ದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಪ್ರಜಾಪ್ರಭುತ್ವ ಅಂತ್ಯ: ಅಖಿಲೇಶ್ ಯಾದವ್

2019ರ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಮುಂದೆದೂ ಚುನಾವಣೆ ನಡೆಯುವುದಿಲ್ಲ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.

Updated: Sep 14, 2018 , 07:40 PM IST
ದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಪ್ರಜಾಪ್ರಭುತ್ವ ಅಂತ್ಯ: ಅಖಿಲೇಶ್ ಯಾದವ್
Pic Courtesy: PTI

ಲಕ್ನೋ: ದೇಶದಲ್ಲಿ ನಡೆಯಲಿರುವ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಅಂತ್ಯವಾಗಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಹಾಗು ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ.

ಇಟಾವಾದಲ್ಲಿ ಶುಕ್ರವಾರ ನಡೆದ ಸಮಾವೇಶವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, 2019ರ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಮುಂದೆದೂ ಚುನಾವಣೆ ನಡೆಯುವುದಿಲ್ಲ. ಪ್ರಜಾಪ್ರಭುತ್ಯ ಕೊನೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಭವಿಷ್ಯ ನುಡಿದಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ಇದುವರೆಗೂ ಬಿಜೆಪಿ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ದೇಶದಲ್ಲಿ ಜಾತಿ ರಾಜಕಾರಣ ಮತ್ತು ಕೋಮುಗಲಭೆಯನ್ನು ಬಿಜೆಪಿ ಪ್ರಚೋದಿಸುತ್ತಿದೆ. ಅಲ್ಲದೆ, ಮೋದಿ ಸರಕಾರ ದಲಿತರ ಏಳಿಗೆಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರಲ್ಲದೆ, ಇಂಥಹ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬಾರದು. 2019ರ ಚುನಾವಣೆಯಲ್ಲಿ ಇವರಿಗೆ ಜನತೆಯೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
 

By continuing to use the site, you agree to the use of cookies. You can find out more by clicking this link

Close