ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಸಚಿವ ನಿತಿನ್ ಗಡ್ಕರಿ ಸರಣಿ ಟ್ವೀಟ್

ಕೇಂದ್ರ ಸಚಿವ ಮತ್ತು ಬಿಜೆಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ರಾಮಜನ್ಮಭೂಮಿ ಆಂದೋಲನಕ್ಕೆ ಸಂಬಂಧಪಟ್ಟವರನ್ನು ಸ್ಮರಿಸಿದ್ದು ಇಂದು ಐತಿಹಾಸಿಕ ದಿನ ಎಂದು ಬಣ್ಣಿಸಿದ್ದಾರೆ.

Last Updated : Aug 5, 2020, 12:30 PM IST
ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಸಚಿವ ನಿತಿನ್ ಗಡ್ಕರಿ ಸರಣಿ ಟ್ವೀಟ್ title=

ನವದೆಹಲಿ: ಕೇಂದ್ರ ಸಚಿವ ಮತ್ತು ಬಿಜೆಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ (Nitin Gadkari) ಅವರು ರಾಮಜನ್ಮಭೂಮಿ ಆಂದೋಲನಕ್ಕೆ ಸಂಬಂಧಪಟ್ಟ ಜನರನ್ನು ಸ್ಮರಿಸಿದರು ಮತ್ತು ಇಂದು ಐತಿಹಾಸಿಕ ದಿನ ಎಂದು ಬಣ್ಣಿಸಿದರು. 

ಶ್ರೀರಾಮ ಮಂದಿರಕ್ಕೆ ಅಡಿಗಲ್ಲು ಹಾಕಲು ಅಯೋಧ್ಯೆಯತ್ತ ತೆರಳಿದ ಪ್ರಧಾನಿ ಮೋದಿ

ಇಂದು ಇಡೀ ದೇಶದ ಜನರ ಆಸೆ ಈಡೇರುತ್ತಿದೆ. ಜನರು ಈ ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ನಿತಿನ್ ಗಡ್ಕರಿ ಭಗವಾನ್ ಶ್ರೀ ರಾಮ್ ಭಾರತೀಯ ಇತಿಹಾಸ, ಸಂಸ್ಕೃತಿ ಮತ್ತು ನಮ್ಮ ನಂಬಿಕೆಯ ಸಂಕೇತವಾಗಿದೆ. ಇಂದು ಪ್ರತಿಯೊಬ್ಬ ಭಾರತೀಯನಿಗೂ ಸಂತೋಷದ ದಿನ. ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರವನ್ನು ನಿರ್ಮಿಸುವುದು ನಮ್ಮೆಲ್ಲರ ಕನಸಾಗಿದೆ ಎಂದು ಬರೆದಿದ್ದಾರೆ.

Trending News