ಐಆರ್​ಸಿಟಿಸಿ ಹಗರಣ: ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ, ತೇಜಶ್ವಿ ಯಾದವ್ ಗೆ ಜಾಮೀನು

 2006 ರಲ್ಲಿ ಇಂಡಿಯನ್ ರೈಲ್ವೇ ಕೇಟರಿಂಗ್ ಅಂಡ್ ಟೂರಿಸಮ್ ಕಾರ್ಪೋರೇಶನ್ ಹೊಟೇಲ್ ಗಳಿಗೆ ಟೆಂಡರ್ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿತ್ತು. 

Last Updated : Jan 28, 2019, 10:59 AM IST
ಐಆರ್​ಸಿಟಿಸಿ ಹಗರಣ: ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ, ತೇಜಶ್ವಿ ಯಾದವ್ ಗೆ ಜಾಮೀನು title=

ನವದೆಹಲಿ: ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾವ್, ಪತ್ನಿ ರಾಬ್ರಿ ದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ಅವರಿಗೆ ಜಾಮೀನು ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. 

ಐಆರ್​ಸಿಟಿಸಿ ಹಗರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಎರಡು ಪ್ರಕರಣಗಳಲ್ಲಿ ಆರ್​​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೇರಿ ಮೂವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ದೆಹಲಿ ನ್ಯಾಯಾಲಯ ಜನವರಿ 28ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.

ಕಳೆದ ಡಿಸೆಂಬರ್ ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ನೀಡಿದ್ದ ಪಟಿಯಾಲಾ ಹೌಸ್ ನ್ಯಾಯಾಲಯ, ಇದೀಗ ಜಾಮೀನು ನೀಡಿದೆ. 2006 ರಲ್ಲಿ ಇಂಡಿಯನ್ ರೈಲ್ವೇ ಕೇಟರಿಂಗ್ ಅಂಡ್ ಟೂರಿಸಮ್ ಕಾರ್ಪೋರೇಶನ್ ಹೊಟೇಲ್ ಗಳಿಗೆ ಟೆಂಡರ್ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿತ್ತು. 

ಈ ಸಂಬಂಧ ಸಲ್ಲಿಸಲಾದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅರುಣ್ ಭಾರದ್ವಾಜ್, ಈ ಮೂವರಿಗೆ ನೀಡಲಾಗಿದ್ದ ಜಾಮೀನು ಅವಧಿಯನ್ನು ವಿಸ್ತರಿಸಿದ್ದಾರೆ.  ಜ.28 ರಂದು ಲಾಲು ಮತ್ತಿತರರ ಸಾಮಾನ್ಯ ಜಾಮೀನು ಅರ್ಜಿಗಳ ಬಗ್ಗೆ ನ್ಯಾಯಾಲಯ ತನ್ನ ಆದೇಶವನ್ನು ಪ್ರಕಟಿಸಲಿದೆ.

Trending News