SWR Recruitment 2021: ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ 904 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ

ಎಲೆಕ್ಟ್ರಿಷಿಯನ್, ವೆಲ್ಡರ್, ಫಿಟ್ಟರ್, ಕಾರ್ಪೆಂಟರ್ ಸೇರಿದಂತೆ ವಿವಿಧ ಟ್ರೇಡ್‌ಗಳಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.   

Written by - Puttaraj K Alur | Last Updated : Oct 17, 2021, 07:41 AM IST
  • ಹುಬ್ಬಳ್ಳಿ ವಿಭಾಗದಲ್ಲಿ ಖಾಲಿಯಿರುವ ಅಪ್ರೆಂಟಿಸ್ ಹುದ್ದೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
  • ಎಲೆಕ್ಟ್ರಿಷಿಯನ್, ವೆಲ್ಡರ್, ಫಿಟ್ಟರ್, ಕಾರ್ಪೆಂಟರ್ ಸೇರಿ ವಿವಿಧ ಟ್ರೇಡ್‌ಗಳಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ನವೆಂಬರ್ 3ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ
SWR Recruitment 2021: ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ 904 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ   title=
ರೈಲ್ವೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

ನವದೆಹಲಿ: ನೈಋತ್ಯ ರೈಲ್ವೆಯು(South Western Railway) ಹುಬ್ಬಳ್ಳಿ ವಿಭಾಗದಲ್ಲಿ(Hubli Branch) ಖಾಲಿ ಇರುವ ಅಪ್ರೆಂಟಿಸ್ ಹುದ್ದೆ(Apprentice Jobs)ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರಿಷಿಯನ್, ವೆಲ್ಡರ್, ಫಿಟ್ಟರ್, ಕಾರ್ಪೆಂಟರ್ ಸೇರಿದಂತೆ ವಿವಿಧ ಟ್ರೇಡ್‌ಗಳಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.   

ರಾಜ್ಯದಲ್ಲಿಯೇ ಕೇಂದ್ರ ಸರ್ಕಾರದ ಉದ್ಯೋಗ(Central Government Jobs) ಪಡೆಯಬೇಕೆಂದು ಹಂಬಲಿಸುತ್ತಿರುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶ. SSLC ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 904 ಹುದ್ದೆಗಳು ಖಾಲಿ ಇದ್ದು, ನವೆಂಬರ್ 3ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rrchubli.in ನಲ್ಲಿ ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ  ತಿಳಿಸಲಾಗಿದೆ.

ಇದನ್ನೂ ಓದಿ: Indian Railways: ರೈಲು ಯಾತ್ರಿಗಳಿಗೊಂದು ಮಹತ್ವದ ಮಾಹಿತಿ, ಇನ್ಮುಂದೆ ಪ್ರಯಾಣ ಮತ್ತಷ್ಟು ಸುಲಭವಾಗಲಿದೆ

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು. ಇದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಹುದ್ದೆಯ ಹೆಸರು & ಹುದ್ದೆಗಳ ಸಂಖ್ಯೆ

ಒಟ್ಟು ಹುದ್ದೆಗಳ ಸಂಖ್ಯೆ - 904

ಹುಬ್ಬಳ್ಳಿ ವಿಭಾಗ - 237 ಹುದ್ದೆಗಳು

ಕ್ಯಾರೇಜ್ ರಿಪೇರಿ ಕಾರ್ಯಾಗಾರ, ಹುಬ್ಬಳ್ಳಿ - 217 ಹುದ್ದೆಗಳು

ಬೆಂಗಳೂರು ವಿಭಾಗ - 230 ಹುದ್ದೆಗಳು

ಮೈಸೂರು ವಿಭಾಗ - 177 ಹುದ್ದೆಗಳು

ಕೇಂದ್ರ ಕಾರ್ಯಾಗಾರ, ಮೈಸೂರು - 43 ಹುದ್ದೆಗಳು

ರೈಲ್ವೆ ನೇಮಕಾತಿ ವಯಸ್ಸಿನ ಮಿತಿ

ಸಾಮಾನ್ಯ ಅಭ್ಯರ್ಥಿಗಳು 15 ವರ್ಷ ಪೂರ್ಣಗೊಳಿಸಿರಬೇಕು ಮತ್ತು 24 ವರ್ಷ ಪೂರ್ಣಗೊಳಿಸಿರಬಾರದು. ಸರ್ಕಾರಿ ನಿಯಮಗಳ ಪ್ರಕಾರ ವಯಸ್ಸಿನಲ್ಲಿ ಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಅಭ್ಯರ್ಥಿಗಳನ್ನು ಮೆಟ್ರಿಕ್ಯುಲೇಷನ್ ಮತ್ತು ಐಟಿಐ(ITI)ಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯಾ ಟ್ರೇಡ್‌ನಲ್ಲಿ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: Indian Railways : ಅಕ್ಟೋಬರ್ 1 ರಿಂದ ಭಾರತೀಯ ರೈಲ್ವೆ ಟೈಮ್ ಟೇಬಲ್ ಚೇಂಜ್ : ಹೊಸ ವೇಳಾಪಟ್ಟಿ ಇಲ್ಲಿದೆ ನೋಡಿ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 04-10-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-11-2021

ಅರ್ಜಿ ಶುಲ್ಕ:

ಅಪ್ರೆಂಟಿಸ್ ಹುದ್ದೆ(Apprentice Vacancies)ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಕಟ್ಟಬೇಕು. ಎಸ್​ಸಿ, ಎಸ್​ಟಿ, ಮಹಿಳೆಯರು ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಡೆಬಿಡ್ ಕಾರ್ಡ್/ಕ್ರೆಡಿಟ್ ಕಾರ್ಡ್/ಇಂಟರ್​ನೆಟ್​ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನೈಋತ್ಯ ರೈಲ್ವೆಯ ಅಧಿಕೃತ ವೆಬ್​ಸೈಟ್​ swr.indianrailways.gov.in ಭೇಟಿ ನೀಡಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News