ಜ. 22 ರವರೆಗೆ ರೋಡ್ ಶೋ, ರ್ಯಾಲಿ ಮೇಲಿನ ನಿಷೇಧ ವಿಸ್ತರಿಸಿದ ಚುನಾವಣಾ ಆಯೋಗ

Written by - Zee Kannada News Desk | Last Updated : Jan 15, 2022, 06:20 PM IST
  • ಭಾರತೀಯ ಚುನಾವಣಾ ಆಯೋಗವು ಶನಿವಾರದಂದು (ಜನವರಿ 15) ರಾಜ್ಯಗಳಲ್ಲಿ ಚುನಾವಣಾ ರ್ಯಾಲಿಗಳು ಮತ್ತು ರೋಡ್‌ಶೋಗಳ ಮೇಲಿನ ನಿಷೇಧವನ್ನು ಜನವರಿ 22 ರವರೆಗೆ ವಿಸ್ತರಿಸಿದೆ.
ಜ. 22 ರವರೆಗೆ ರೋಡ್ ಶೋ, ರ್ಯಾಲಿ ಮೇಲಿನ ನಿಷೇಧ ವಿಸ್ತರಿಸಿದ ಚುನಾವಣಾ ಆಯೋಗ  title=
file photo

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಶನಿವಾರದಂದು (ಜನವರಿ 15) ರಾಜ್ಯಗಳಲ್ಲಿ ಚುನಾವಣಾ ರ್ಯಾಲಿಗಳು ಮತ್ತು ರೋಡ್‌ಶೋಗಳ ಮೇಲಿನ ನಿಷೇಧವನ್ನು ಜನವರಿ 22 ರವರೆಗೆ ವಿಸ್ತರಿಸಿದೆ.

ಇದನ್ನೂ ಓದಿ: Viral Video: ಪಾಪ್ ಸಿಂಗರ್ ಕೆನ್ನೆ ಕಚ್ಚಿದ ಹಾವು!, ಭಯಾನಕ ದೃಶ್ಯ ಹೇಗಿದೆ ನೋಡಿ

ಇದಲ್ಲದೆ, ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಗರಿಷ್ಠ 300 ವ್ಯಕ್ತಿಗಳೊಂದಿಗೆ ಅಥವಾ ಸಭಾಂಗಣದ ಸಾಮರ್ಥ್ಯದ 50% ರಷ್ಟು ಒಳಾಂಗಣ ಸಭೆಗಳನ್ನು ನಡೆಸಲು ಅವಕಾಶ ಮಾಡಿಕೊಟ್ಟಿದೆ.ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಮತ್ತು ಸಾಂಕ್ರಾಮಿಕ ನಿಯಂತ್ರಣ ಕ್ರಮಗಳನ್ನು ಅನುಸರಿಸಲು ನಿರ್ದೇಶಿಸಿದೆ.

ಇದನ್ನೂ ಓದಿ : 7th Pay Commission: ಸರ್ಕಾರಿ ನೌಕರರಿಗೆ ಶೀಘ್ರದಲ್ಲಿಯೇ ಸಿಗಲಿದೆಯಾ ಈ ಸಂತಸದ ಸುದ್ದಿ? ಮೂಲಭೂತ ವೇತನದಲ್ಲಿ ಹೆಚ್ಚಳದ ನಿರೀಕ್ಷೆ

ಜನವರಿ 8 ರಂದು, ಚುನಾವಣಾ ಆಯೋಗವು ಉತ್ತರ ಪ್ರದೇಶ, ಉತ್ತರಾಖಂಡ ಮಣಿಪುರ, ಗೋವಾ ಮತ್ತು ಪಂಜಾಬ್‌ಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವಾಗ, ಸಾರ್ವಜನಿಕ ರ್ಯಾಲಿಗಳು, ರೋಡ್‌ಶೋಗಳು ಮತ್ತು ಅಂತಹುದೇ ಬಹಿರಂಗ ಪ್ರಚಾರ ಕಾರ್ಯಕ್ರಮಗಳನ್ನು ಜನವರಿ 15 ರವರೆಗೆ ನಿಷೇಧಿಸಿತ್ತು. ಈಗ ನಿಷೇಧವನ್ನು ಇನ್ನೊಂದು ವಾರದವರೆಗೆ ವಿಸ್ತರಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News