ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಆಹ್ವಾನ ಸ್ವೀಕರಿಸಿದ ಮಮತಾ ಬ್ಯಾನರ್ಜೀ

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪರಸ್ಪರ ಟೀಕಾಪ್ರಹಾರ ನಡೆಸಿದ್ದ ಮೋದಿ ಮತ್ತು ಮಮತಾ ಬ್ಯಾನರ್ಜೀ ಈಗ ಅದಕ್ಕೆಲ್ಲ ತಾತ್ಕಾಲಿಕ ವಿರಾಮ ಬಿದ್ದಂತಾಗಿದೆ.ಪ್ರಧಾನಿ ಮೋದಿ ಈಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀಯವರನ್ನು ತಮ್ಮ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಅವರು ಒಪ್ಪಿಗೆ ನೀಡಿ ಬರುವದಾಗಿ ಹೇಳಿದ್ದಾರೆ.

Last Updated : May 28, 2019, 07:37 PM IST
ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಆಹ್ವಾನ ಸ್ವೀಕರಿಸಿದ ಮಮತಾ ಬ್ಯಾನರ್ಜೀ title=

ನವದೆಹಲಿ: ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪರಸ್ಪರ ಟೀಕಾಪ್ರಹಾರ ನಡೆಸಿದ್ದ ಮೋದಿ ಮತ್ತು ಮಮತಾ ಬ್ಯಾನರ್ಜೀ ಈಗ ಅದಕ್ಕೆಲ್ಲ ತಾತ್ಕಾಲಿಕ ವಿರಾಮ ಬಿದ್ದಂತಾಗಿದೆ.ಪ್ರಧಾನಿ ಮೋದಿ ಈಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀಯವರನ್ನು ತಮ್ಮ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಅವರು ಒಪ್ಪಿಗೆ ನೀಡಿ ಬರುವದಾಗಿ ಹೇಳಿದ್ದಾರೆ.

42 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜೀಯ ತೃಣಮೂಲ ಪಕ್ಷ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆದಿತ್ತು. ಹಲವಾರು ಹಿಂಸಾಚಾರದ ನಡುವೆಯೂ ಕೂಡ ಬಂಗಾಳದಲ್ಲಿ ಹೆಚ್ಚಿನ ಪ್ರಮಾಣದ ಮತದಾನ ನಡೆದಿತ್ತು. ಬಿಜೆಪಿ 18 ಸ್ಥಾನಗಳನ್ನು ಗೆಲ್ಲುವುದರ ಮೂಲಕ ತೃಣ ಮೂಲ ಪಕ್ಷಕ್ಕೆ ನೇರ ಪ್ರತಿಸ್ಪರ್ಧಿ ಎನ್ನುವುದನ್ನು ಈ ಚುನಾವಣೆಯಲ್ಲಿ ಸ್ಪಷ್ಟಪಡಿಸಿತ್ತು. ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಸುಮಾರು 50 ಕ್ಕೂ ಅಧಿಕ ಕೌನ್ಸಿಲರಗಳು ಟಿಎಂಸಿಯನ್ನು ತೊರೆದು ಬಿಜೆಪಿಗೆ ಸೇರಿದ್ದಾರೆ.

ಈಗ ಇಂತಹ ರಾಜಕೀಯ ವೈರತ್ವಕ್ಕೆ ತಾತ್ಕಾಲಿಕ ವಿರಾಮ ನೀಡಿ ಪ್ರಧಾನಿ ಮೋದಿ ಈಗ ಮಮತಾ ಬ್ಯಾನರ್ಜೀ ಅವರನ್ನು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ.

 

Trending News