Presidential Polls 2022 : ರಾಷ್ಟ್ರಪತಿ ಚುನಾವಣೆ 2022: ಇಂದು ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು!

ವಿರೋಧ ಪಕ್ಷಗಳು ತಮ್ಮ ಸಾಮಾನ್ಯ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಿದೆ. ಸಿನ್ಹಾ ಅವರು ಜೂನ್ 27 ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

Written by - Channabasava A Kashinakunti | Last Updated : Jun 24, 2022, 01:08 PM IST
  • ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದು
  • ಪ್ರಧಾನಿ ಮೋದಿ ಮೊದಲ ಪ್ರತಿಪಾದಕರಾಗುವ ನಿರೀಕ್ಷೆಯಿದೆ
  • ಸಾಮಾನ್ಯ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ
Presidential Polls 2022 : ರಾಷ್ಟ್ರಪತಿ ಚುನಾವಣೆ 2022: ಇಂದು ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು! title=

ನವದೆಹಲಿ : ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದು. ಇದಕ್ಕೂ ಮೊದಲು ನವದೆಹಲಿಗೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಸರ್ಕಾರದ ಹಿರಿಯ ಸಚಿವರನ್ನು ಭೇಟಿ ಮಾಡಿದರು. 

ಮುರ್ಮು ಅವರು ಇಂದು ನಾಮಪತ್ರ ಸಲ್ಲಿಸುತ್ತಿದ್ದಂತೆ, ಪ್ರಧಾನಿ ಮೋದಿ ಮೊದಲ ಪ್ರತಿಪಾದಕರಾಗುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್), ಒಡಿಶಾ ಮುಖ್ಯಮಂತ್ರಿ ಮತ್ತು ಬಿಜೆಡಿ (ಬಿಜು ಜನತಾ ದಳ) ಮುಖ್ಯಸ್ಥ ನವೀನ್ ಪಟ್ನಾಯಕ್, ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ (ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ) ರಾಷ್ಟ್ರಪತಿ ಚುನಾವಣೆಗೆ ಮುರ್ಮು ಅವರಿಗೆ ಬೆಂಬಲ ಘೋಷಿಸಿದ್ದಾರೆ.

ವಿರೋಧ ಪಕ್ಷಗಳು ತಮ್ಮ ಸಾಮಾನ್ಯ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಿದೆ. ಸಿನ್ಹಾ ಅವರು ಜೂನ್ 27 ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಆದಾಗ್ಯೂ, ಮುರ್ಮು, BJD ಮತ್ತು YSR ಕಾಂಗ್ರೆಸ್ ಬೆಂಬಲದೊಂದಿಗೆ, ಎನ್‌ಡಿಎಯ ಬೃಹತ್ ಬಹುಮತದ ಕಾರಣದಿಂದಾಗಿ ಭಾರತದ ಮುಂದಿನ ರಾಷ್ಟ್ರಪತಿಯಾಗಲು ಸಿದ್ಧರಾಗಿದ್ದಾರೆ. ಆಯ್ಕೆಯಾದರೆ, ಅವರು ಭಾರತದ ಮೊದಲ ಬುಡಕಟ್ಟು ರಾಷ್ಟ್ರಪತಿಯಾಗುತ್ತಾರೆ ಮತ್ತು ಈ ಸ್ಥಾನವನ್ನು ಅಲಂಕರಿಸಿದ ಎರಡನೇ ಮಹಿಳೆಯಾಗಲಿದ್ದಾರೆ. ಅವರು ಈಗಾಗಲೇ ರಾಜ್ಯಪಾಲರಾದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆ ಕಾರಣರಾಗಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮುರ್ಮು, ಒಡಿಶಾ ವಿಧಾನಸಭೆಯ ಎಲ್ಲಾ ಸದಸ್ಯರು ಮತ್ತು ಸಂಸದರ ಬೆಂಬಲದ ಬಗ್ಗೆ ನಾನು ಆಶಾವಾದಿಯಾಗಿದ್ದೇನೆ. ನಾನು ಮಣ್ಣಿನ ಮಗಳು. ಒಡಿಯಾದವಳಾಗಿ ನನ್ನನ್ನು ಬೆಂಬಲಿಸುವಂತೆ ಎಲ್ಲ ಸದಸ್ಯರನ್ನು ವಿನಂತಿಸುವ ಹಕ್ಕು ನನಗಿದೆ ಎಂದು ಹೇಳಿದ್ದಾರೆ.

ಮುರ್ಮು ಅವರು 1997 ರಲ್ಲಿ ರಾಯರಂಗಪುರದಲ್ಲಿ ಜಿಲ್ಲಾ ಮಂಡಳಿಯ ಕೌನ್ಸಿಲರ್ ಆಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಮುರ್ಮು ರಾಯರಂಗಪುರದ ಶ್ರೀ ಅರಬಿಂದೋ ಸಮಗ್ರ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಗೌರವ ಸಹಾಯಕ ಶಿಕ್ಷಕರಾಗಿ ಮತ್ತು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾಗಿ ಕೆಲಸ ಮಾಡಿದ್ದಾರೆ.

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

Trending News