"ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ": ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್‌

PM Modi tweet in Kannada: ಬೆಂಗಳೂರು ನಗರದ ಮೂರು ಕಡೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಇದೀಗ ಪ್ರಧಾನಿ ಮೋದಿ ರಾಜ್ಯ ಪ್ರವಾಸದ ಬಗ್ಗೆ ಕನ್ನಡದಲ್ಲಿಯೇ ಟ್ವೀಟ್‌ ಮಾಡಿದ್ದು, ಇದು ಎಲ್ಲರ ಗಮನಸೆಳೆಯುತ್ತಿದೆ. 

Written by - Chetana Devarmani | Last Updated : Jun 20, 2022, 10:56 AM IST
  • ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ
  • "ಕರ್ನಾಟಕಕ್ಕೆ ಹೋಗುತ್ತಿರುವೆ"
  • ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್‌
"ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ": ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್‌  title=
ಪ್ರಧಾನಿ ಮೋದಿ

ಬೆಂಗಳೂರು: ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಬೆಳಿಗ್ಗೆ 11:15 ಕ್ಕೆ ಯಲಹಂಕ ವಾಯುನೆಲೆಗೆ ಬಂದಿಳಿಯಲಿದ್ದಾರೆ. ಪಿಎಂ ಮೋದಿ ಆಗಮನ ಹಿನ್ನೆಲೆ ರಾಜ್ಯಾದ್ಯಂತ ಬಿಗಿ ಖಾಕಿ ಕಣ್ಗಾವಲು ವಹಿಸಲಾಗಿದೆ. ಬೆಂಗಳೂರು ನಗರದ ಮೂರು ಕಡೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಇದೀಗ ಪ್ರಧಾನಿ ಮೋದಿ ರಾಜ್ಯ ಪ್ರವಾಸದ ಬಗ್ಗೆ ಕನ್ನಡದಲ್ಲಿಯೇ ಟ್ವೀಟ್‌ ಮಾಡಿದ್ದು, ಇದು ಎಲ್ಲರ ಗಮನಸೆಳೆಯುತ್ತಿದೆ. 

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮನ ಹಿನ್ನೆಲೆ, ಎಲ್ಲೆಲ್ಲೂ ಖಾಕಿ ಕಣ್ಗಾವಲು , ಈ ರಸ್ತೆಗಳಲ್ಲಿ ಸಚಾರ ನಿಷೇಧ

ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ ಐಐಎಸ್‌ಸಿ ಬೆಂಗಳೂರಿನಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಕನ್ನಡದಲ್ಲಿ ಪ್ರಧಾನಿ ಪೋಸ್ಟ್‌ ಮಾಡಿದ್ದಾರೆ. 

 

 

ತಮ್ಮ ಕಾರ್ಯಕ್ರಮದ ಪಟ್ಟಿಯನ್ನು ತಿಳಿಸಿರುವ ನರೇಂದ್ರ ಮೋದಿ, ಇಂದು ಅಪರಾಹ್ನ, ನಾನು ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್), ಬೆಂಗಳೂರು ಇಲ್ಲಿ ಬೇಸ್ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ.150 ಟೆಕ್ ಹಬ್ ಗಳ ಲೋಕಾರ್ಪಣೆ ಕೂಡ ಮಾಡುವೆ . ಇವನ್ನು ಐಟಿಐಗಳನ್ನು ಉನ್ನತೀಕರಿಸಿ ಅಭಿವೃದ್ಧಿಗೊಳಿಸಲಾಗಿದೆ ಎಂದಿದ್ದಾರೆ. 

ಇದನ್ನೂ ಓದಿ: ನಾಳೆ ಪ್ರಧಾನಿ ಮೋದಿಯಿಂದ 150 ಐ.ಟಿ.ಐ ಕಾಲೇಜುಗಳ ಲೋಕಾರ್ಪಣೆ

ಬೆಂಗಳೂರಿನ ಕಾರ್ಯಕ್ರಮದಲ್ಲಿ, 27,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಇಲ್ಲವೆ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ 'ಸುಗಮ ಜೀವನ'ಕ್ಕೆ ನೆರವಾಗಲಿದೆ. ಸಂಜೆ 5.30ರ ವೇಳೆಗೆ ಮೈಸೂರು ತಲುಪುವೆ. ಅಲ್ಲಿಯೂ ಪ್ರಮುಖ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಲ್ಲವೆ ಶಿಲಾನ್ಯಾಸ ನೆರವೇರಿಸುವೆ. ಸುತ್ತೂರು ಮಠದ ಕಾರ್ಯಕ್ರಮದಲ್ಲಿಯೂ ಭಾಗಿಯಾಗುವೆ. ನಾಳೆ ಬೆಳಗ್ಗೆ, ಮೈಸೂರಿನಲ್ಲಿ ಯೋಗ ದಿನದ ಕಾರ್ಯಕ್ರಮವೂ ನೆರವೇರಲಿದೆ ಎಂದು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News