ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್‌ಪಿಜಿ ಸಿಲಿಂಡರ್ ಬೆಲೆ 2,000 ರೂ.ಗೆ ಏರಬಹುದು: ಪಶ್ಚಿಮ ಬಂಗಾಳ ಸಿಎಂ

LPG Cylinder Price: ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್‌ಪಿ‌ಜಿ ಸಿಲಿಂಡರ್ ದರ 2,000ರೂ.ಗೆ ಏರಿಕೆಯಾಗಬಹುದು ಎಂದು  ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Written by - Yashaswini V | Last Updated : Mar 1, 2024, 12:03 PM IST
  • ಪಶ್ಚಿಮ ಬಂಗಾಳದ ಜಾರ್‌ಗ್ರಾಮ್ ಜಿಲ್ಲೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಸಿಎಂ ಮಮತಾ ಬ್ಯಾನರ್ಜಿ
  • ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ಸಿಎಂ ಮಮತಾ ಬ್ಯಾನರ್ಜಿ
  • ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಂದೊಮ್ಮೆ ಬಿಜೆಪಿ ಮತ್ತೆ ಗೆದ್ದರೆ, ಅಡುಗೆ ಅನಿಲ ದರ ₹ 1,500ದಿಂದ ₹ 2,000ಕ್ಕೆ ತಲುಪಬಹುದು ಎಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್‌ಪಿಜಿ ಸಿಲಿಂಡರ್ ಬೆಲೆ 2,000 ರೂ.ಗೆ ಏರಬಹುದು: ಪಶ್ಚಿಮ ಬಂಗಾಳ ಸಿಎಂ title=

West Bengal CM Mamata Banerjee: ಮುಂಬರುವ ಲೋಕಸಭೆ ಚುನಾವಣೆ 2024 ರಲ್ಲಿ ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪ್ರತಿ ಸಿಲಿಂಡರ್‌ಗೆ 2,000 ರೂ.ಗೆ ಏರಿಕೆಯಾಗಬಹುದು ಎಂದು ತೃಣಮೂಲ ಕಾಂಗ್ರೆಸ್ ವರಿಷ್ಠೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

ಗುರುವಾರ(ಫೆಬ್ರವರಿ 29) ಪಶ್ಚಿಮ ಬಂಗಾಳದ ಜಾರ್‌ಗ್ರಾಮ್ ಜಿಲ್ಲೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಸಿಎಂ ಮಮತಾ ಬ್ಯಾನರ್ಜಿ, ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. 

ಇದನ್ನೂ ಓದಿ- Lokasabha Election 2024: ಕಾಂಗ್ರೆಸ್‌ಗೆ ಸುಲಭ ತುತ್ತಾಗಲಿದೆಯಾ ಬೆಳಗಾವಿ?- ಇಲ್ಲಿದೆ ಅಸಲಿ ಗ್ರೌಂಡ್‌ ರಿಪೋರ್ಟ್‌

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಂದೊಮ್ಮೆ ಬಿಜೆಪಿ ಮತ್ತೆ ಗೆದ್ದರೆ, ಅಡುಗೆ ಅನಿಲ ದರ  ₹ 1,500ದಿಂದ  ₹ 2,000ಕ್ಕೆ ತಲುಪಬಹುದು. ಇದರಿಂದಾಗಿ ಮರದ ಕಟ್ಟಿಗೆ ಸಂಗ್ರಹಿಸಿ ಒಲೆ ಹಚ್ಚುವ ಹಳೆಯ ಅಭ್ಯಾಸಕ್ಕೆ ನಾವು ಹಿಂತಿರುಗಬೇಕಾಗಬಹುದು ಎಂದವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. 

MGNREGA ಬಾಕಿ ಪಾವತಿ: 
ರಾಜ್ಯಕ್ಕೆ ನೀಡಬೇಕಾದ ಅನುದಾನವನ್ನು ಕೇಂದ್ರ ಸರ್ಕಾರ ತಡೆ ಹಿಡಿದಿದೆ ಎಂದು ವಾಗ್ಧಾಳಿ ನಡೆಸಿದ ಸಿಎಂ ಮಮತಾ ಬ್ಯಾನರ್ಜಿ, ಈ ವೇಳೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು MGNREGA ಬಾಕಿ ಪಾವತಿಯನ್ನು ಕೂಡ ನೀಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. 

ಇದನ್ನೂ ಓದಿ- ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೆವೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದಿಂದ ಸಾಧ್ಯವಾಗದಿದ್ದರೆ, ರಾಜ್ಯ ಸರ್ಕಾರದಿಂದ ಮನೆಗಳ ನಿರ್ಮಾಣ: 
ಇದೇ ಸಂದರ್ಭದಲ್ಲಿ ಸೂರಿಲ್ಲದವರಿಗೆ ಸೂರು ಕಲ್ಪಿಸಲು ರೂಪಿಸಲಾಗಿರುವ ಕೇಂದ್ರ ಸರ್ಕಾರದ ಆವಾಸ್ ಯೋಜನೆ ಅಡಿಯಲ್ಲಿ ಏಪ್ರಿಲ್‌ನೊಳಗೆ ರಾಜ್ಯದಲ್ಲಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ರಾಜ್ಯ ಸರ್ಕಾರದಿಂದಲೇ ಮನೆಗಳನ್ನು ನಿರ್ಮಿಸಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ಘೋಷಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News