Bhabanipur By-election: ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕೆ

ಸೆ.30ರಂದು ಉಪಚುನಾವಣೆ ನಡೆಯಲಿದ್ದು, ಅ.3ರಂದು ಫಲಿತಾಂಶ ಪ್ರಕಟವಾಗಲಿದೆ. ಮಮತಾ ವಿರುದ್ಧ ಅಭ್ಯರ್ಥಿ ಹಾಕದಿರಲು ಕಾಂಗ್ರೆಸ್‌ ನಿರ್ಧರಿಸಿದೆ.  

Written by - Puttaraj K Alur | Last Updated : Sep 10, 2021, 04:15 PM IST
  • ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕೆ
  • ಶುಕ್ರವಾರ ಭಬನಿಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ
  • ಸೆ.30ರಂದು ಉಪಚುನಾವಣೆ ನಡೆಯಲಿದ್ದು, ಅ.3ರಂದು ಫಲಿತಾಂಶ ಪ್ರಕಟವಾಗಲಿದೆ
Bhabanipur By-election: ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕೆ title=
ಮಮತಾ ಬ್ಯಾನರ್ಜಿ ವಿರುದ್ಧ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕೆ (Photo Courtesy: @Zee News)

ಕೋಲ್ಕತ್ತಾ: ಭಾರೀ ಕುತೂಹಲ ಮೂಡಿಸಿರುವ ಪಶ್ಚಿಮ ಬಂಗಾಳದ ಭಬನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ(Bhabanipur assembly bypolls)ಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕಿಳಿದಿದ್ದಾರೆ. ಭಬನಿಪುರ ಜೊತೆಗೆ ಸಂಸರ್‌ಗಂಜ್ ಮತ್ತು ಜಂಗೀಪುರದಲ್ಲಿಯೂ ಚುನಾವಣೆ ನಡೆಯಲಿದೆ.

ಪಶ್ಚಿಮ ಬಂಗಾಳ(West Bengal) ಸಿಎಂ ಮಮತಾ ಬ್ಯಾನರ್ಜಿ(Mamata Banerjee) ಅವರು ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದರು. ಭಬನಿಪುರವನ್ನು ಮಮತಾ ಅವರ ಟರ್ಫ್ ಎಂದು ಪರಿಗಣಿಸಲಾಗಿದೆ, ಮುಖ್ಯಮಂತ್ರಿಗೆ ಕಠಿಣ ಸ್ಪರ್ಧೆ ನೀಡಲು ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಹುಡುಕುತ್ತಿತ್ತು. ಹೀಗಾಗಿ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ಅವರ ಕಾನೂನು ಸಲಹೆಗಾರರಾಗಿದ್ದ ವಕೀಲೆ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: Viral Video: ಗರ್ಲ್ ಫ್ರೆಂಡ್ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿ, ಮುಂದೇನಾಯ್ತು ನೀವೇ ನೋಡಿ...

ಬಿಜೆಪಿ ನಾಯಕಿಯೂ ಆಗಿ ಗುರುತಿಸಿಕೊಂಡಿರುವ ಪ್ರಿಯಾಂಕಾ ಟಿಬ್ರೆವಾಲ್(Priyanka Tibrewal), ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ‘ನಾನು ಮಮತಾ ಬ್ಯಾನರ್ಜಿ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಹೋರಾಡುತ್ತಿದ್ದೇನೆ. ಚುನಾವಣೋತ್ತರ ಹಿಂಸಾಚಾರ ಮತ್ತು ಬಿಜೆಪಿ(BJP) ಕಾರ್ಯಕರ್ತರ ಮೇಲೆ ನಡೆದ ಪ್ರಾಯೋಜಿತ ದೌರ್ಜನ್ಯದ ಪ್ರಕರಣಗಳಾಗಲಿ, ನಾನು ಯಾವುದಕ್ಕೂ ಹೆದರುವುದಿಲ್ಲ. ಮಮತಾ ಬ್ಯಾನರ್ಜಿ ವಿರುದ್ಧ ಹೋರಾಟ ಮಾಡಲು ನಾನು ಸಿದ್ಧ. ಉಪಚುನಾವಣೆಯಲ್ಲಿ ನಾನು ಗೆಲ್ಲುವುದು ಖಚಿತ’ ಎಂದು ಪ್ರಿಯಾಂಕಾ ಟಿಬ್ರೆವಾಲ್ ಭರವಸೆ ವ್ಯಕ್ತಪಡಿಸಿದ್ದಾರೆ.

ಚುನಾವಣಾ ನಂತರದ ಹಿಂಸಾಚಾರದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್‌ನ ಗಮನ ಸೆಳೆದು ಇತ್ತೀಚೆಗೆ ಸಂತ್ರಸ್ತರ ಪರ ತೀರ್ಪು ಪಡೆದ ಪ್ರಿಯಾಂಕಾ ಟಿಬ್ರೆವಾಲ್(Priyanka Tibrewal) ಸಖತ್ ಸುದ್ದಿಯಾಗಿದ್ದರು. ಚುನಾವಣೆಯ ನಂತರದ ಹಿಂಸಾಚಾರ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಸಿಬಿಐ ತನಿಖೆಗೆ ಆದೇಶಿಸಲಾಗಿತ್ತು. ಟಿಬ್ರೆವಾಲ್ ಬಿಜೆಪಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಮತ್ತು ಪಶ್ಚಿಮ ಬಂಗಾಳದಲ್ಲಿ ಪಕ್ಷದ ರಾಜ್ಯ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Video : ಇದ್ದಕ್ಕಿದಂತೆ ಹೊತ್ತಿ ಉರಿದ ಕಾರಿನೊಳಗೆ ಸಿಲುಕಿದ್ದ ವೃದ್ಧ ದಂಪತಿ, ಕೊನೆ ಕ್ಷಣದಲ್ಲಿ ನಡೆದೇ ಬಿಟ್ಟಿತು ಜಾದು

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಟಿಎಂಸಿ(TMC) ತೊರೆದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಹೀಗಾಗಿ ಮಮತಾ ಉಪಚುನಾವಣಾ ಕಣಕ್ಕಿಳಿದಿದ್ದು, ಅವರು ಸಿಎಂ ಆಗಿ ಮುಂದುವರಿಯಬೇಕಾದರೆ ಗೆಲುವು ಅನಿವಾರ್ಯವಾಗಿದೆ. ಸೆ.30ರಂದು ಉಪಚುನಾವಣೆ(Bhabanipur assembly bypolls) ನಡೆಯಲಿದ್ದು, ಅಕ್ಟೋಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ. ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್‌ ನಿರ್ಧರಿಸಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News