Mamata Banerjee: ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ..!

ನಾಮಪತ್ರ ಸಲ್ಲಿಕೆ ವೇಳೆ, ದೇವಸ್ಥಾನವೊಂದರಲ್ಲಿ ಪೂಜೆ ಸಲ್ಲಿಸಿ ಬರುವಾಗ ನಾಲ್ಕು ಜನರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ.

Last Updated : Mar 10, 2021, 08:14 PM IST
  • ಪಶ್ಚಿಮ ಬಂಗಾಳದ ನಂದಿ ಗ್ರಾಮದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ನನ್ನ ಮೇಲೆ ಹಲ್ಲೆಯಾಗಿದೆ.
  • ನಾಮಪತ್ರ ಸಲ್ಲಿಕೆ ವೇಳೆ, ದೇವಸ್ಥಾನವೊಂದರಲ್ಲಿ ಪೂಜೆ ಸಲ್ಲಿಸಿ ಬರುವಾಗ ನಾಲ್ಕು ಜನರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ.
  • ಭದ್ರತೆ ಒದಗಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
Mamata Banerjee: ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ..! title=

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿ ಗ್ರಾಮದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ, ದೇವಸ್ಥಾನವೊಂದರಲ್ಲಿ ಪೂಜೆ ಸಲ್ಲಿಸಿ ಬರುವಾಗ ನಾಲ್ಕು ಜನರು ನನ್ನ ಮೇಲೆ ಹಲ್ಲೆ(Attacked) ಮಾಡಿದ್ದಾರೆ, ಸ್ಥಳೀಯ ಪೊಲೀಸರು ಯಾವುದೇ ಭದ್ರತೆ ನೀಡಿಲ್ಲ.

Uttar Pradesh: ಮಹಿಳೆಯರಿಗೆ 'ಜೀನ್ಸ್ ಬ್ಯಾನ್' ಮಾಡಿದ ಉತ್ತರ ಪ್ರದೇಶ ಖಾಪ್ ಪಂಚಾಯತ್!

ಭದ್ರತೆ ಒದಗಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಮಮತಾ ಬ್ಯಾನರ್ಜಿ(Mamata Banerjee) ಆರೋಪಿಸಿದ್ದಾರೆ. ಹಲ್ಲೆಯಿಂದ ತನ್ನ ಕಾಲಿಗೆ ಬಲಗಿ ಏಟು ಬಿದ್ದಿದೆ ಎಂದು ಹೇಳಿದ್ದಾರೆ. ಆದರೆ, ಈ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ ಮಮತಾ ಬ್ಯಾನರ್ಜಿ ನಾಟಕ ಆರಂಭವಾಗಿದೆ, ಇದು ಟಿಎಂಸಿ ಹಾಗೂ ಮಮತಾ ಪ್ರೇರಿತ ನಾಟಕ ಎಂದು ತಿರುಗೇಟು ನೀಡಿದೆ.

ಸಾಮೂಹಿಕ ಅತ್ಯಾಚಾರದ ಪ್ರಕರಣ ದಾಖಲಿಸಿದ ನಂತರ, ರಸ್ತೆ ಅಪಘಾತದಲ್ಲಿ ಬಾಲಕಿಯ ತಂದೆ ಸಾವು

ಈ ಘಟನೆ ಹಾಗೂ ಭದ್ರತಾ ಲೋಪದ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲು ಟಿಎಂಸಿ(TMC) ನಿರ್ಧರಿಸಿದೆ. ಇನ್ನೊಂದೆಡೆ ಇಂದು ನಂದಿಗ್ರಾಮದಲ್ಲಿ ನೆಲೆಸಬೇಕಿದ್ದ, ಮಮತಾ ಬ್ಯಾನರ್ಜಿ ತಮ್ಮ ಪ್ರವಾಸ ರದ್ದುಪಡಿಸಿ ವಾಪಸಾಗುತ್ತಿದ್ದಾರೆ.

ಆಧಾರ್ ಗೆ ಯಾವ ಮೊಬೈಲ್ ನಂಬರ್ ಲಿಂಕ್ ಆಗಿದೆ ಎಂದು ಮರೆತಿದ್ದೀರಾ ? ಇಲ್ಲಿದೆ ಕಂಡು ಕೊಳ್ಳುವ ರೀತಿ..

ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ನಂದಿಗ್ರಾಮ( Nandigram)ದಿಂದ ಸ್ಪರ್ಧಿಸುತ್ತಿದ್ದಾರೆ, ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯು ಸುವೇಂದು ಅಧಿಕಾರಿಯನ್ನು ಕಣಕ್ಕಿಳಿಸಿದೆ.

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಮಹಿಳೆಯರೇಕಿಲ್ಲ..?

ಮಾರ್ಚ್ 27ಕ್ಕೆ ಮೊದಲ ಹಂತದಲ್ಲಿ ಚುನಾವಣೆ ಆರಂಭಗೊಳ್ಳಲಿದೆ. ಏಪ್ರಿಲ್ 29ಕ್ಕೆ ಅಂತಿಮ ಹಂತದ ಚುನಾವಣೆ(Election) ನಡೆಯಲಿರುವುದಾಗಿ ಆಯೋಗ ತಿಳಿಸಿದೆ. ಮೇ 2ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ.

West Bengal: ಪಿಎಂ ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿಯ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ವಿಧಾನಸಭೆಗಳಲ್ಲಿ ತಕ್ಷಣವೇ ನೀತಿ ಸಂಹಿತೆ ಜಾರಿಗೆ ಬರಲಿದೆ. 5 ರಾಜ್ಯಗಳಲ್ಲಿನ 824 ಕ್ಷೇತ್ರಗಳಲ್ಲಿ 18.68 ಕೋಟಿ ಮತದಾರರಿದ್ದಾರೆ. ಚುನಾವಣಾ ಆಯೋಗದ ಸಹಾಯವಾಣಿ ಸಂಖ್ಯೆ 1950 ಬಳಸಲು ಸೂಚಿಸಲಾಗಿದೆ.

ಕೇರಳ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದ ಪಿ.ಸಿ.ಚಾಕೋ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News