ಈ ರಾಜ್ಯದಲ್ಲಿ ಸೆಪ್ಟೆಂಬರ್ 5ರಿಂದ ಶಾಲೆಗಳನ್ನು ತೆರೆಯಲು ನಡೆದಿದೆ ಸಿದ್ಧತೆ

ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ತೆರೆಯಲು ಆಂಧ್ರಪ್ರದೇಶ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಸರ್ಕಾರ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಸಹ ಮಾಡುತ್ತಿದೆ. ಆದರೆ  ಆ ಸಂದರ್ಭ ಕರೋನಾ ಪರಿಸ್ಥಿತಿಯನ್ನು ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು.  

Last Updated : Jul 22, 2020, 09:53 AM IST
ಈ ರಾಜ್ಯದಲ್ಲಿ ಸೆಪ್ಟೆಂಬರ್ 5ರಿಂದ ಶಾಲೆಗಳನ್ನು ತೆರೆಯಲು ನಡೆದಿದೆ ಸಿದ್ಧತೆ title=

ಅಮರಾವತಿ: ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ತೆರೆಯಲು ಆಂಧ್ರಪ್ರದೇಶ (Andhra Pradesh) ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಸರ್ಕಾರ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಸಹ ಮಾಡುತ್ತಿದೆ. ಆದಾಗ್ಯೂ ಆ ಸಂದರ್ಭದಲ್ಲಿ ರಾಜ್ಯದಲ್ಲಿ ಕರೋನಾವೈರಸ್ (Coronavirus) ಪರಿಸ್ಥಿತಿಯನ್ನು ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಲ್ಲಲಾಗುವುದು ಎಂದು ಹೇಳಲಾಗುತ್ತಿದೆ. 

ವಾಸ್ತವವಾಗಿ ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸುವ ಕುರಿತಂತೆ ಶಿಕ್ಷಣ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಈ ಕುರಿತಂತೆ ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಸಭೆಯ ನಂತರ ಶಿಕ್ಷಣ ಸಚಿವ ಆದಿಮಾಲಪು ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸರ್ಕಾರ ಸೆಪ್ಟೆಂಬರ್ 5ರಿಂದ ಶಾಲೆಗಳನ್ನು (Schools) ತೆರೆಯಲು ನಿಗದಿಪಡಿಸಿದೆ, ಆದರೆ ಆ ಸಮಯದಲ್ಲಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಶಾಲೆಗಳು ತೆರೆಯುವವರೆಗೆ ಮಧ್ಯಾಹ್ನದ ಬಿಸಿ ಊಟಕ್ಕೆ ಬದಲಾಗಿ ವಿದ್ಯಾರ್ಥಿಗಳಿಗೆ ಮನೆಗಳಿಗೆ ಪಡಿತರ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. 

ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಪ್ರತಿಕ್ರಿಯೆ ಕೇಳಿದ ಕೇಂದ್ರ

ಮುಂದಿನ ಋತುವಿನಿಂದ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಅಂದರೆ ಎಲ್‌ಕೆಜಿ ಮತ್ತು ಯುಕೆಜಿ (ಎಲ್‌ಕೆಜಿ ಮತ್ತು ಯುಕೆಜಿ) ಗಳನ್ನು ಸಹ ಪ್ರಾರಂಭಿಸಲಾಗುವುದು. ರಾಜ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಾದ ಇಎಮ್‌ಸೆಟ್, ಜೆಇಇ, ಐಐಐಟಿಗೆ ತಯಾರಾಗಲು ತರಬೇತಿ ಪ್ರಾರಂಭಿಸಲಾಗುವುದು. ಜಿಲ್ಲೆಯ ಮಟ್ಟದಲ್ಲಿ ಜಂಟಿ ನಿರ್ದೇಶಕರ ಹುದ್ದೆಯನ್ನು ರಚಿಸಲಾಗುವುದು ಇದರಿಂದ ರಾಜ್ಯದ ಶಿಕ್ಷಣದ ಮಟ್ಟವನ್ನು ಸುಧಾರಿಸಬಹುದು ಎಂದವರು ಹೇಳಿದರು.

Trending News