Weather Forecast: ಈ ರಾಜ್ಯಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ ಸಾಧ್ಯತೆ: IMD ಎಚ್ಚರಿಕೆ

Weather Forecast: ಮುಂದಿನ ಎರಡು ವಾರಗಳ ಕಾಲ ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಹವಾಮಾನ ಮಾದರಿಗಳು ಕಡಿಮೆ ಮಳೆಯಾಗುವ ಸಾಧ್ಯತೆಯನ್ನು ತೋರಿಸುತ್ತಿವೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.

Written by - Bhavishya Shetty | Last Updated : Nov 27, 2022, 09:12 AM IST
    • ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಅನೇಕ ರಾಜ್ಯಗಳಲ್ಲಿ ಮಳೆಯಾಗಬಹುದು
    • ಮುಂದಿನ ಕೆಲವು ದಿನಗಳಲ್ಲಿ ಕನಿಷ್ಠ ತಾಪಮಾನವು 8-10 ಡಿಗ್ರಿ ಸೆಲ್ಸಿಯಸ್ ಇರಲಿದೆ
    • ನಿಮ್ಮ ರಾಜ್ಯದಲ್ಲಿ ಹವಾಮಾನ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳೋಣ
Weather Forecast: ಈ ರಾಜ್ಯಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ ಸಾಧ್ಯತೆ: IMD ಎಚ್ಚರಿಕೆ title=
today weather report

Weather Forecast: ಹವಾಮಾನ ಇಲಾಖೆಯ ಪ್ರಕಾರ ಮುಂದಿನ ಕೆಲವು ದಿನಗಳಲ್ಲಿ ಕನಿಷ್ಠ ತಾಪಮಾನವು 8-10 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಚಳಿಗಾಳಿಯೂ ಶುರುವಾಗಲಿದೆ. ಅದೇ ಸಮಯದಲ್ಲಿ, ಅಂಡಮಾನ್ ಸಾಗರದಲ್ಲಿ ಗಾಳಿ ಪ್ರಾರಂಭವಾದ ಕಾರಣ ಮುಂದಿನ 5 ದಿನಗಳವರೆಗೆ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಅನೇಕ ರಾಜ್ಯಗಳಲ್ಲಿ ಮಳೆಯಾಗಬಹುದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹೊಸ ವರ್ಷಕ್ಕೂ ಮುನ್ನ ಕೇಂದ್ರ ನೌಕರರಿಗೆ ಸಿಹಿ ಸುದ್ದಿ, ನಿಮ್ಮ ಖಾತೆಗೆ ಬರಲಿದೆ ₹2 ಲಕ್ಷ!

ಇನ್ನು ಮುಂದಿನ ಕೆಲವು ದಿನಗಳವರೆಗೆ ನಿಮ್ಮ ರಾಜ್ಯದಲ್ಲಿ ಹವಾಮಾನ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳೋಣ:

ಮುಂದಿನ ಎರಡು ವಾರಗಳ ಕಾಲ ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಹವಾಮಾನ ಮಾದರಿಗಳು ಕಡಿಮೆ ಮಳೆಯಾಗುವ ಸಾಧ್ಯತೆಯನ್ನು ತೋರಿಸುತ್ತಿವೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ. ಹವಾಮಾನ ಇಲಾಖೆ ಪ್ರಕಾರ, ಮಂಗಳವಾರದವರೆಗೆ ವಿವಿಧೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಆದರೆ, ಬಂಗಾಳಕೊಲ್ಲಿಯಲ್ಲಿ ಯಾವುದೇ ಪ್ರಮುಖ ಹವಾಮಾನ ವ್ಯವಸ್ಥೆ ಇಲ್ಲ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಇಂದು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

'ಅತ್ಯಂತ ಕಳಪೆ' ವಿಭಾಗದಲ್ಲಿ AQI:

ಇಂದು ದೆಹಲಿಯಲ್ಲಿ ಸರಾಸರಿ AQI 332 ಆಗಿದೆ. ಇದರರ್ಥ ದೆಹಲಿಯಲ್ಲಿ ಮಾಲಿನ್ಯವು ಅತ್ಯಂತ ಕಳಪೆ ವರ್ಗದಲ್ಲಿದೆ. ಇಂದು ಜಹಾಂಗೀರಪುರಿಯಲ್ಲಿ AQI 374, ಬವಾನಾದಲ್ಲಿ AQI 337, ನೆಹರು ನಗರದಲ್ಲಿ AQI 382, ​​ಶಾದಿಪುರದಲ್ಲಿ AQI 351 ಮತ್ತು ದ್ವಾರಕಾದಲ್ಲಿ AQI 365 ದಾಖಲಾಗಿದೆ. ಇದರ ಹೊರತಾಗಿ, ನೋಯ್ಡಾದ ಸರಾಸರಿ AQI 282, ಗಾಜಿಯಾಬಾದ್‌ನ ಸರಾಸರಿ AQI 276, ಫರಿದಾಬಾದ್‌ನ ಸರಾಸರಿ AQI 303 ಮತ್ತು ಗುರುಗ್ರಾಮ್‌ನ ಸರಾಸರಿ AQI 294 ಇದೆ. ಹವಾಮಾನ ಇಲಾಖೆಯ ಪ್ರಕಾರ, ಇಂದಿನ ಗರಿಷ್ಟ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 8 ಡಿಗ್ರಿ ಸೆಲ್ಸಿಯಸ್ ಆಗಿರಬಹುದು ಎಂದು ಅಂದಾಜಿಲಾಗಿದೆ.

ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ಶನಿವಾರದಂದು 'ಅತ್ಯಂತ ಕಳಪೆ' ವಿಭಾಗದಲ್ಲಿ ದಾಖಲಾಗಿತ್ತು. ದೆಹಲಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್, ಸಾಮಾನ್ಯಕ್ಕಿಂತ 1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. IMD ಪ್ರಕಾರ, ದೆಹಲಿಯಲ್ಲಿ ಶನಿವಾರ ಕನಿಷ್ಠ ತಾಪಮಾನವು 8.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶನಿವಾರದಂದು ಸಾಮಾನ್ಯಕ್ಕಿಂತ ಮೂರು ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ.

ಇದನ್ನೂ ಓದಿ: Vehicle Scrapping Policy: ಶೀಘ್ರವೇ ಗುಜರಿ ಸೇರಲಿರುವ 15 ವರ್ಷ ಹಳೆಯ ವಾಹನಗಳು..!

CPCB (Central Pollution Control Board) ಡೇಟಾ ಪ್ರಕಾರ, 24 ಗಂಟೆಗಳ ಒಟ್ಟಾರೆ AQI ಶನಿವಾರ 336 ಆಗಿತ್ತು. 0 ಮತ್ತು 50 ರ ನಡುವಿನ AQI ಉತ್ತಮ, 51 ಮತ್ತು 100 ನಡುವಿನ AQI ತೃಪ್ತಿಕರ,101 ಮತ್ತು 200 ನಡುವಿನ AQI ಮಧ್ಯಮ, 201 ಮತ್ತು 300 ನಡುವಿನ AQI ಕಳಪೆ, 301 ಮತ್ತು 400 ನಡುವಿನ AQI ಅತ್ಯಂತ ಕಳಪೆ ಮತ್ತು 401 ಮತ್ತು 500 ರ ನಡುವಿನ AQI ಗಂಭೀರ ಎಂದು ಪರಿಗಣಿಸಲಾಗಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News