ಪಂಚ ತೀರ್ಪು: ಸೋನಿಯಾ ಭೇಟಿಗೆ ತೆರಳಿದ ರಾಹುಲ್ ಗಾಂಧಿ!

ಮಧ್ಯಾಹ್ನ 02:50ಕ್ಕೆ ಇಬ್ಬರೂ ಜಂಟಿ ಸುದ್ಧಿಗೋಷ್ಟಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Last Updated : Dec 11, 2018, 03:39 PM IST
ಪಂಚ ತೀರ್ಪು: ಸೋನಿಯಾ ಭೇಟಿಗೆ ತೆರಳಿದ ರಾಹುಲ್ ಗಾಂಧಿ! title=

ನವದೆಹಲಿ: ಮಧ್ಯಪ್ರದೇಶ, ಛತ್ತೀಸ್​ಗಢ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಯ ಈವರೆಗಿನ ಟ್ರೆಂಡಿಂಗ್ ನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಛತ್ತೀಸ್​ಗಢದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ. ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲೂ ಕಾಂಗ್ರೆಸ್ ಸರಳ ಬಹುಮತದತ್ತ ಸಾಗುತ್ತಿದೆ. ಏತನ್ಮಧ್ಯೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಿದ್ದಾರೆ. ಮಧ್ಯಾಹ್ನ 02:50ಕ್ಕೆ ಇಬ್ಬರೂ ಜಂಟಿ ಸುದ್ಧಿಗೋಷ್ಟಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈವರೆಗಿನ ಟ್ರೆಂಡಿಂಗ್ ನೋಡುವುದಾದರೆ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ 109, ಬಿಜೆಪಿ 110, ಬಿಎಸ್ಪಿ 5 ಮತ್ತು ಇತರ ಪಕ್ಷಗಳು 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 

ರಾಜಸ್ಥಾನದಲ್ಲಿ ಬಿಜೆಪಿ 74, ಕಾಂಗ್ರೆಸ್ 99, ಬಿಎಸ್ಪಿ 4 ಮತ್ತು ಇತರರು 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸರಳ ಬಹುಮತಕ್ಕೆ 100 ಸ್ಥಾನಗಳ ಅಗತ್ಯವಿದೆ.

ಛತ್ತೀಸ್​ಗಢದಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಇಲ್ಲಿ ಕಾಂಗ್ರೆಸ್ 65 ಸ್ಥಾನಗಳನ್ನು, ಬಿಜೆಪಿ 18, ಅಜಿತ್ ಜೋಗಿ ಪಕ್ಷದ 6 ಮತ್ತು ಇತರರು ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ದೊಡ್ಡ ಚುನಾವಣೆಯಾಗಿದ್ದು ಇದರಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಿದೆ. 

Trending News