ಸತತ ಎರಡನೇ ದಿನವೂ ಏರಿಕೆ ಕಂಡ ಪೆಟ್ರೋಲ್-ಡೀಸೆಲ್‌!

ಯುಎಸ್ ಮತ್ತು ಚೀನಾ ನಡುವೆ ನಡೆಯುತ್ತಿರುವ ವ್ಯಾಪಾರ ಯುದ್ಧದಲ್ಲಿ ಮೃದುಧೋರಣೆ ನಂತರ, ದೇಶೀಯ ಮಾರುಕಟ್ಟೆಯು ಶುಕ್ರವಾರ ಬೆಳಿಗ್ಗೆ ಸತತ ಎರಡನೇ ದಿನವೂ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ದಾಖಲಿಸಿದೆ.

Last Updated : Sep 13, 2019, 09:32 AM IST
ಸತತ ಎರಡನೇ ದಿನವೂ ಏರಿಕೆ ಕಂಡ ಪೆಟ್ರೋಲ್-ಡೀಸೆಲ್‌! title=

ಬೆಂಗಳೂರು: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸ್ವಲ್ಪ ಏರಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಗುರುವಾರ ಏರಿಕೆಯಾಗಿದೆ. ಈ ಹಿಂದೆ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಗುರುವಾರವೂ ಹೆಚ್ಚಾಗಿದ್ದು, ಶುಕ್ರವಾರ ಬೆಳಿಗ್ಗೆ ಪೆಟ್ರೋಲ್‌ನಲ್ಲಿ 7 ಪೈಸೆ ಮತ್ತು ಡೀಸೆಲ್‌ನಲ್ಲಿ 9 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಪೆಟ್ರೋಲ್ 71.89 ರೂ ಮತ್ತು ಡೀಸೆಲ್ ಲೀಟರ್‌ಗೆ 65.28 ರೂ. ತಲುಪಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 74.34 ರೂ. ಮತ್ತು ಡೀಸೆಲ್ ಬೆಲೆ 67.50 ರೂ. ಆಗಿದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್ 

(ರೂ./ಲೀ)

ಡೀಸೆಲ್ 

(ರೂ./ಲೀ)

ದೆಹಲಿ 71.89 65.28
ಕೊಲ್ಕತ್ತಾ 74.62 67.69
ಮುಂಬೈ 77.57 68.46
ಚೆನ್ನೈ 74.70 68.99
ಬೆಂಗಳೂರು 74.34 67.50
ಹೈದರಾಬಾದ್ 76.42 71.16
ತಿರುವನಂತಪುರಂ 75.37 70.39

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News