Odisha Train Accident: ದೋಷಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ, ಘಟನೆಯ ಕುರಿತು ಪ್ರಧಾನಿ ಮೋದಿ ಹೇಳಿಕೆ

Coromandel Express Accident: ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಅವರು ಕಟಕ್‌ನ ಆಸ್ಪತ್ರೆಗಳಲ್ಲಿ ದಾಖಲಾದ ಗಾಯಾಳುಗಳನ್ನು ಸಹ ಭೇಟಿಯಾಗಿದ್ದಾರೆ. ಘಟನಾ ಸ್ಥಳದ ಪರಿಶೀಲನೆಯ ವೇಳೆ ಪ್ರಧಾನಿ ಮೋದಿ ಜೊತೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಹ ಉಪಸ್ಥಿತರಿದ್ದರು.  

Written by - Nitin Tabib | Last Updated : Jun 3, 2023, 07:33 PM IST
  • ದುಃಖಿತ ಕುಟುಂಬಗಳಿಗೆ ಅನಾನುಕೂಲತೆ ಉಂಟಾಗದಂತೆ ವಿಶೇಷ ಕಾಳಜಿ ವಹಿಸಬೇಕು ಮತ್ತು ಸಂತ್ರಸ್ತರಿಗೆ ಅಗತ್ಯ ನೆರವು ನೀಡುವುದನ್ನು ಮುಂದುವರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
  • ಇಂದು ಮುಂಜಾನೆ ಪ್ರಧಾನಿ ಮೋದಿ ಅವರು ರೈಲು ಅಪಘಾತದ ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತಮಟ್ಟದ ತುರ್ತು ಸಭೆ ಕರೆದಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ.
  • ಅಪಘಾತದಲ್ಲಿ ಇದುವರೆಗೆ 288 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 900ಕ್ಕೂ ಹೆಚ್ಚು ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
Odisha Train Accident: ದೋಷಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ, ಘಟನೆಯ ಕುರಿತು ಪ್ರಧಾನಿ ಮೋದಿ ಹೇಳಿಕೆ title=

PM Modi In Odisha: ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವರು ಕಟಕ್‌ನ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಸಹ ಭೇಟಿಯಾಗಿ ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಜೊತೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಉಪಸ್ಥಿತರಿದ್ದರು. ಕಟಕ್‌ನ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಪ್ರಧಾನಿ ಮೋದಿ, ಈ ಅಪಘಾತದ ದೋಷಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ಹೇಳಿದ್ದಾರೆ. ದೋಷಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ "ಇದೊಂದು ಅತ್ಯಂತ ನೋವು ಕೊಡುವ ಸಂಗತಿಯಾಗಿದೆ. ಗಾಯಾಳುಗಳ ಚಿಕಿತ್ಸೆಗೆ ಸರ್ಕಾರ ಯಾವುದೇ ರೀತಿಯ ಕೊರತೆಯಾಗಲು ಬಿಡುವುದಿಲ್ಲ. ಇದು ಗಂಭೀರ ಘಟನೆಯಾಗಿದೆ, ಪ್ರತಿ ಕೋನದಿಂದ ತನಿಖೆ ನಡೆಸಲು ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು" ಎಂದು ಹೇಳಿದ್ದಾರೆ. ಸರ್ಕಾರ ರೈಲ್ವೇ ಹಳಿ ಮರುಸ್ಥಾಪನೆಗಾಗಿ ಕೆಲಸ ಮಾಡುತ್ತಿದೆ. ನಾನು ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿದ್ದೇನೆ. ಅಪಘಾತದಿಂದ ಸಂತ್ರಸ್ತರಾದ ಎಲ್ಲರಿಗೂ ಸರ್ಕಾರವು ಎಲ್ಲಾ ಅಗತ್ಯತೆಗಳಲ್ಲಿ ಸಹಾಯ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು ಭುವನೇಶ್ವರದಿಂದ ಉತ್ತರಕ್ಕೆ 170 ಕಿಮೀ ದೂರದಲ್ಲಿರುವ ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ ಘಟನಾ ಸ್ಥಳದ ಬಳಿ ಪ್ರಧಾನಿ ಮೋದಿ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಂದಿಳಿದಿದ್ದಾರೆ. ಬಾಲಸೋರ್ ಜಿಲ್ಲಾ ಆಸ್ಪತ್ರೆಯಲ್ಲಿ ಅಪಘಾತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ್ದಾರೆ. ಪ್ರಧಾನಮಂತ್ರಿ ಅವರು ಸ್ಥಳದಿಂದಲೇ ಸಂಪುಟ ಕಾರ್ಯದರ್ಶಿ ಮತ್ತು ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದಾರೆ ಮತ್ತು ಗಾಯಾಳುಗಳು ಹಾಗೂ ಅವರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಕೋರಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ-ರೇಪ್ ಸಂತ್ರಸ್ತೆಯ ಕುಂಡಲಿ ವರದಿ ಕೇಳಿದ ಹೈಕೋರ್ಟ್, ಹುಡುಗಿ ಮಾಂಗಲಿಕಳಾಗಿದ್ದಾಳೆ ತಿಳಿಯುವ ಅವಶ್ಯಕತೆ ಇಲ್ಲ ಎಂದ ಸುಪ್ರೀಂ

ದುಃಖಿತ ಕುಟುಂಬಗಳಿಗೆ ಅನಾನುಕೂಲತೆ ಉಂಟಾಗದಂತೆ ವಿಶೇಷ ಕಾಳಜಿ ವಹಿಸಬೇಕು ಮತ್ತು ಸಂತ್ರಸ್ತರಿಗೆ ಅಗತ್ಯ ನೆರವು ನೀಡುವುದನ್ನು ಮುಂದುವರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ಮುಂಜಾನೆ ಪ್ರಧಾನಿ ಮೋದಿ ಅವರು ರೈಲು ಅಪಘಾತದ ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತಮಟ್ಟದ ತುರ್ತು ಸಭೆ ಕರೆದಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ. ಅಪಘಾತದಲ್ಲಿ ಇದುವರೆಗೆ 288 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 900ಕ್ಕೂ ಹೆಚ್ಚು ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ-Train Collision: ಬಾಲಾಸೋರ್ ತಲುಪಿದ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಶುಕ್ರವಾರ ಸಂಜೆ ಬಾಲಸೋರ್‌ನಲ್ಲಿ ಕೋಚ್ ಹಳಿತಪ್ಪಿದ ನಂತರ ಮೂರು ರೈಲುಗಳು ಪರಸ್ಪರ ಡಿಕ್ಕಿ ಹೊಡೆದಿದ್ದವು ಎಂಬುದು ಇಲ್ಲಿ ಉಲ್ಲೇಖನೀಯ. ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಶಾಮೀಲಾಗಿವೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News