ಆರ್ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕ

ಆರ್ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರು ಮೂರು ವರ್ಷಗಳ ಅವಧಿಗೆ ಮಂಗಳವಾರ ನೇಮಕಗೊಂಡಿದ್ದಾರೆ. ಈ ಹಿಂದೆ ಅವರು 2015 ರಿಂದ 2017 ರವರೆಗೆ ಆರ್ಥಿಕ ವ್ಯವಹಾರಗಳ ಇಲಾಖೆಯ ಮಾಜಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

Last Updated : Dec 12, 2018, 09:30 AM IST
ಆರ್ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕ title=

ನವದೆಹಲಿ: ಆರ್ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರು ಮೂರು ವರ್ಷಗಳ ಅವಧಿಗೆ ಮಂಗಳವಾರ ನೇಮಕಗೊಂಡಿದ್ದಾರೆ. ಈ ಹಿಂದೆ ಅವರು 2015 ರಿಂದ 2017 ರವರೆಗೆ ಆರ್ಥಿಕ ವ್ಯವಹಾರಗಳ ಇಲಾಖೆಯ ಮಾಜಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಆರ್ಬಿಐ ಗವರ್ನರ್ ಹುದ್ದೆಗೆ ವೈಯಕ್ತಿಕ ಕಾರಣಗಳನ್ನು ನೀಡಿ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಶಕ್ತಿಕಾಂತ್ ದಾಸ್ ಅವರನ್ನು ನೂತನ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತು ಆರ್ಬಿಐ ನಡುವೆ ಶೀತಲ ಸಮರ ನಡೆದಿರುವ ಸಂಗತಿ ಕೂಡ ಜಗಜ್ಜಾಹೀರಾಗಿತ್ತು. ಪ್ರತಿಪಕ್ಷಗಳು ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದವು.

ಈಗ 25ನೇ ಗವರ್ನರ್ ಆಗಿ ನೇಮಕವಾಗಿರುವ ಶಕ್ತಿಕಾಂತ್ ದಾಸ್ ಅವರಿಗೆ ಬ್ಯಾಂಕ್ ಸಾಲಗಳ ಪುನರ್ರಚನೆ ಮತ್ತು ಕಠಿಣ ನಿಯಮಗಳನ್ನು ಜಾರಿಗೊಳಿಸುವುದು ಈಗ ಅವರ ಮುಂದಿರುವ ಸವಾಲಾಗಿದೆ.

ಶಕ್ತಿದಾಸ್ ಕಾಂತ್ ತಮಿಳುನಾಡು ಕೇಡರ್ ನ ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದಾರೆ.

 

Trending News