PM Modi In Ram Mandir: ರಾಮನ ಎದುರು ಭಾವುಕರಾಗಿ ಸಾಷ್ಟಾಂಗ ನಮಸ್ಕಾರ ಹಾಕಿದ ಪ್ರಧಾನಿ ಮೋದಿ‌

PM Modi In Ram Mandir: ಸುದೀರ್ಘ ಹೋರಾಟ ಮತ್ತು ದಶಕಗಳ ಕಾಯುವಿಕೆಯ ನಂತರ ಅಯೋಧ್ಯೆಯ ಭವ್ಯವಾದ ರಾಮಮಂದಿರದಲ್ಲಿ ರಾಮಲಲ್ಲಾನನ್ನು ಪ್ರತಿಷ್ಠಾಪಿಸಲಾಯಿತು. ಈ ವೇಳೆ ಪ್ರಧಾನಿ ಮೋದಿ ಭಾವುಕರಾದರು.

Written by - Chetana Devarmani | Last Updated : Jan 22, 2024, 03:09 PM IST
  • ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ
  • ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಮಾಡಿದ ಪ್ರಧಾನಿ ಮೋದಿ
  • ಭಾವುಕರಾಗಿ ಸಾಷ್ಟಾಂಗ ನಮಸ್ಕಾರ ಹಾಕಿದ ಪ್ರಧಾನಿ
PM Modi In Ram Mandir: ರಾಮನ ಎದುರು ಭಾವುಕರಾಗಿ ಸಾಷ್ಟಾಂಗ ನಮಸ್ಕಾರ ಹಾಕಿದ ಪ್ರಧಾನಿ ಮೋದಿ‌  title=

ಅಯೋಧ್ಯೆ (ಉತ್ತರ ಪ್ರದೇಶ) : 500 ವರ್ಷಗಳ ಕಾಯುವಿಕೆ ಕೊನೆಗೊಂಡಿದ್ದು, ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪೂರ್ಣಗೊಂಡಿದೆ. ಈ ಸಮಯದಲ್ಲಿ ದೇಶದ ಪ್ರತಿಯೊಂದು ಭಾಗದಲ್ಲೂ ರಾಮನಾಮ ಕೇಳುತ್ತಿದೆ, ಜನರು ಭಜನೆ ಮತ್ತು ಕೀರ್ತನೆಯೊಂದಿಗೆ 'ಶ್ರೀರಾಮಚಂದ್ರ ಕೀ ಜೈ' ಎಂದು ಘೋಷಣೆ ಕೂಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪೂರ್ಣ ವಿಧಿವಿಧಾನಗಳೊಂದಿಗೆ ಪೂಜೆಯನ್ನು ನೆರವೇರಿಸಿದರು. ಅಭಿಜಿತ್ ಮುಹೂರ್ತದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಮಾಡಿದರು. ದೇವಾಲಯದಲ್ಲಿ 84 ಸೆಕೆಂಡ್‌ಗಳ ಅತ್ಯಂತ ಮಂಗಳಕರ ಸಮಯವಿದ್ದು, ಪುರೋಹಿತರ ತಂಡದೊಂದಿಗೆ ಪ್ರಧಾನಮಂತ್ರಿ ಅವರು ಧಾರ್ಮಿಕ ವಿಧಿಗಳನ್ನು ಪೂರ್ಣಗೊಳಿಸಿದರು. ಪೂಜೆಯ ನಂತರ, ಅಲ್ಲಿದ್ದ ಹೆಚ್ಚಿನ ಜನರು ಭಾವುಕರಾಗಿ ಕಾಣುತ್ತಿದ್ದರು. ಭಾವುಕರಾದ ಪ್ರಧಾನಿ ಮೋದಿ ಅವರು ರಾಮಲಲ್ಲಾ ವಿಗ್ರಹಕ್ಕೆ ಸಾಷ್ಟಾಂಗ ನಮಸ್ಕಾರ ಮಾಡಿ ನಮನ ಸಲ್ಲಿಸಿದರು. ಸಾಧ್ವಿ ಋತಂಭರಾ ಮತ್ತು ಉಮಾಭಾರತಿ ಕೂಡ ಭಾವುಕರಾದರು.

ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ವೇಳೆ ಪ್ರಧಾನಿ ಮೋದಿ ಅವರು ರಾಮನ ಮುಂದೆ ಸಾಷ್ಟಾಂಗ ನಮಸ್ಕಾರ ಮಾಡಿದ್ದರು. ಈ ಬಾರಿ ರಾಮಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ಸಾಷ್ಟಾಂಗ ನಮಸ್ಕಾರ ಮಾಡಿದರು. ಈ ಸಮಯದಲ್ಲಿ, ಪ್ರಧಾನಿಯವರ ಮುಖದಲ್ಲಿ ಸಂತೋಷ ಭಾವನೆ ಸ್ಪಷ್ಟವಾಗಿ ಗೋಚರಿಸಿತು. ಪ್ರಧಾನಿ ಜೊತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದರು ಮತ್ತು ಅವರು ಸಹ ಭಾವುಕರಾಗಿದ್ದರು. ಭಾರತ ಹಾಗೂ ವಿದೇಶಗಳಿಂದ ಆಗಮಿಸಿದ್ದ 7000ಕ್ಕೂ ಹೆಚ್ಚು ಅತಿಥಿಗಳು ದೇವಸ್ಥಾನದ ಆವರಣದಲ್ಲಿ ನಡೆದ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು ಎಲ್ಲರ ಮುಖದಲ್ಲೂ ಸಂತಸ ಎದ್ದು ಕಾಣುತ್ತಿತ್ತು.

ಇದನ್ನೂ ಓದಿ : ರಾಮ ಜನ್ಮ ಭೂಮಿಯಲ್ಲಿ ಕ್ರಿಕೆಟರ್ ಗಳು !ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಸ್ಟಾರ್ ಆಟಗಾರರು

ಕಳೆದ 11 ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ವಿಶೇಷ ವೃತದಲ್ಲಿದ್ದರು. ಪ್ರಾಣ ಪ್ರತಿಷ್ಠಾಪನೆಯ ನಂತರ ಉಪವಾಸ ಮುರಿದು ಸಿಎಂ ಯೋಗಿ ಆದಿತ್ಯನಾಥ್ ಕೈಯಿಂದ ಚರಣಮೃತ ಪಡೆದರು. ಧಾರ್ಮಿಕ ವಿಧಿವಿಧಾನಗಳು ಮುಗಿದ ಬಳಿಕ ಪ್ರಧಾನಮಂತ್ರಿಯವರು ಸಂತರನ್ನು ಭೇಟಿಯಾಗಿ ದೇವಾಲಯದ ಆವರಣವನ್ನು ವೀಕ್ಷಿಸಿದರು. ಈ ಐತಿಹಾಸಿಕ ಕ್ಷಣವನ್ನು ವೀಕ್ಷಿಸಲು ಪ್ರಪಂಚದಾದ್ಯಂತದ 7,000 ಕ್ಕೂ ಹೆಚ್ಚು ವಿಐಪಿ ಅತಿಥಿಗಳು ಅಯೋಧ್ಯೆಗೆ ತಲುಪಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ಎಲ್ಲ ಅತಿಥಿಗಳಿಗೂ ವಿಶೇಷ ಪ್ರಸಾದವನ್ನು ನೀಡಲಾಗುವುದು.

ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಹುತೇಕ ಹಿರಿಯ ನಾಯಕರು ಆಗಮಿಸಿಲ್ಲ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಮ್ಮ ನಿವಾಸವನ್ನು ಸಂಪೂರ್ಣವಾಗಿ ಅಲಂಕರಿಸಿದ್ದು, ಮನೆಯಲ್ಲಿ ಪೂಜೆ ಸಲ್ಲಿಸಿದರು. ಗೃಹ ಸಚಿವ ಅಮಿತ್ ಶಾ ದೆಹಲಿಯ ಬಿರ್ಲಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಿ ಜೊತೆಗೆ ಸಿಎಂ ಯೋಗಿ ಆದಿತ್ಯನಾಥ್, ಯುಪಿ ಗವರ್ನರ್ ಆನಂದಿಬೆನ್ ಪಟೇಲ್ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಗರ್ಭಗುಡಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : PINEWZ Launch: ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಹೊಸ ಆಪ್ ಬಿಡುಗಡೆ ಮಾಡಿದ ಡಾ.ಸುಭಾಷ್ ಚಂದ್ರ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News