ಶೀಘ್ರದಲ್ಲೇ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಗೆ ಸೇರ್ಪಡೆ

ಇತ್ತೀಚೆಗಷ್ಟೇ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸೋಲಿನ ನಂತರ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಮತ್ತು ಕಾಂಗ್ರೆಸ್‌ನ ಉನ್ನತ ನಾಯಕರ ಜೊತೆ ಶನಿವಾರ ಸಭೆ ನಡೆಸಿದರು. ಮೂಲಗಳ ಪ್ರಕಾರ ಅವರು ಮುಂದಿನ ದಿನಗಳಲ್ಲಿ ಪಕ್ಷವನ್ನು ಸೇರಲಿದ್ದಾರೆ ಆದರೆ ಅವರು ಯಾವುದೇ ಹುದ್ದೆಯ ಪ್ರಸ್ತಾಪವನ್ನು ಮುಂದಿಟ್ಟಿಲ್ಲ ಎನ್ನಲಾಗಿದೆ.

Written by - Zee Kannada News Desk | Last Updated : Apr 16, 2022, 09:55 PM IST
  • ಕಿಶೋರ್ ಅವರು ಈ ಹಿಂದೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದರು.
  • ಶನಿವಾರದಂದು ಕಿಶೋರ್ ಅವರು 2024 ರ ಸಾರ್ವತ್ರಿಕ ಚುನಾವಣೆಯ ಕುರಿತಾಗಿ ಸೋನಿಯಾ ಗಾಂಧಿ ಅವರ ಜೊತೆ ಮಹತ್ವದ ಮಾತುಕತೆ ನಡೆಸಿದರು ಎನ್ನಲಾಗಿದೆ.
 ಶೀಘ್ರದಲ್ಲೇ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಗೆ ಸೇರ್ಪಡೆ title=

ನವದೆಹಲಿ: ಇತ್ತೀಚೆಗಷ್ಟೇ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸೋಲಿನ ನಂತರ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಮತ್ತು ಕಾಂಗ್ರೆಸ್‌ನ ಉನ್ನತ ನಾಯಕರ ಜೊತೆ ಶನಿವಾರ ಸಭೆ ನಡೆಸಿದರು. ಮೂಲಗಳ ಪ್ರಕಾರ ಅವರು ಮುಂದಿನ ದಿನಗಳಲ್ಲಿ ಪಕ್ಷವನ್ನು ಸೇರಲಿದ್ದಾರೆ ಆದರೆ ಅವರು ಯಾವುದೇ ಹುದ್ದೆಯ ಪ್ರಸ್ತಾಪವನ್ನು ಮುಂದಿಟ್ಟಿಲ್ಲ ಎನ್ನಲಾಗಿದೆ.

ಕಿಶೋರ್ ಅವರು ಈ ಹಿಂದೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದರು.ಶನಿವಾರದಂದು ಕಿಶೋರ್ ಅವರು 2024 ರ ಸಾರ್ವತ್ರಿಕ ಚುನಾವಣೆಯ ಕುರಿತಾಗಿ ಸೋನಿಯಾ ಗಾಂಧಿ ಅವರ ಜೊತೆ ಮಹತ್ವದ ಮಾತುಕತೆ ನಡೆಸಿದರು ಎನ್ನಲಾಗಿದೆ

ಕಿಶೋರ್ ಅವರು ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆಯೇ ಎಂಬುದು ಸೇರಿದಂತೆ ಅವರ ಸಲಹೆಗಳ ಬಗ್ಗೆ ಒಂದು ವಾರದಲ್ಲಿ ನಿರ್ಧಾರವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.ಇತ್ತೀಚಿನ ವಿಧಾನಸಭಾ ಚುನಾವಣೆಗೂ ಮುನ್ನ ಕಿಶೋರ್ ಕಾಂಗ್ರೆಸ್ ಸೇರುವ ಸಾಧ್ಯತೆಯ ಬಗ್ಗೆ ಈ ಹಿಂದೆಯೂ ಭಾರೀ ಊಹಾಪೋಹಗಳು ಎದ್ದಿದ್ದವು.ಜನಪಥ್ ನಿವಾಸದಲ್ಲಿ ನಾಲ್ಕು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ಮುಂಬರುವ ವಿಧಾನಸಭಾ ಚುನಾವಣೆ ಮತ್ತು ಮುಂದಿನ ಲೋಕಸಭೆ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಿದರು.

.

ಇದನ್ನೂ ಓದಿ: ಆಂತರಿಕ ಚುನಾವಣೆಗೂ ಮೊದಲು ಡಿಜಿಟಲ್ ಸದಸ್ಯತ್ವ ಪಡೆದುಕೊಂಡ ಸೋನಿಯಾ ಗಾಂಧಿ

ಮೂಲಗಳ ಪ್ರಕಾರ, ಕಿಶೋರ್ ಅವರು "ಯಾವುದೇ ನಿರೀಕ್ಷೆಗಳಿಲ್ಲದೆ" ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ ಮತ್ತು ಏನನ್ನೂ ಬಯಸುವುದಿಲ್ಲ ಆದರೆ ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ತಮ್ಮ ಯೋಜನೆಯನ್ನು ಕಾರ್ಯಗತಗೊಳಿಸಬೇಕು ಎಂದು ಸಭೆಗೆ ತಿಳಿಸಿದರು ಎಂದು ಪಿಟಿಐ ವರದಿ ಮಾಡಿದೆ. 

ಸಲಹೆಗಳನ್ನು ಚರ್ಚಿಸಲು ಗುಂಪು ರಚಿಸಲಾಗುವುದು ಎಂದು ವೇಣುಗೋಪಾಲ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು."ಪ್ರಶಾಂತ್ ಕಿಶೋರ್ ಅವರು 2024 ರ ಚುನಾವಣಾ ಕಾರ್ಯತಂತ್ರದ ವಿವರವಾದ ಪ್ರಸ್ತುತಿಯನ್ನು ಮಾಡಿದ್ದಾರೆ. ಇದಕ್ಕೆ ಸ್ವಲ್ಪ ವಿವರವಾದ ಚರ್ಚೆಯ ಅಗತ್ಯವಿದೆ ಮತ್ತು ಈ ಸಂಪೂರ್ಣ ಪ್ರಸ್ತುತಿಯನ್ನು ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷರು ಸಣ್ಣ ತಂಡವನ್ನು ರಚಿಸುತ್ತಾರೆ.ಅಂತಿಮ ನಿರ್ಧಾರಕ್ಕಾಗಿ ಆ ಗುಂಪು ಒಂದು ವಾರದ ಅವಧಿಯಲ್ಲಿ ವರದಿಯನ್ನು ಸಲ್ಲಿಸುತ್ತದೆ ಎಂದು ಹೇಳಿದರು.

ಪ್ರಶಾಂತ್ ಕಿಶೋರ್  ಅವರು ಸಭೆಯಲ್ಲಿ ಕಾಂಗ್ರೆಸ್ ಪಕ್ಷವು 370 ಸ್ಥಾನಗಳ ಮೇಲೆ ಕೇಂದ್ರೀಕರಿಸಬೇಕು ಎಂದು ಹೇಳಿದರು.ಯುಪಿ, ಬಿಹಾರ ಮತ್ತು ಒಡಿಶಾದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಬೇಕು.ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಹೋರಾಡಬೇಕು ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.ಇದಕ್ಕೆ ರಾಹುಲ್ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Vikramaditya Singh : ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಮತ್ತೊಬ್ಬ ನಾಯಕ

ಕಳೆದ ಎರಡು ಸಾರ್ವತ್ರಿಕ ಚುನಾವಣೆಗಳು ಮತ್ತು ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪದೇ ಪದೇ ಚುನಾವಣಾ ಸೋಲುಗಳಿಂದ ಕಂಗೆಟ್ಟಿದೆ. ಕಳೆದ ಕೆಲವು ವರ್ಷಗಳಲ್ಲಿ ಅದರ ಚುನಾವಣಾ ಗ್ರಾಫ್ ನಿರಂತರವಾಗಿ ಕುಸಿಯುತ್ತಿದೆ.ಜೊತೆಗೆ ನಾಯಕತ್ವದ ವಿಚಾರದಲ್ಲಿ ಹಳೆಯ ಮತ್ತು ಹೊಸ ನಾಯಕರ ನಡುವೆ ಆಂತರಿಕ ಸಂಘರ್ಷವು ಮುಂದುವರೆದಿದೆ.ಈ ಹಿನ್ನಲೆಯಲ್ಲಿ ಮುಂಬರುವ ದಿನಗಳಲ್ಲಿ ಪಕ್ಷದ ಕಾರ್ಯತಂತ್ರವನ್ನು ರೂಪಿಸಲು ಶೀಘ್ರದಲ್ಲೇ ರಾಜಸ್ತಾನದಲ್ಲಿ ಚಿಂತನ ಶಿವರ್ ವನ್ನು ನಡೆಸಲಿದೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News