ತೆಲಂಗಾಣದ ಕೆಸಿಆರ್ ಪಕ್ಷದ ಜೊತೆ ಪ್ರಶಾಂತ್ ಕಿಶೋರ್ ಒಪ್ಪಂದ..!...ಏನಾಯ್ತು ಕಾಂಗ್ರೆಸ್ ಸೇರುವ ಯೋಜನೆ?

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪಕ್ಷವು ಐಪ್ಯಾಕ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ, ಮುಂದಿನ ವರ್ಷ ತೆಲಂಗಾಣದಲ್ಲಿ ಚುನಾವಣೆ ಇರುವುದರ ಹಿನ್ನಲೆಯಲ್ಲಿ ಪಕ್ಷವು ಪ್ರಶಾಂತ್ ಕಿಶೋರ್ ಅವರ ಸಂಸ್ಥೆ ಜೊತೆ ಒಪ್ಪಂದವನ್ನು ಮಾಡಿಕೊಂಡಿದೆ.ಈಗಾಗಲೇ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎನ್ನುವ ಊಹಾಪೋಹಗಳು ತೀವ್ರಗೊಂಡಿರುವ ಬೆನ್ನಲ್ಲೇ ತೆಲಂಗಾಣ ರಾಷ್ಟ್ರ ಸಮಿತಿ ಜೊತೆ ಒಪ್ಪಂದ ಮಾಡಿಕೊಂಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

Last Updated : Apr 24, 2022, 09:12 PM IST
  • ಈಗಾಗಲೇ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎನ್ನುವ ಊಹಾಪೋಹಗಳು ತೀವ್ರಗೊಂಡಿರುವ ಬೆನ್ನಲ್ಲೇ ತೆಲಂಗಾಣ ರಾಷ್ಟ್ರ ಸಮಿತಿ ಜೊತೆ ಒಪ್ಪಂದ ಮಾಡಿಕೊಂಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.
 ತೆಲಂಗಾಣದ ಕೆಸಿಆರ್ ಪಕ್ಷದ ಜೊತೆ ಪ್ರಶಾಂತ್ ಕಿಶೋರ್ ಒಪ್ಪಂದ..!...ಏನಾಯ್ತು ಕಾಂಗ್ರೆಸ್ ಸೇರುವ ಯೋಜನೆ? title=

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪಕ್ಷವು ಐಪ್ಯಾಕ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ, ಮುಂದಿನ ವರ್ಷ ತೆಲಂಗಾಣದಲ್ಲಿ ಚುನಾವಣೆ ಇರುವುದರ ಹಿನ್ನಲೆಯಲ್ಲಿ ಪಕ್ಷವು ಪ್ರಶಾಂತ್ ಕಿಶೋರ್ ಅವರ ಸಂಸ್ಥೆ ಜೊತೆ ಒಪ್ಪಂದವನ್ನು ಮಾಡಿಕೊಂಡಿದೆ.ಈಗಾಗಲೇ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎನ್ನುವ ಊಹಾಪೋಹಗಳು ತೀವ್ರಗೊಂಡಿರುವ ಬೆನ್ನಲ್ಲೇ ತೆಲಂಗಾಣ ರಾಷ್ಟ್ರ ಸಮಿತಿ ಜೊತೆ ಒಪ್ಪಂದ ಮಾಡಿಕೊಂಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ಇದನ್ನೂ ಓದಿ : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಫೋನ್‌ ನಂಬರ್‌ ಕೊಟ್ಟ ಕಿರಾತಕ: ಮುಂದಾಗಿದ್ದೇನು ಗೊತ್ತಾ?

ಪ್ರಶಾಂತ್ ಕಿಶೋರ್ ಅವರು ಶನಿವಾರದಿಂದ ಹೈದರಾಬಾದ್‌ನಲ್ಲಿರುವ ಶ್ರೀ ರಾವ್ ಅವರ ಅಧಿಕೃತ ನಿವಾಸದಲ್ಲಿ ಬೀಡು ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.ಆದರೆ ಈಗ ಕೆಸಿಆರ್ ಅವರ ಪಕ್ಷದ ಜೊತೆಗಿನ ಒಪ್ಪಂದವು ತಾತ್ಕಾಲಿಕ ಮಟ್ಟಿಗೆ ಮಾತ್ರ ಎಂದು ಹೇಳಲಾಗುತ್ತಿದೆ.ಆದರೆ ಇನ್ನೊಂದೆಡೆಗೆ ಅವರು ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಈಗ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವು ಬಗ್ಗೆ ವದಂತಿಗಳು ತೀವ್ರವಾಗಿವೆ.ಆದ್ದರಿಂದ ಈಗ ಪ್ರಶಾಂತ್ ಅವರ ಸದ್ಯದ ನಿರ್ಧಾರ ನಿಜಕ್ಕೂ ಎಲ್ಲರಲ್ಲೂ ಗೊಂದಲ ಮೂಡಿಸಿದೆ.

ಇದನ್ನೂ ಓದಿ : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಫೋನ್‌ ನಂಬರ್‌ ಕೊಟ್ಟ ಕಿರಾತಕ: ಮುಂದಾಗಿದ್ದೇನು ಗೊತ್ತಾ?

ಇಲ್ಲಿಯವರೆಗೆ ಅವರು ಕಾಂಗ್ರೆಸ್ ನಾಯಕತ್ವದ ಜೊತೆಗಿನ ಮೂರು ಸಭೆಗಳಲ್ಲಿ, ಪಕ್ಷದ ಬೆಳವಣಿಗೆ ವಿಚಾರವಾಗಿ ಸಮಗ್ರವಾದ ಮಾಹಿತಿಯನ್ನು ಹಾಗೂ ಯೋಜನೆಯನ್ನು ಅವರು ವಿವರಿಸಿದ್ದಾರೆ.ಈಗ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲು ಮೇ 2 ರವರೆಗೆ ಗಡುವನ್ನು ನೀಡಿದ್ದಾರೆ ಎನ್ನಲಾಗಿದೆ.ಇನ್ನೊಂದೆಡೆಗೆ ಈಗ ಪ್ರಶಾಂತ್ ಕಿಶೋರ್ ಅವರು ನೀಡಿರುವ ಸಲಹೆಗಳನ್ನು ಚರ್ಚಿಸುವ ನಿಟ್ಟಿನಲ್ಲಿ ಹಿರಿಯ ನಾಯಕರು ಮತ್ತು ರಾಹುಲ್ ಗಾಂಧಿ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.ನಾಳೆ ನಡೆಯಲಿರುವ ನಿರ್ಣಾಯಕ ಸಭೆಯಲ್ಲಿ ಈ ವಿಚಾರವಾಗಿ ಅಂತಿಮ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ-ಬಿಎಸ್ವೈ

ಆದಾಗ್ಯೂ, ಕಾಂಗ್ರೆಸ್ ಹಿರಿಯರ ಒಂದು ವಿಭಾಗವು, ರಾಜ್ಯಗಳಲ್ಲಿ ಕಾಂಗ್ರೆಸ್‌ನೊಂದಿಗೆ ನೇರ ಸ್ಪರ್ಧೆಯಲ್ಲಿರುವ ಪಕ್ಷಗಳಿಗೆ ಕಿಶೋರ್ ಅವರ ಸಲಹೆಯ ಪಾತ್ರವನ್ನು ಗಮನದಲ್ಲಿಟ್ಟುಕೊಂಡು ಅವರೊಂದಿಗಿನ ಯಾವುದೇ ಸಂಬಂಧದ ಬಗ್ಗೆ ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ.ಕಿಶೋರ್ ಅವರ ಪ್ರಸ್ತಾಪವನ್ನು ಮೌಲ್ಯಮಾಪನ ಮಾಡಲು ಶ್ರೀಮತಿ ಸೋನಿಯಾ ಗಾಂಧಿ ರಚಿಸಿರುವ ವಿಶೇಷ ತಂಡವು ಅವರು ಇತರ ಎಲ್ಲಾ ರಾಜಕೀಯ ಪಕ್ಷಗಳಿಂದ ದೂರವಿರಲು ಮತ್ತು ಸಂಪೂರ್ಣವಾಗಿ ಕಾಂಗ್ರೆಸ್‌ಗೆ ತಮ್ಮನ್ನು ತೊಡಗಿಸಿಕೊಳ್ಳಲು ಬಯಸುತ್ತಾರೆ ಎಂದು ಮೂಲಗಳು ಸೂಚಿಸಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News