CAA: ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ಮಾರ್ಗ

CAA: ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಹಿಂದೂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ನಿರಾಶ್ರಿತರು CAA 2019 ರ ಅಡಿಯಲ್ಲಿ ಪೌರತ್ವಕ್ಕಾಗಿ ಹೇಗೆ ಸಲ್ಲಿಸಬೇಕು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ...

Written by - Prashobh Devanahalli | Last Updated : Mar 12, 2024, 07:56 AM IST
  • ಪೌರತ್ವ ತಿದ್ದುಪಡಿ ಕಾಯಿದೆ ಅಡಿ ಯಾರು ಅರ್ಜಿ ಸಲ್ಲಿಸಬಹುದು?
  • ಪೌರತ್ವ ತಿದ್ದುಪಡಿ ಕಾಯಿದೆಯಡಿ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ
  • ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಬಂದಿರುವ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ನಿರಾಶ್ರಿತರು CAA 2019 ರ ಅಡಿಯಲ್ಲಿ ಪೌರತ್ವ ಪಡೆಯಲು ಅರ್ಜಿ ಸಲ್ಲಿಸಬಹುದು
CAA: ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ಮಾರ್ಗ  title=

Citizenship Amendment Act: ಸಿಎಎ ನಿಯಮಗಳ ಅಧಿಸೂಚನೆಯ ನಂತರ, ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ Indiancitizenshiponline.nic.in ಪೋರ್ಟಲ್ ಲೈವ್ ಆಗಿದೆ. ಪೋರ್ಟಲ್‌ನಲ್ಲಿ ಪೌರತ್ವಕ್ಕಾಗಿ ಆನ್‌ಲೈನ್ ಅರ್ಜಿ ಪ್ರಾರಂಭವಾಗಿದೆ.  ಪೋರ್ಟಲ್‌ನಲ್ಲಿ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ನಿರಾಶ್ರಿತರು ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಪೌರತ್ವ ತಿದ್ದುಪಡಿ ಕಾಯಿದೆ ಅಡಿ ಯಾರು ಅರ್ಜಿ ಸಲ್ಲಿಸಬಹುದು? 
ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಬಂದಿರುವ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ನಿರಾಶ್ರಿತರು CAA 2019 ರ ಅಡಿಯಲ್ಲಿ ಪೌರತ್ವ ಪಡೆಯಲು indiancitizenshiponline.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. 

ಇದನ್ನೂ ಓದಿ- ಮೋದಿ ಸರ್ಕಾರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ‘ಲೋಕ’ ಚುನಾವಣೆಗೂ ಮುನ್ನ ಬ್ರಹ್ಮಾಸ್ತ್ರ

ಪೌರತ್ವ ತಿದ್ದುಪಡಿ ಕಾಯಿದೆಯಡಿ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ: 
* CAA 2019 ರ ಅಡಿಯಲ್ಲಿ ಪೌರತ್ವ ಪಡೆಯಲು indiancitizenshiponline.nic.in ವೆಬ್‌ಸೈಟ್‌ಗೆ ಭೇಟಿ ನೀಡಿ. 
* ನಂತರ ವೆಬ್‌ಸೈಟ್‌ನಲ್ಲಿ ಬಳಕೆದಾರರ ನೋಂದಣಿಗಾಗಿ (ಸೈನ್ ಅಪ್) ಮೊದಲು ನೀವು "ಸಿಎಎ 2019 ರ ಅಡಿಯಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ" ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
* ಬಳಿಕ ನೀವು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು ಮತ್ತು ಕ್ಯಾಪ್ಟಾ ಕೋಡ್ ಅನ್ನು ನಮೂದಿಸಬೇಕು. 
* ತದನಂತರ ಮುಂದಿನ ಪುಟದಲ್ಲಿ ನೀವು ಇಮೇಲ್ ಐಡಿ, ಹೆಸರು ಮತ್ತು ಮತ್ತೆ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು ಮತ್ತು ಸಲ್ಲಿಸು ಕ್ಲಿಕ್ ಮಾಡಿ...
* ಅದರ ನಂತರ ನೀವು ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯಲ್ಲಿ ಸ್ವೀಕರಿಸಿದ OTP ಅನ್ನು ನಮೂದಿಸಬೇಕು ಮತ್ತು ನಂತರ ಮತ್ತೊಮ್ಮೆ CAPTCHA ಅನ್ನು ನಮೂದಿಸಿ ಮತ್ತು OTP ಅನ್ನು ಪರಿಶೀಲಿಸಬೇಕು.
* ಇದರ ನಂತರ ಬಳಕೆದಾರರ ನೋಂದಣಿ (ಸೈನ್ ಅಪ್) ಪೂರ್ಣಗೊಳ್ಳುತ್ತದೆ...

ಇದರ ನಂತರ, ಲಾಗ್ ಇನ್ ವಿಂಡೋ ತೆರೆಯುತ್ತದೆ, ಇದರಲ್ಲಿ ನೀವು ಇಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು ಮತ್ತು ಕ್ಯಾಪ್ಚಾ ಅನ್ನು ನಮೂದಿಸಿ ಮತ್ತು ಮುಂದುವರಿಸಿ ಕ್ಲಿಕ್ ಮಾಡಬೇಕು. ನಂತರ OTP ಬರುತ್ತದೆ, ನೀವು ಅದನ್ನು ನಮೂದಿಸಬೇಕು ಮತ್ತು ಮತ್ತೆ CAPTCHA CODE ಅನ್ನು ನಮೂದಿಸಿ ಮತ್ತು VERIFYಎಂಬ ಆಯ್ಕೆಯನ್ನು ಕ್ಲಿಕ್ ಮಾಡಬೇಕು.  

ಇದನ್ನೂ ಓದಿ- CAA ಜಾರಿಗೊಳಿಸಿದ Modi Government, ಏನಿದು ಸಿಎಎ, ಇಲ್ಲಿದೆ ಅದರ ಕಂಪ್ಲೇಟ್ ಮಾಹಿತಿ

ಇದನ್ನು ಮಾಡಿದ ನಂತರ, "Click Here to Initiate Fresh Application" ಎಂಬ ಆಯ್ಕೆ ಕಾಣಿಸುತ್ತದೆ, ಅದನ್ನು ಕ್ಲಿಕ್ ಮಾಡಿದ ನಂತರ ನಿರಾಶ್ರಿತರಿಗೆ ತಮ್ಮ ಬಗ್ಗೆ 8 ರಿಂದ 11 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅವರು 2014 ಕ್ಕಿಂತ ಮೊದಲು ಬಂದಿದ್ದೀರಾ, ಅವರು ಎಲ್ಲಿಂದ ಬಂದರು, ಅವರ ಧರ್ಮ ಯಾವುದು, ಅವರು 5 ವರ್ಷಗಳಿಗೂ ಹೆಚ್ಚು ಕಾಲ ಎಲ್ಲಿ ವಾಸಿಸುತ್ತಿದ್ದಾರೆ... ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಇವುಗಳಿಗೆ ಅವರು ಹೌದು ಅಥವಾ ಇಲ್ಲ ಎಂಬ ಆಯ್ಕೆಯನ್ನು ಟಿಕ್ ಮಾಡುವ ಮೂಲಕ ಉತ್ತರಿಸಬೇಕು. ಅದರ ನಂತರ, CAA 2019 ರ ನೈಸರ್ಗಿಕೀಕರಣದ ನಿಬಂಧನೆಯಂತೆ, ಪೌರತ್ವಕ್ಕಾಗಿ ಸ್ವೀಕರಿಸಿ ಮತ್ತು ಸಲ್ಲಿಸಿ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಬೇಕು. 

ಅದರ ನಂತರ ನಿರಾಶ್ರಿತರು ತಮ್ಮ ಎಲ್ಲಾ ಮಾಹಿತಿ, ಪ್ರಸ್ತುತ ವಿಳಾಸ, ಕುಟುಂಬದ ಮಾಹಿತಿ, ಕ್ರಿಮಿನಲ್ ಪ್ರಕರಣದ ಬಗ್ಗೆ ಮಾಹಿತಿಯನ್ನು (ಯಾವುದಾದರೂ ಇದ್ದರೆ) ನಮೂದಿಸಿ ಮತ್ತು ಸಲ್ಲಿಸಬೇಕಾಗುತ್ತದೆ. ಬಳಿಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ಮತ್ತು ಆನ್‌ಲೈನ್ ಪಾವತಿ ಮಾಡುವ ಮೂಲಕ ಅವರು CAA 2019 ರ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News