ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ : 32 ಮಧ್ಯಂತರ ಅರ್ಜಿಗಳನ್ನು ತಿರಸ್ಕರಿಸಿದ ಸುಪ್ರೀಂ

ಅಯೋಧ್ಯೆ ವಿವಾದ ಪ್ರಕರಣದಲ್ಲಿ ಹಸ್ತಕ್ಷೇಪಕ್ಕೆ ಅವಕಾಶ ಕೋರಿ ಸಲ್ಲಿಸಿದ್ದ 32 ಮಧ್ಯಂತರ ಅರ್ಜಿಗಳನ್ನು ಸುಪ್ರೀಂಕೋರ್ಟ್ ಬುಧವಾರ ಬುಧವಾರ ವಜಾ ಮಾಡಿದೆ.

Updated: Mar 14, 2018 , 05:11 PM IST
ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ : 32 ಮಧ್ಯಂತರ ಅರ್ಜಿಗಳನ್ನು ತಿರಸ್ಕರಿಸಿದ ಸುಪ್ರೀಂ

ನವದೆಹಲಿ : ಅಯೋಧ್ಯೆ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ ಪ್ರಕರಣದಲ್ಲಿ ಹಸ್ತಕ್ಷೇಪಕ್ಕೆ ಅವಕಾಶ ಕೋರಿ ಸಲ್ಲಿಸಿದ್ದ 32 ಮಧ್ಯಂತರ ಅರ್ಜಿಗಳನ್ನು ಸುಪ್ರೀಂಕೋರ್ಟ್ ಬುಧವಾರ ಬುಧವಾರ ವಜಾ ಮಾಡಿದೆ.

ಶ್ಯಾಮ್ ಬೆನೆಗಲ್, ಅಪರ್ಣಾ ಸೇನ್ ಮತ್ತು ಟೆಸ್ಟಾ ಸೆಟಲ್ವಾಡ್ ಅವರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿರುವ ಸುಪ್ರೀಂಕೋರ್ಟ್, ಬಾಬರಿ ಮಸೀದಿ-ರಾಮ ಮಂದಿರ ಶೀರ್ಷಿಕೆ ವಿವಾದಕ್ಕೆ ಮೂಲ ಪಕ್ಷಗಳ ಅರ್ಜಿಗಳನ್ನು ಮಾತ್ರ ವಿಚಾರಣೆ ಮಾಡಬೇಕು ಎಂಬ ಮನವಿಯನ್ನು ಸ್ವೀಕರಿಸುವ ಮೂಲಕ ಈ ವಿವಾದಕ್ಕೆ ಸಂಬಂಧಿಸದ ವ್ಯಕ್ತಿಗಳ ಹಸ್ತಕ್ಷೇಪ ಅರ್ಜಿಗಳನ್ನು ತಿರಸ್ಕರಿಸಿದೆ.

ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಯತ್ನಿಸಿದ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಸುಬ್ರಮಣ್ಯಿಯನ್ ಸ್ವಾಮಿಯವರ ಮನವಿ ಕೂಡ ಇಂದು ತಿರಸ್ಕರಿಸಲ್ಪಟ್ಟಿದೆ. ಆದಾಗ್ಯೂ, ಅಯೋಧ್ಯೆ ರಾಮ ಮಂದಿರದಲ್ಲಿ ಪೂಜಿಸುವ ತಮ್ಮ ಮೂಲಭೂತ ಹಕ್ಕನ್ನು ಜಾರಿಗೆ ತರಲು ಸ್ವಾಮಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇತ್ಯರ್ಥಗೊಳಿಸಲು ನ್ಯಾಯಾಲಯ ಆದೇಶಿಸಿದೆ.

ಅಯೋಧ್ಯಾ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿಚಾರಣೆಯನ್ನು ನಡೆಸುತ್ತಿರುವ ಸುಪ್ರೀಂಕೋರ್ಟ್'ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಇತರ ಇಬ್ಬರು ನ್ಯಾಯಾಧೀಶರಾದ ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಝೀರ್ ಅವರು ಇಂದು ಒಟ್ಟು 13 ಅರ್ಜಿಗಳ ವಿಚಾರಣೆ ನಡೆಸಿದರು.