ಚುನಾವಣಾ ಆಯೋಗಕ್ಕೂ ಮೊದಲೇ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ

ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸುವ ಮೊದಲೇ ಬಿಜೆಪಿ ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಚುನಾವಣಾ ದಿನಾಂಕ ಟ್ವೀಟ್ ಮಾಡುವ ಮೂಲಕ ಭಾರಿ ವಿವಾದಕ್ಕೆ ಗುರಿಯಾಗಿದ್ದಾರೆ.

Last Updated : Mar 27, 2018, 07:53 PM IST
ಚುನಾವಣಾ ಆಯೋಗಕ್ಕೂ ಮೊದಲೇ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ  title=

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸುವ ಮೊದಲೇ ಬಿಜೆಪಿ ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಚುನಾವಣಾ ದಿನಾಂಕ ಟ್ವೀಟ್ ಮಾಡುವ ಮೂಲಕ ಭಾರಿ ವಿವಾದಕ್ಕೆ ಗುರಿಯಾಗಿದ್ದಾರೆ.

ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಇಂದು ಪತ್ರಿಕಾಗೋಷ್ಟಿಯಲ್ಲಿ ಚುನಾವಣಾ ದಿನಾಂಕ ಪ್ರಕಟಿಸುವ ಮುನ್ನವೇ "ಕರ್ನಾಟಕ ವಿಧಾನಸಭೆ ಚುನಾವಣೆ ಮೇ 12ರಂದು ನಡೆಯಲಿದ್ದು ಮೇ 18ಕ್ಕೆ ಫಲಿತಾಂಶ ಹೊರಬೀಳಲಿದೆ" ಎಂದು ಟ್ವೀಟ್ ಮಾಡಿದ್ದರು. ಆದರೆ ಆಯೋಗದ ಪ್ರಕಾರ ಮತದಾನ ಮೇ.12ಕ್ಕೆ ನಡೆಯಲಿದ್ದು, ಮೇ.15ಕ್ಕೆ ಮತಎಣಿಕೆ ನಡೆಯಲಿದೆ.

ಈ ವಿಚಾರ ವಿವಾದವಾಗಿ ಪರಿಣಮಿಸಿದ ಹಿನ್ನೆಲೆಯಲ್ಲಿ ಅಮಿತ್ ಮಾಳವೀಯ ಆ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಉತ್ತರಿಸಿದ ಮುಖ್ಯಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್, ಇದು ಗಂಭೀರವಾದ ವಿಚಾರ. ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಮುನ್ನವೇ ಟ್ವೀಟ್ ಮಾಡಿದ್ದು ತಪ್ಪು, ಈ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Trending News