ಜನಸಾಮಾನ್ಯರಿಗೆ ಪ್ರಯೋಜನವಾಗದ ಬಜೆಟ್: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ ಎಂದು ಖರ್ಗೆ ಟೀಕಿಸಿದ್ದಾರೆ.

Last Updated : Feb 1, 2019, 01:33 PM IST
ಜನಸಾಮಾನ್ಯರಿಗೆ ಪ್ರಯೋಜನವಾಗದ ಬಜೆಟ್: ಮಲ್ಲಿಕಾರ್ಜುನ ಖರ್ಗೆ title=

ನವದೆಹಲಿ: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. 

ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ. ಆದರೆ, ಕೇಂದ್ರ ಸರ್ಕಾರದ ಅಧಿಕಾರ ಅವಧಿ ಕೇವಲ ನಾಲ್ಕು ತಿಂಗಳಷ್ಟೇ ಇರುವ ಹಿನ್ನೆಲೆಯಲ್ಲಿ ಈ ಯೋಜನೆಗಳು ಜಾರಿಗೆ ಬರುವುದು ಅಸಾಧ್ಯ ಎಂದು ಖರ್ಗೆ ಟೀಕಿಸಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ಇದುವರೆಗೂ ಮೋದಿ ಸರ್ಕಾರ ಮಂಡಿಸಿರುವ ಯಾವುದೇ ಬಜೆಟ್ ಸಹ ಜನರಿಗೆ ಉಪಯೋಗವಾಗಿಲ್ಲ. ಅಂತೆಯೇ ಈ ಬಜೆಟ್ ಕೇವಲ ಮತದಾರರನ್ನು ಸೆಳೆಯಲು ಮಾತ್ರ ಎಂದು ಹೇಳಿದ್ದಾರೆ.

Trending News