ಎಸ್ಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಿಬಿಐ ತನಿಖೆಗೆ ಸರ್ಕಾರ ಆದೇಶ

ಕಳೆದ ಒಂದು ವಾರಗಳಿಂದ ಅಭ್ಯರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದೆ. 

Last Updated : Mar 5, 2018, 01:47 PM IST
ಎಸ್ಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಿಬಿಐ ತನಿಖೆಗೆ ಸರ್ಕಾರ ಆದೇಶ  title=

ನವದೆಹಲಿ : SSC(ಸಿಬ್ಬಂದಿ ಆಯ್ಕೆ ನಿಯೋಗ) ಪ್ರಶ್ನೆ ಪತ್ರಿಕೆಗಳ ಸೋರಿಕೆಗೆ ಸಂಬಂಧಿಸಿದಂತೆ ಕಳೆದ ಒಂದು ವಾರಗಳಿಂದ ಅಭ್ಯರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದೆ. 

ಈ ಕುರಿತು ಮಾತಾನಾಡಿದ ಕೇಂದ್ರ ಸಚಿವ ರಾಜನಾಥ್ ಸಿಂಗ್, "ನಾವು ಪ್ರತಿಭಟನಾ ಅಭ್ಯರ್ಥಿಗಳ ಬೇಡಿಕೆಗಳನ್ನು ಸ್ವೀಕರಿಸಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ್ದೇವೆ. ಇನ್ನಾದರೂ ಪ್ರತಿಭಟನೆ ನಿಲ್ಲಿಸಬೇಕು" ಎಂದು ಹೇಳಿದರು. ಎಲ್ಲಕ್ಕಿಂತ ಮುಖ್ಯವಾಗಿ ಸುಪ್ರೀಂ ಕೋರ್ಟ್ ಮಾರ್ಚ್ 12 ರಂದು ಈ ವಿಷಯದ ಬಗ್ಗೆ ವಿಚಾರಣೆ ನಡೆಸಲು ನಿರ್ಧರಿಸಿದೆ.

ಪತ್ರಿಕೆಯ ಸೋರಿಕೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳ ನಿಯೋಗವು, ಬಿಜೆಪಿ ದೆಹಲಿ ಮುಖ್ಯಸ್ಥ ಮನೋಜ್ ತಿವಾರಿಯೊಂದಿಗೆ ಆಗಮಿಸಿ, ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಶಿಫಾರಸು ಮಾಡಲಾಗಿದೆ ಎಂದು  SSC ಅಧ್ಯಕ್ಷ ಅಶಿಮ್ ಖುರಾನಾ ಹೇಳಿದ್ದಾರೆ.

ಫೆಬ್ರವರಿ 17 ರಿಂದ 22 ರವರೆಗೆ ನಡೆದ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ (ಟೈಯರ್ -2) ಪರೀಕ್ಷೆ 2017 ರ ಎಸ್ಎಸ್ಸಿ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಆಗಿವೇ ಎಂದು ಆರೋಪಿಸಿ ಕಳೆದ ಒಂದು ವಾರದಿಂದ ಅಭ್ಯರ್ಥಿಗಳು ಪ್ರನಿಭಾತನೆ ನಡೆಸುತ್ತಿದ್ದರು. ಈ ಪ್ರತಿಭಟನೆಗೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಕೂಡ ಬೆಂಬಲ ವ್ಯಕ್ತಪಡಿಸಿ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು. 

Trending News