬಿಜೆಪಿ ಆಡಳಿತದಲ್ಲಿದೆ.ನಾಲ್ಕು ರಾಜ್ಯಗಳಲ್ಲಿ ನಾಯಕತ್ವ ಮತ್ತು ಅಭ್ಯರ್ಥಿಗಳನ್ನು ನಿರ್ಧರಿಸುವಾಗ ಜಾತಿ ಸಮೀಕರಣಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲು ಬಿಜೆಪಿ ನಿರ್ಧರಿಸಿದೆ ಎಂದು ಪಕ್ಷದ ಹಿರಿಯ ನಾಯಕರು ಆಫ್ ದಿ ರೆಕಾರ್ಡ್ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನು ಉನ್ನತ ಹುದ್ದೆಯಿಂದ ತೆಗೆದುಹಾಕುವ ಮತ್ತು ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸದಾವಿ ಅವರಿಗೆ ಟಿಕೆಟ್ ನಿರಾಕರಿಸುವ ನಿರ್ಧಾರವು ಲಿಂಗಾಯತರನ್ನು ಕಾಂಗ್ರೆಸ್ ಕಡೆಗೆ ಮುಖ ಮಾಡುವಂತೆ ಮಾಡಿತ್ತು.ಈ ಹಿನ್ನೆಲೆಯಲ್ಲಿ ಈಗ ಬಿಜೆಪಿ ಎಚ್ಚೆತ್ತುಕೊಂಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಉಚಿತ ಭರವಸೆ: ನಾವು ಬಿಲ್ ಕಟ್ಟಲ್ಲವೆಂದು ಬೆಸ್ಕಾಂ ಮೀಟರ್ ರೀಡರ್ ಗೆ ಗ್ರಾಮಸ್ಥರ ಆವಾಜ್!

ಅಗತ್ಯವಿದ್ದರೆ, ಪಕ್ಷವು ಸಣ್ಣ ಪಕ್ಷಗಳೊಂದಿಗೆ ಚುನಾವಣಾ ಮೈತ್ರಿಗೆ ಮುಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ. ದೊಡ್ಡ ಬದಲಾವಣೆಯೆಂದರೆ, ಕೇಂದ್ರ ನಾಯಕರು ಮತ್ತು ರಾಜ್ಯ ಮುಖ್ಯಮಂತ್ರಿಗಳ ಮೇಲಿನ ಅಗಾಧ ಅವಲಂಬನೆಯ ಬದಲಿಗೆ ಸ್ಥಳೀಯ ನಾಯಕರ ಮೇಲೆ ಕೇಂದ್ರೀಕರಿಸುವುದು ಎನ್ನಲಾಗಿದೆ.

ಮೂಲಗಳ ಪ್ರಕಾರ ಮಧ್ಯಪ್ರದೇಶದಲ್ಲಿ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪಕ್ಷದ ಮುಖವಾಗಿ ಉಳಿಯುತ್ತಾರೆ, ಆದರೆ ಅವರೊಂದಿಗೆ ಜ್ಯೋತಿರಾದಿತ್ಯ ಸಿಂಧಿಯಾ, ನರೇಂದ್ರ ಸಿಂಗ್ ತೋಮರ್ ಮತ್ತು ಬಿಡಿ ಶರ್ಮಾ ಅವರಂತಹ ಇತರ ನಾಯಕರನ್ನು ಗಣನೆಗೆ ತೆಗೆದುಕೊಳ್ಳುವಂತೆ ಕೇಳಿಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನದಲ್ಲಿ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಗೆ ಆದ್ಯತೆ ನೀಡಲಾಗುವುದು.ಜೊತೆಗೆ ಕಿರೋರಿ ಲಾಲ್ ಮೀನಾ, ಗಜೇಂದ್ರ ಸಿಂಗ್ ಶೇಖಾವತ್, ಸತೀಶ್ ಪೂನಿಯಾ ಮುಂತಾದ ವಿವಿಧ ಜಾತಿ ಗುಂಪುಗಳಿಗೆ ಸೇರಿದ ರಾಜ್ಯ ನಾಯಕರಿಗೂ ಪ್ರಾಮುಖ್ಯತೆ ನೀಡಲಾಗುವುದು.

ಛತ್ತೀಸ್‌ಗಢದಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್, ಹಿರಿಯ ನಾಯಕ ಬ್ರಿಜ್‌ಮೋಹನ್ ಅಗರವಾಲ್, ಅರುಣ್ ಸಾವೊ ಅವರಿಗೆ ಪ್ರಾಮುಖ್ಯತೆ ನೀಡಲಾಗುವುದು ಮತ್ತು ತೆಲಂಗಾಣದಲ್ಲಿ ಬಂಡಿ ಸಜಯ್, ಇ ರಾಜೇಂದ್ರನ್, ಜಿ ಕಿಶನ್ ರೆಡ್ಡಿ ಅವರು ಪಕ್ಷದ ಪ್ರಮುಖ ಮುಖಗಳಾಗಿದ್ದಾರೆ.ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಮತ್ತು ಪಕ್ಷದ ಒಗ್ಗಟ್ಟಿನ ಮುಖವನ್ನು ಪ್ರಸ್ತುತಪಡಿಸಲು ರಾಜ್ಯ ನಾಯಕರನ್ನು ಕೇಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Karnataka CM Race: ಬಹುಮತದಿಂದ ಗೆಲ್ಲಿಸಿದ್ದಾರೆ ಇದಕ್ಕಿಂತ ದೊಡ್ಡ ಉಡುಗೊರೆ ನಿರೀಕ್ಷಿಸಲು ಸಾಧ್ಯವೇ - ಡಿ.ಕೆ. ಶಿ

ಅಲ್ಲದೆ, ಚುನಾವಣಾ ರಣತಂತ್ರ ರೂಪಿಸಲು ಸಾಮೂಹಿಕ ನೆಲೆ ಹೊಂದಿರುವ ಹಿರಿಯ ನಾಯಕರನ್ನು ಕಣಕ್ಕಿಳಿಸಲಾಗುವುದು. ಮಧ್ಯಪ್ರದೇಶದಲ್ಲಿ ಸರ್ಕಾರ ಮತ್ತು ಸಂಘಟನೆಯ ನಡುವೆ ಉತ್ತಮ ಸಮನ್ವಯತೆ ಇರುತ್ತದೆ. ಗ್ರೌಂಡ್ ಲೆವಲ್ ಕಾರ್ಯಕರ್ತರಿಗೆ ಪ್ರಾಮುಖ್ಯತೆ ನೀಡಲಾಗುವುದು. ಸಮಸ್ಯೆಗಳು, ಭರವಸೆಗಳು ಮತ್ತು ಕಾರ್ಯತಂತ್ರವನ್ನು ನಿರ್ಧರಿಸುವಲ್ಲಿ ಅವರ ಪ್ರತಿಕ್ರಿಯೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮೂಲಗಳು ತಿಳಿಸಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

\

Trending News