Honda ಕಾರ್ ಶೋ ರೂಂನಲ್ಲಿ ಬೆಂಕಿ ಅವಘಡ, 15ಕ್ಕೂ ಹೆಚ್ಚು ಕಾರುಗಳು ಬೆಂಕಿಗೆ ಆಹುತಿ

ಮಂಗಳವಾರ ಬೆಳಿಗ್ಗೆ 4 ಗಂಟೆಗೆ ದೆಹಲಿಯ ಪಟ್ಪಂಗಂಜ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಪ್ರಾಥಮಿಕ ವರದಿ ಪ್ರಕಾರ, ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭಸಿದೆ ಎಂದು ಹೇಳಲಾಗುತ್ತಿದೆ.

Last Updated : Dec 18, 2018, 11:27 AM IST
Honda ಕಾರ್ ಶೋ ರೂಂನಲ್ಲಿ ಬೆಂಕಿ ಅವಘಡ, 15ಕ್ಕೂ ಹೆಚ್ಚು ಕಾರುಗಳು ಬೆಂಕಿಗೆ ಆಹುತಿ title=

ನವದೆಹಲಿ: ಪೂರ್ವ ದೆಹಲಿಯ ಪಟ್ಪಂಗಂಜ್ ಪ್ರದೇಶದಲ್ಲಿ  ಹೋಂಡಾ ಕಾರ್ ಶೋ ರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 15 ಕ್ಕಿಂತ ಹೆಚ್ಚು ದುಬಾರಿ ಕಾರುಗಳು ಬೆಂಕಿಗಾಹುತಿ ಆಗಿರುವ ಘಟನೆ ನಡೆದಿದೆ. 

ಈ ದುರಂತದಲ್ಲಿ ಲಕ್ಷಾಂತರ ರೂ. ಮೌಲ್ಯದ ನಷ್ಟ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.

ಮಂಗಳವಾರ ಬೆಳಿಗ್ಗೆ 4 ಗಂಟೆಗೆ ದೆಹಲಿಯ ಪಟ್ಪಂಗಂಜ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಪ್ರಾಥಮಿಕ ವರದಿ ಪ್ರಕಾರ, ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭಸಿದೆ ಎಂದು ಹೇಳಲಾಗುತ್ತಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ 12 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. 
 

Trending News