ಮಮತಾ ಬ್ಯಾನರ್ಜಿ ಬಾಂಗ್ಲಾದೇಶದ ಪ್ರಧಾನಿಯಾದರೆ ಒಳ್ಳೆಯದು: ಬಿಜೆಪಿ ಶಾಸಕ

ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿಗೆ ಬರಲಿದೆ. ಆದಾಗ್ಯೂ ಮಮತಾ ತಮ್ಮ ಮತ ಬ್ಯಾಂಕ್ ಉಳಿಸಿಕೊಳ್ಳಲು ಬಾಂಗ್ಲಾದೇಶಿಗರನ್ನು ರಕ್ಷಿಸಲು ಬಯಸಿದರೆ  ಅವರು ಬಾಂಗ್ಲಾದೇಶದ ಪ್ರಧಾನಿಯಾಗುವುದು ಉತ್ತಮ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಟೀಕಿಸಿದ್ದಾರೆ.

Last Updated : Sep 15, 2019, 07:36 AM IST
ಮಮತಾ ಬ್ಯಾನರ್ಜಿ ಬಾಂಗ್ಲಾದೇಶದ ಪ್ರಧಾನಿಯಾದರೆ ಒಳ್ಳೆಯದು: ಬಿಜೆಪಿ ಶಾಸಕ title=

ಬಲಿಯಾ: ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ) ವಿಷಯಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ  ಶನಿವಾರ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಮಮತಾ ಬ್ಯಾನರ್ಜಿ ಅವರು ಬಾಂಗ್ಲಾದೇಶದ ಪ್ರಧಾನಿಯಾದರೆ ಒಳ್ಳೆಯದು ಎಂದು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿಗೆ ಬರಲಿದೆ. ಆದಾಗ್ಯೂ ಮಮತಾ ತಮ್ಮ ಮತ ಬ್ಯಾಂಕ್ ಉಳಿಸಿಕೊಳ್ಳಲು ಬಾಂಗ್ಲಾದೇಶಿಗರನ್ನು ರಕ್ಷಿಸಲು ಬಯಸಿದರೆ  ಅವರು ಬಾಂಗ್ಲಾದೇಶದ ಪ್ರಧಾನಿಯಾಗುವುದು ಉತ್ತಮ. ಹೀಗೆ ಮುಂದುವರೆದರೆ ಅತಿ ಕೆಟ್ಟ ದಿನಗಳನ್ನು ಮಮತಾ ಎದುರಿಸಬೇಕಾಗುತ್ತದೆ ಎಂದು ಉತ್ತರಪ್ರದೇಶದ ಬಲ್ಲಿಯಾ ಮೂಲದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಅಸಾಧಾರಣ ಸಾಧನೆ ಕುರಿತು ಮಾತನಾಡಿದ ಸಿಂಗ್, "ಶ್ರೀಲಂಕಾ ಜನರು ಹನುಮಾನ್ ಜಿ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ ಲಂಕೆಗೆ ಹೋಗುವಲ್ಲಿ ಹನುಮಾನ್ ಯಶಸ್ವಿಯಾದಂತೆ, ಯೋಗಿ ಮತ್ತು ಅಮಿತ್ ಶಾ ಅವರು ಪಶ್ಚಿಮ ಬಂಗಾಳ ಪ್ರವೇಶಿಸಿದರು. ಹೀಗಾಗಿ ಲಂಕಿಣಿ ರಾಜ್ಯಕ್ಕೆ ರಾಮ ಪ್ರವೇಶಿಸಿದಂತಾಗಿದೆ. ಶೀಘ್ರದಲ್ಲಿಯೇ ಸರ್ಕಾರದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದರು.

ಭಾರತದಲ್ಲಿ ವಾಸಿಸುವ ವಿದೇಶಿಯರಿಗೆ ಮತದ ಮೇಲೆ ಪ್ರಭಾವ ಬೀರಲು ಅವಕಾಶ ನೀಡಬಾರದು ಎಂದು ಪ್ರತಿಪಾದಿಸಿದ ಸಿಂಗ್, "ಮಮತಾ ಅವರಿಗೆ ಭಾರತದಲ್ಲಿ ವಾಸಿಸಲು ಅವಕಾಶವಿದೆ. ಆದರೆ ಅವರು ರಾಷ್ಟ್ರ ವಿರೋಧಿ ಭಾವನೆಗಳಿಂದ ಸ್ಫೂರ್ತಿ ಪಡೆದರೆ ತಕ್ಕ ಪಾಠ ಕಲಿಸಲಾಗುತ್ತದೆ" ಎಂದು ಅವರು ಹೇಳಿದರು.

Trending News