Central Government Jobs: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆ ಖಾಲಿ

ಸಿಬ್ಬಂದಿ ನೇಮಕಾತಿ ಮಾಡುವ ಯುಪಿಎಸ್‌ಸಿಯಲ್ಲಿಯೇ 485 ಹುದ್ದೆಗಳು ಖಾಲಿ ಬಿದ್ದಿವೆ. ಇದರಲ್ಲಿ A ಗುಂಪಿನ 45, B ಗುಂಪಿನ 240 ಮತ್ತು C ಗುಂಪಿನ 200 ಹುದ್ದೆಗಳು ಸೇರಿವೆ ಎಂದು ಅವರು ತಿಳಿಸಿದ್ದಾರೆ.

Written by - Zee Kannada News Desk | Last Updated : Feb 4, 2022, 11:00 AM IST
  • ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬರೋಬ್ಬರಿ 8.72 ಲಕ್ಷ ಹುದ್ದೆಗಳು ಖಾಲಿ
  • ರಾಜ್ಯಸಭೆಗೆ ಮಾಹಿತಿ ನೀಡಿದ ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್
  • ಸಿಬ್ಬಂದಿ ನೇಮಕಾತಿ ಮಾಡುವ ಯುಪಿಎಸ್‌ಸಿಯಲ್ಲಿಯೇ 485 ಹುದ್ದೆಗಳು ಖಾಲಿ ಇವೆ
Central Government Jobs: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆ ಖಾಲಿ title=
ಬರೋಬ್ಬರಿ 8.72 ಲಕ್ಷ ಹುದ್ದೆಗಳು ಖಾಲಿ

ನವದೆಹಲಿ: ಮಾರ್ಚ್ 1, 2020ರಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬರೋಬ್ಬರಿ 8.72 ಲಕ್ಷ ಹುದ್ದೆಗಳು ಖಾಲಿ(Central Government Jobs) ಇವೆ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

ಮೂರು ಪ್ರಮುಖ ನೇಮಕಾತಿ ಏಜೆನ್ಸಿಗಳಾಗಿರುವ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (SSC), ಕೇಂದ್ರ ಲೋಕ ಸೇವಾ ಆಯೋಗ(UPSC) ಮತ್ತು ರೈಲ್ವೆ ನೇಮಕಾತಿ ಮಂಡಳಿಗಳು (RRB)2018-19 ಮತ್ತು 2020-21ರ ಅವಧಿಯಲ್ಲಿ ಒಟ್ಟು 2.65 ಲಕ್ಷ ನೇಮಕಾತಿಗಳನ್ನು ನಡೆಸಿವೆ ಎಂದೂ ಲಿಖಿತ ಉತ್ತರದಲ್ಲಿ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಇಲ್ಲಿ ಬೇರೆ ರಾಜ್ಯದ ವಧುವಿಗೆ ಉದ್ಯೋಗದಲ್ಲಿ ಮೀಸಲಾತಿ ಸಿಗುವುದಿಲ್ಲ, ಕೋರ್ಟ್ ಹೇಳಿದ್ದೇನು ಗೊತ್ತಾ?

ಸಿಬ್ಬಂದಿ ನೇಮಕಾತಿ ಮಾಡುವ ಯುಪಿಎಸ್‌ಸಿ(UPSC)ಯಲ್ಲಿಯೇ 485 ಹುದ್ದೆಗಳು ಖಾಲಿ ಬಿದ್ದಿವೆ. ಇದರಲ್ಲಿ A ಗುಂಪಿನ 45, B ಗುಂಪಿನ 240 ಮತ್ತು C ಗುಂಪಿನ 200 ಹುದ್ದೆಗಳು ಸೇರಿವೆ ಎಂದು ಅವರು ತಿಳಿಸಿದ್ದಾರೆ.

ಸಚಿವ ಜಿತೇಂದ್ರ ಸಿಂಗ್(Jitendra Singh) ನೀಡಿದ ಲಿಖಿತ ಉತ್ತರದ ಪ್ರಕಾರ, ಮಾರ್ಚ್ 1, 2019ಕ್ಕೆ 9,10,153 ಮತ್ತು ಮಾರ್ಚ್ 1, 2018 ಕ್ಕೆ 6,83,823 ಖಾಲಿ ಹುದ್ದೆಗಳಿವೆ. ಮಾರ್ಚ್ 1, 2020ರಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 8,72,243 ಹುದ್ದೆಗಳು ಖಾಲಿ ಇವೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Pune: ನಿರ್ಮಾಣದ ಹಂತದ ಕಟ್ಟಡ ಕುಸಿದು 7 ಮಂದಿ ದುರ್ಮರಣ, ಹಲವರಿಗೆ ಗಾಯ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News