ಪೆಟ್ರೋಲ್-ಡೀಸೆಲ್ ದರ ಇಳಿಕೆ

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಯೊಂದಿಗಿನ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.  

Last Updated : Jun 22, 2018, 09:10 AM IST
ಪೆಟ್ರೋಲ್-ಡೀಸೆಲ್ ದರ ಇಳಿಕೆ title=

ನವದೆಹಲಿ: ದೇಶಾದ್ಯಂತ ಇಂದು ಬೆಳಗ್ಗೆ ತೈಲ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್​ ದರದಲ್ಲಿ 30 ರಿಂದ 40 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ 10 ಪೈಸೆ ಇಳಿಕೆಯಾಗಿದೆ. ಈ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಚಾಲ್ತಿಯಲ್ಲಿರಲಿದೆ.

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಯೊಂದಿಗಿನ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 76.02 67.68
ಕೋಲ್ಕತ್ತಾ 78.70 70.23
ಮುಂಬೈ 83.74 71.99
ಚೆನ್ನೈ 78.89 71.44
ಬೆಂಗಳೂರು 77.25 68.73
ಹೈದರಾಬಾದ್ 80.52 73.56
ತಿರುವನಂತಪುರಂ 79.11 72.45

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx

Trending News