ಕಾರು ಅಪಘಾತದಲ್ಲಿ ಲಾಲೂ ಪುತ್ರ ತೇಜ್ ಪ್ರತಾಪ್ ಯಾದವ್ ಗೆ ಗಾಯ

ಶುಕ್ರವಾರದಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖಂಡ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಅವರು ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ.

Last Updated : May 31, 2019, 04:34 PM IST
ಕಾರು ಅಪಘಾತದಲ್ಲಿ ಲಾಲೂ ಪುತ್ರ ತೇಜ್ ಪ್ರತಾಪ್ ಯಾದವ್ ಗೆ ಗಾಯ title=

ನವದೆಹಲಿ: ಶುಕ್ರವಾರದಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖಂಡ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಅವರು ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ.

ಈ ಘಟನೆ ಬಿಹಾರದ ರಾಜಧಾನಿ ಪಾಟ್ನಾ ದ ಇಕೋ ಪಾರ್ಕ್ ಎದುರು ನಡೆದಿದೆ.ತೇಜ್ ಪ್ರತಾಪ್ ಮಾರುತಿ ಬ್ರೆಝಾಜಾದಲ್ಲಿ ಇಬ್ಬರು ಸಹಾಯಕರೊಂದಿಗೆ ಪ್ರಯಾಣ ಮಾಡುತ್ತಿದ್ದರು ಆಗ ಏಕಾಏಕಿ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಎರಡು ವಾಹನಗಳು ನುಜ್ಜು ನುಜ್ಜಾಗಿವೆ. ತೇಜ್ ಪ್ರತಾಪ್ ಅವರ ಕಾಲಿಗೆ ಗಾಯಗಳಾಗಿದ್ದು ಜೊತೆಗೆ ಅವರ ಸಹಾಯಕ ತಲೆಗೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.

ಚಾಲಕ ಸೇರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಈಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Trending News