ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ನೇಮಕ

ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ಶನಿವಾರ ನೇಮಿಸಲಾಯಿತು.

Last Updated : Aug 29, 2020, 11:12 PM IST
ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ನೇಮಕ  title=
file photo

ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ಶನಿವಾರ ನೇಮಿಸಲಾಯಿತು.

ಆಗಸ್ಟ್ 25 ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರ್ ರಾವ್ ಮತ್ತು ರಾಜ್ಯ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ  ಔಪಚಾರಿಕವಾಗಿ ತಮಿಳುನಾಡು ಬಿಜೆಪಿ ಘಟಕಕ್ಕೆ ಸೇರಿದರು.

'ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಭವಿಷ್ಯದ ಪ್ರಯತ್ನಗಳಿಗೆ ನೀವು ಯಶಸ್ಸನ್ನು ಬಯಸುತ್ತೇವೆ' ಎಂದು ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಎಲ್ ಮುರುಗನ್ ಪತ್ರಿಕಾ ಪ್ರಕಟಣೆಯಲ್ಲಿ ಘೋಷಿಸಿದ್ದಾರೆ.

ಅಣ್ಣಾಮಲೈ ಅವರ ನೇಮಕವು ತಮಿಳುನಾಡಿನಲ್ಲಿ 2021 ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಂದಿದೆ.

Trending News