ಕ್ರಿಮಿನಲ್ ಮಾನಹಾನಿ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು ನೀಡಿದ ಅಹ್ಮದಾಬಾದ್ ಕೋರ್ಟ್

 ಅಹ್ಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್ ಮತ್ತು ಅದರ ಅಧ್ಯಕ್ಷ ಅಜಯ್ ಪಟೇಲ್ ಅವರು ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಿದ್ದ ಎರಡು ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಈಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಶುಕ್ರವಾರ ಮೆಟ್ರೋಪಾಲಿಟನ್ ನ್ಯಾಯಾಲಯ ಜಾಮೀನು ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಜರಾಗಲು ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಆಗಮಿಸಿದ್ದರು.

Last Updated : Jul 12, 2019, 04:54 PM IST
ಕ್ರಿಮಿನಲ್ ಮಾನಹಾನಿ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು ನೀಡಿದ ಅಹ್ಮದಾಬಾದ್ ಕೋರ್ಟ್  title=

ನವದೆಹಲಿ: ಅಹ್ಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್ ಮತ್ತು ಅದರ ಅಧ್ಯಕ್ಷ ಅಜಯ್ ಪಟೇಲ್ ಅವರು ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಿದ್ದ ಎರಡು ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಈಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಶುಕ್ರವಾರ ಮೆಟ್ರೋಪಾಲಿಟನ್ ನ್ಯಾಯಾಲಯ ಜಾಮೀನು ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಜರಾಗಲು ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಆಗಮಿಸಿದ್ದರು.

ಈ ಹಿಂದಿನ ದಿನ ಆರ್ಎಸ್ಎಸ್ ಮತ್ತು ಬಿಜೆಪಿಯಲ್ಲಿನ ರಾಜಕೀಯ ವಿರೋಧಿಗಳು ತಮ್ಮ ವಿರುದ್ಧ ಸಲ್ಲಿಸಿದ ಮತ್ತೊಂದು ಪ್ರಕರಣದಲ್ಲಿ ಹಾಜರಾಗಲಿದ್ದಾರೆ ಎಂದು ಟ್ವೀಟ್ ಮೂಲಕ ರಾಹುಲ್ ಗಾಂಧಿ ತಿಳಿಸಿದ್ದರು. "ಆರ್‌ಎಸ್‌ಎಸ್ / ಬಿಜೆಪಿಯಲ್ಲಿನ ನನ್ನ ರಾಜಕೀಯ ವಿರೋಧಿಗಳು ನನ್ನ ವಿರುದ್ಧ ಸಲ್ಲಿಸಿದ ಮತ್ತೊಂದು ಪ್ರಕರಣದಲ್ಲಿ ಹಾಜರಾಗಲು ನಾನು ಇಂದು ಅಹಮದಾಬಾದ್‌ನಲ್ಲಿದ್ದೇನೆ. ಈ ವೇದಿಕೆಗಳು ಅವರ ವಿರುದ್ಧದ ನನ್ನ ಸೈದ್ಧಾಂತಿಕ ಯುದ್ಧವನ್ನು ಸಾರ್ವಜನಿಕರ ಬಳಿಗೆ ಕೊಂಡೊಯ್ಯುವ ಅವಕಾಶ ಒದಗಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳು. ಸತ್ಯಮೇವ ಜಯತೆ," ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಆಗಸ್ಟ್ ನಲ್ಲಿ ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್ (ಎಡಿಸಿಬಿ) ಕೇವಲ ಐದು ದಿನಗಳಲ್ಲಿ 745.58 ಕೋಟಿ ರೂ.ಗಳನ್ನು ವಿನಿಮಯ ಮಾಡಿಕೊಂಡಿದೆ ಎಂದು ಹೇಳಿದ್ದಕ್ಕಾಗಿ ಅವರ ವಿರುದ್ಧ ಎರಡು ಪ್ರತ್ಯೇಕ ಕ್ರಿಮಿನಲ್ ಮಾನಹಾನಿ ಪ್ರಕರಣಗಳನ್ನು ದಾಖಲಿಸಲಾಗಿದೆ.ನೋಟು ನಿಷೆಧಿಕರಣ ಚಾಲನೆ ಜಾರಿಗೆ ಬಂದ ಕೇವಲ ಐದು ದಿನಗಳಲ್ಲಿ, ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದ 11 ಜಿಲ್ಲಾ ಕಾರ್ಪೊರೇಟ್ ಬ್ಯಾಂಕುಗಳಲ್ಲಿ 3,118 ಕೋಟಿ ರೂ. ಠೇವಣಿ ಮಾಡಲಾಗಿದೆ. ಅವುಗಳಲ್ಲಿ ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್,  ಒಂದು ಇದರ ನಿರ್ದೇಶಕರು ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಎಂದು ಸುರ್ಜೆವಾಲಾ ಹೇಳಿದ್ದರು.

Trending News