ಪುಲ್ವಾಮಾ ದಾಳಿ ಮೋದಿ-ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್: ಬಿ.ಕೆ.ಹರಿಪ್ರಸಾದ್ ಆರೋಪ

ಪುಲ್ವಾಮಾ ದಾಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Last Updated : Mar 7, 2019, 09:22 PM IST
ಪುಲ್ವಾಮಾ ದಾಳಿ ಮೋದಿ-ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್: ಬಿ.ಕೆ.ಹರಿಪ್ರಸಾದ್ ಆರೋಪ title=

ನವದೆಹಲಿ: ಇತ್ತೀಚೆಗೆ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ದಾಳಿಯನ್ನು ಪ್ರಧಾನಿ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್ ಎಂದು ಆರೋಪಿಸುವ ಮೂಲಕ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹರಿಪ್ರಸಾದ್ ಅವರು, ಪುಲ್ವಾಮಾ ದಾಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್ ಹೌದೋ? ಅಲ್ಲವೋ ಎಂಬುದನ್ನು ಬಿಜೆಪಿ ಹಿರಿಯ ನಾಯಕ ರವಿ ಶಂಕರ್ ಪ್ರಸಾದ್ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿರುವ ಅವರು, ಉಭಯ ನಾಯಕರ ಗಮನಕ್ಕೆ ಬಾರದೆ ಪುಲ್ವಾಮಾ ದಾಳಿ ನಡೆದಿರಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ಕಳೆದ ಮಂಗಳವಾರ ಕೇಂದ್ರ ಕಾನೂನು ಸಚಿವ ರವಿಶಂಕರ್​ ಪ್ರಸಾದ್​ ಅವರು ಕಾಂಗ್ರೆಸ್​ ವಿರುದ್ಧ ಗಂಭೀರ ಆರೋಪ ಮಾಡಿ, ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್​ ರಕ್ಷಣಾ ಪಡೆಗಳ ನೈತಿಕತೆಯನ್ನು ಪ್ರಶ್ನಿಸುವಂಥ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ. ಬಾಲಾಕೋಟ್​ ವೈಮಾನಿಕ ದಾಳಿಯ ವಿಚಾರವಾಗಿ ಪ್ರತಿಪಕ್ಷದ ನಾಯಕರು ನೀಡುತ್ತಿರುವ ಹೇಳಿಕೆಗಳು ಅಧ್ಯಕ್ಷ ರಾಹುಲ್​ ಗಾಂಧಿಯ ಆಶೀರ್ವಾದದಿಂದ ಬಂದವುಗಳಾಗಿವೆ ಎಂದು ಕಿಡಿಕಾರಿದ್ದರು. ಈ ಬೆನ್ನಲ್ಲೇ ಬಿ.ಕೆ. ಹರಿಪ್ರಸಾದ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ಫೆಬ್ರವರಿ 14 ರಂದು ಜಮ್ಮು-ಕಾಶ್ಮೀರದ ಪುಲ್ವಾಮಾ ಬಳಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 40ಕ್ಕೂ ಹೆಚ್ಚು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು. 

Trending News