ಬಿಹಾರದಲ್ಲಿ ಮಾತ್ರ ಎನ್‌‌ಡಿಎ ಭಾಗವಾಗಿರಲು ಜೆಡಿಯು ನಿರ್ಧಾರ

ಜಾರ್ಖಂಡ್, ಜಮ್ಮು-ಕಾಶ್ಮೀರ, ಹರಿಯಾಣ ಮತ್ತು ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಜೆಡಿಯು ಹೇಳಿದೆ.

Last Updated : Jun 9, 2019, 06:21 PM IST
ಬಿಹಾರದಲ್ಲಿ ಮಾತ್ರ ಎನ್‌‌ಡಿಎ ಭಾಗವಾಗಿರಲು ಜೆಡಿಯು ನಿರ್ಧಾರ title=

ಪಾಟ್ನಾ: ಬಿಹಾರದಲ್ಲಿ ಬಿಟ್ಟು ಉಳಿದ ರಾಜ್ಯಗಳಲ್ಲಿ ಎನ್‌‌ಡಿಎ ಭಾಗವಾಗಿರದಿರಲು ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ನಿರ್ಧರಿಸಿದೆ. 

ಜಾರ್ಖಂಡ್, ಜಮ್ಮು-ಕಾಶ್ಮೀರ, ಹರಿಯಾಣ ಮತ್ತು ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಜೆಡಿಯು ಹೇಳಿದ್ದು, ಭಾನುವಾರ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇತ್ತೀಚೆಗೆ ನಡೆದ ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಉತ್ತಮ ಪ್ರದರ್ಶನ ನೀಡಿತ್ತು. ಈ ಬೆನ್ನಲ್ಲೇ ಇತರ ರಾಜ್ಯಗಳಲ್ಲಿಯೂ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ಈ ಮೂಲಕ ಇತರ ರಾಜ್ಯಗಳಲ್ಲಿಯೂ ಪಕ್ಷ ಸಂಘಟನೆಗೆ ಮುಂದಾಗಿದೆ. 

ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಯು ಹಾಗೂ ಎಲ್ ಜೆಪಿಯನ್ನೊಳಗೊಂಡ ಎನ್ ಡಿಎ ಮೈತ್ರಿಕೂಟ  ಬಿಹಾರದಲ್ಲಿ 39 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ನಿತೀಶ್ ಕುಮಾರ್ ಪಕ್ಷ 16 ಸ್ಥಾನಗಳನ್ನು ಪಡೆದುಕೊಂಡಿತ್ತು. 

Trending News