ಮಹಾರಾಷ್ಟ್ರದಲ್ಲಿ ನಾವು ಬಿಜೆಪಿಗೆ ಬೆಂಬಲಿಸದಿದ್ದರೆ ಸರ್ಕಾರ ಪತನವಾಗುತ್ತಿತ್ತು: ಉದ್ಧವ್ ಠಾಕ್ರೆ

ಮಹಾರಾಷ್ಟ್ರದಲ್ಲಿ ನಾವು ಬಿಜೆಪಿಯನ್ನು ಬೆಂಬಲಿಸದಿದ್ದಲ್ಲಿ ಸರ್ಕಾರ ಕುಸಿದು ಬೀಳುತ್ತಿತ್ತು ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. 

Last Updated : Oct 14, 2019, 03:19 PM IST
ಮಹಾರಾಷ್ಟ್ರದಲ್ಲಿ ನಾವು ಬಿಜೆಪಿಗೆ ಬೆಂಬಲಿಸದಿದ್ದರೆ ಸರ್ಕಾರ ಪತನವಾಗುತ್ತಿತ್ತು: ಉದ್ಧವ್ ಠಾಕ್ರೆ title=

ಉಸ್ಮಾನಾಬಾದ್: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ರಾಜ್ಯದಲ್ಲಿ ನಾವು ಬಿಜೆಪಿಯನ್ನು ಬೆಂಬಲಿಸದಿದ್ದಲ್ಲಿ ಸರ್ಕಾರ ಕುಸಿದು ಬೀಳುತ್ತಿತ್ತು ಎಂದು ಹೇಳಿದ್ದಾರೆ. 

ಮಹಾರಾಷ್ಟ್ರದ ಉಸ್ಮಾನಾಬಾದ್‌ನಲ್ಲಿ ನಡೆಯುತ್ತಿರುವ ಶಿವಸೇನೆ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, "ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರವನ್ನು ಶಿವಸೇನೆ ಬೆಂಬಲಿಸದಿದ್ದರೆ ಸರ್ಕಾರ ಕುಸಿಯುತ್ತಿತ್ತು. ಇಂದು ಬಿಜೆಪಿ ಸರ್ಕಾರದ ಉಳಿವಿಗೆ ಶಿವಸೇನೆಯೇ ಕಾರಣ" ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸದ್ಯ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಚುನಾವಣೋತ್ತರ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ-ಶಿವಸೇನೆ ಈ ಬಾರಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ. ಅಕ್ಟೋಬರ್ 21ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 24ರಂದು ಮತಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

Trending News