Srinagar Encounter: ಶ್ರೀನಗರದಲ್ಲಿ ಎನ್‌ಕೌಂಟರ್‌.. ಇಬ್ಬರು ಭಯೋತ್ಪಾದಕರು ಹತ

Srinagar Encounter: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ರಾಂಗ್ರೆಟ್ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಹತರಾಗಿದ್ದಾರೆ.

Edited by - Zee Kannada News Desk | Last Updated : Dec 13, 2021, 04:55 PM IST
  • ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ
  • ಇಬ್ಬರು ಅಪರಿಚಿತ ಭಯೋತ್ಪಾದಕರ ಹತ
  • ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ರಾಂಗ್ರೆಟ್ ನಲ್ಲಿ ಘಟನೆ
Srinagar Encounter: ಶ್ರೀನಗರದಲ್ಲಿ ಎನ್‌ಕೌಂಟರ್‌.. ಇಬ್ಬರು ಭಯೋತ್ಪಾದಕರು ಹತ title=
ಭಯೋತ್ಪಾದಕ

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಇಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ (Terrorists killed in encounter) ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಸದೆಬಡೆಯಲಾಗಿದೆ. 

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ರಾಂಗ್ರೆಟ್ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು (Srinagar Encounter) ಹತರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಬಗ್ಗೆ  ಟ್ವೀಟ್‌ ಮಾಡಿದ್ದಾರೆ. "ಶ್ರೀನಗರ ಎನ್‌ಕೌಂಟರ್ ಅಪ್‌ಡೇಟ್ (Srinagar Encounter Update): ಇಬ್ಬರು ಅಪರಿಚಿತ ಭಯೋತ್ಪಾದಕರು ಕೊಲ್ಲಲ್ಪಟ್ಟರು. ಹುಡುಕಾಟ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ." ಎಂದು ಹೇಳಿದ್ದಾರೆ. 

ಹತ್ಯೆಗೀಡಾದ ಭಯೋತ್ಪಾದಕರ ಗುರುತು ಮತ್ತು ಗುಂಪು ಸಂಬಂಧದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಹುಡುಕಾಟ ನಡೆಯುತ್ತಿದೆ ಎಂದು ಹೇಳಲಾಗಿದೆ. 

 

 

ನಿನ್ನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಬರಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಹತನಾಗಿದ್ದನು. 

ಇದನ್ನೂ ಓದಿ:"ಗುರಾಯ್ಸೋಕೆ ರೆಡಿಯಾಗಿದೆ ನಮ್ಮೂರ ಬುಲ್ಸ್": Bengaluru bulls ಹೊಸ ಪ್ರೊಮೊದಲ್ಲಿ ಕಿಚ್ಚ ಸುದೀಪ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News