ಗೋಡ್ಸೆ ಕುರಿತ ಹೇಳಿಕೆಯಿಂದಾಗಿ ಬಿಜೆಪಿಯಿಂದ ಪ್ರಜ್ಞಾ ಸಿಂಗ್ ಠಾಕೂರ್ ವಜಾ ಸಾಧ್ಯತೆ..!

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಲೋಕಸಭೆಯಲ್ಲಿನ ಕಾಮೆಂಟ್‌ಗಳಿಗೆ ಸಂಬಂಧಿಸಿದಂತೆ ಪಕ್ಷದ ಸದಸ್ಯತ್ವದಿಂದ ವಜಾಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ. 

Last Updated : Nov 28, 2019, 05:40 PM IST
ಗೋಡ್ಸೆ ಕುರಿತ ಹೇಳಿಕೆಯಿಂದಾಗಿ ಬಿಜೆಪಿಯಿಂದ ಪ್ರಜ್ಞಾ ಸಿಂಗ್ ಠಾಕೂರ್ ವಜಾ ಸಾಧ್ಯತೆ..!   title=
file photo

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಲೋಕಸಭೆಯಲ್ಲಿನ ಕಾಮೆಂಟ್‌ಗಳಿಗೆ ಸಂಬಂಧಿಸಿದಂತೆ ಪಕ್ಷದ ಸದಸ್ಯತ್ವದಿಂದ ವಜಾಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ. 

ಮಹಾತ್ಮಾ ಗಾಂಧೀಜಿ ಹಂತಕ ಗೋಡ್ಸೆ ಅವರನ್ನು ಶ್ಲಾಘಿಸಿದ ಹಿನ್ನಲೆಯಲ್ಲಿ ಬಿಜೆಪಿ ಈ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ದಾ 'ಬಿಜೆಪಿ ಅಂತಹ ಹೇಳಿಕೆಗಳು ಮತ್ತು ಸಿದ್ಧಾಂತಗಳನ್ನು ಎಂದಿಗೂ ಬೆಂಬಲಿಸುವುದಿಲ್ಲ, ಅವರ ಟೀಕೆಗಳನ್ನು ನಾವು ಖಂಡಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಈಗ ನಡೆಯುತ್ತಿರುವ ಸಂಸತ್ತಿನ ಅಧಿವೇಶನದ ಎಲ್ಲಾ ಪ್ರಮುಖ ಬಿಜೆಪಿ ಸಭೆಗಳಿಂದ ಅವರನ್ನು ನಿರ್ಬಂಧಿಸಲಾಗಿದೆ. 

ಸುದ್ದಿ ಮೂಲಗಳ ಪ್ರಕಾರ, ಸಾಧ್ವಿ ಪ್ರಜ್ಞಾ ಠಾಕೂರ್ ಅವರ ಪ್ರಕರಣವನ್ನು ಬಿಜೆಪಿ ಶಿಸ್ತು ಸಮಿತಿಗೆ ಕಳುಹಿಸಲಾಗಿದ್ದು, ಅವರನ್ನು ಪಕ್ಷದಿಂದ ಅಮಾನತುಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಮತ್ತೊಮ್ಮೆ ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಉಲ್ಲೇಖಿಸಿದ್ದರು, ಈ ಹಿನ್ನಲೆಯಲ್ಲಿ ಬುಧವಾರದಂದು ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಗೆ ನಾಂದಿ ಹಾಡಿತ್ತು.

ಪ್ರಜ್ಞಾ ಠಾಕೂರ್ ಅವರು ಗೋಡ್ಸೆಯನ್ನು ದೇಶಭಕ್ತರೆಂದು ಉಲ್ಲೇಖಿಸುತ್ತಿರುವುದು ಇದೇ ಮೊದಲಲ್ಲ. ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಮುಖಂಡರು ಮಧ್ಯಪ್ರದೇಶದಲ್ಲಿ ರೋಡ್ ಶೋ ಸಂದರ್ಭದಲ್ಲಿ ಗೋಡ್ಸೆ ಅವರನ್ನು ನಿಜವಾದ ದೇಶಭಕ್ತ ಎಂದು ಕರೆದು ವಿವಾದ ಸೃಷ್ಟಿಸಿದ್ದರು.

Trending News