Encounters in Kashmir: ಎರಡು ಎನ್‌ಕೌಂಟರ್‌ಗಳಲ್ಲಿ ಆರು ಭಯೋತ್ಪಾದಕರ ಹತ್ಯೆ

Encounters in Kashmir: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ.

Written by - Yashaswini V | Last Updated : Dec 30, 2021, 07:45 AM IST
  • ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಎನ್‌ಕೌಂಟರ್
  • ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಆರು ಉಗ್ರರನ್ನು ಹತ್ಯೆ
  • ಹತ್ಯೆಗೀಡಾದ ಉಗ್ರರಿಂದ ಒಂದು ಎಂ4 ಮತ್ತು ಎರಡು ಎಕೆ 47 ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ
Encounters in Kashmir: ಎರಡು ಎನ್‌ಕೌಂಟರ್‌ಗಳಲ್ಲಿ ಆರು ಭಯೋತ್ಪಾದಕರ ಹತ್ಯೆ title=
Encounters in Kashmir

Encounters in Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿದೆ, ಒಬ್ಬ ಪೊಲೀಸ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಇಎಂಗೆ (JeM) ಸೇರಿದ ಆರು ಸ್ಥಳೀಯ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಶೋಧ ಕಾರ್ಯ ಇನ್ನೂ ಮುಂದುವರೆದಿದೆ. ಹತ್ಯೆಗೀಡಾದ ಉಗ್ರರಿಂದ ಒಂದು ಎಂ4 ಮತ್ತು ಎರಡು ಎಕೆ 47 ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಹತರಾದ ಭಯೋತ್ಪಾದಕರ ಪೈಕಿ 4 ಮಂದಿಯನ್ನು ಗುರುತಿಸಲಾಗಿದೆ. ಉಳಿದವರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್  ತಿಳಿಸಿದ್ದಾರೆ.

ಇದನ್ನೂ ಓದಿ- ಮುಂಬೈನಲ್ಲಿ ಕೇವಲ 24 ಗಂಟೆಗಳಲ್ಲಿ ಶೇ 82 ರಷ್ಟು ಕೊರೊನಾ ಪ್ರಕರಣಗಳ ಹೆಚ್ಚಳ

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಎನ್‌ಕೌಂಟರ್ ನಡೆದಿದೆ. ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ (Mirhama area of Kulgam district) ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಮತ್ತು ಈ ಸಮಯದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ  ಎನ್‌ಕೌಂಟರ್‌ ಆರಂಭವಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಶೋಧ ಕಾರ್ಯಾಚರಣೆ ವೇಳೆ ಅಡಗಿಕೊಂಡಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಎನ್‌ಕೌಂಟರ್ ಆರಂಭವಾಯಿತು. ಈ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಹತ್ಯೆಗೀಡಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ- 7th Pay Commission : ಕೇಂದ್ರ ನೌಕರರಿಗೆ ಹಳೆ ಪಿಂಚಣಿ ಯೋಜನೆಯ ಲಾಭ! ಸಿದ್ಧಪಡಿಸಿದ ಸರ್ಕಾರ 

ಅನಂತನಾಗ್ ಜಿಲ್ಲೆಯ ದುರುವಿನ ನೌಗಾಮ್ ಶಹಾಬಾದ್‌ನಲ್ಲಿ ಭದ್ರತಾ ಪಡೆಗಳ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯ ಸಂದರ್ಭದಲ್ಲಿ ಎರಡನೇ ಎನ್‌ಕೌಂಟರ್ ನಡೆಯಿತು. ಆರಂಭಿಕ ಗುಂಡಿನ ದಾಳಿಯ ವೇಳೆ ಓರ್ವ ಪೊಲೀಸ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎನ್‌ಕೌಂಟರ್ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News