ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಖಚಿತ! ಇಲ್ಲಿದೆ ನೋಡಿ ಲೆಕ್ಕಾಚಾರ

ಲೋಕಸಭೆಯಲ್ಲಿ ಬಿಜೆಪಿಗೆ ಭಾರಿ ಬಹುಮತವಿದೆ. ಲೋಕಸಭೆಯಲ್ಲಿ ಬಿಜೆಪಿ ಮತ್ತು ಎನ್‌ಡಿಎ ಒಟ್ಟು 303 ಸಂಸದರನ್ನು ಹೊಂದಿದೆ. ಅಷ್ಟೇ ಅಲ್ಲದೆ, ರಾಜ್ಯಸಭೆಯಲ್ಲಿ ಬಿಜೆಪಿ 91 ಸಂಸದರನ್ನು ಹೊಂದಿದೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ 3 ಸ್ಥಾನಗಳನ್ನು ಕಳೆದುಕೊಂಡಿದ್ದರೆ, ಉಪಚುನಾವಣೆಯಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಗಳಿಸಿದೆ.

Written by - Bhavishya Shetty | Last Updated : Jul 17, 2022, 09:37 AM IST
  • ಬಿಜೆಪಿ ಉಪರಾಷ್ಟ್ರಪತಿ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ
  • ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು ಖಚಿತ ಎಂಬ ಲೆಕ್ಕಾಚಾರ ಹೊರಬಿದ್ದಿದೆ.
  • ಈ ಚುನಾವಣೆಯಲ್ಲಿ ಸಂಸತ್ತಿನ ಉಭಯ ಸದನಗಳ ಸಂಸದರು ಮಾತ್ರ ಮತ ಚಲಾಯಿಸಬಹುದು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಖಚಿತ! ಇಲ್ಲಿದೆ ನೋಡಿ ಲೆಕ್ಕಾಚಾರ  title=
Vice-President Election

ಉಪರಾಷ್ಟ್ರಪತಿ ಚುನಾವಣೆ ಕುರಿತು ದೇಶದಲ್ಲಿ ಚರ್ಚೆ ಜೋರಾಗಿದೆ. ಶನಿವಾರದಂದು ಭಾರತೀಯ ಜನತಾ ಪಕ್ಷವು ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ತನ್ನ ಅಭ್ಯರ್ಥಿ ಎಂದು ಘೋಷಿಸಿದೆ. ಇದರೊಂದಿಗೆ ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಇತರ ವಿರೋಧ ಪಕ್ಷಗಳೊಂದಿಗೆ ಕಾಂಗ್ರೆಸ್ ಸಭೆ ನಡೆಸಲಿದೆ. ಪಕ್ಷದ ಸಂಸದೀಯ ಮಂಡಳಿ ಸಭೆಯ ನಂತರ ಬಿಜೆಪಿ ಉಪರಾಷ್ಟ್ರಪತಿ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ. ಇನ್ನು ಲೆಕ್ಕಾಚಾರ ಹಾಕಿದರೆ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಪ್ ಧನಕರ್ ಗೆಲುವು ಬಹುತೇಕ ಖಚಿತವಾಗಿದೆ. ಬಿಜೆಪಿಗೆ ಇತರ ವಿರೋಧ ಪಕ್ಷಗಳ ಬೆಂಬಲ ಬೇಕಾಗಿಲ್ಲ. ಹೇಗೆ ಈ ಲೆಕ್ಕಾಚಾರ ಇದೆ ಎಂಬುದನ್ನು ಮುಂದಕ್ಕೆ ತಿಳಿಸಲಿದ್ದೇವೆ. ಈ ವರದಿ ಓದಿ.  

ಇದನ್ನೂ ಓದಿ: ದಾಖಲೆ ಪರಿಶೀಲನೆಗೆ ಸುಖಾಸುಮ್ಮನೆ ವಾಹನ ತಡೆಯದಂತೆ ಪ್ರವೀಣ್ ಸೂದ್ ಆದೇಶ

ಉಭಯ ಸದನಗಳ ಸಂಸದರ ಮತ ಚಲಾವಣೆ: 
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್ತಿನ ಉಭಯ ಸದನಗಳ ಸಂಸದರು ಮಾತ್ರ ಮತ ಚಲಾಯಿಸಬಹುದು ಎಂಬುದು ಗಮನಿಸಬೇಕಾದ ಸಂಗತಿ. ಅಂದರೆ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆಯಲ್ಲಿ 543 ಮತ್ತು ರಾಜ್ಯಸಭೆಯಲ್ಲಿ 232 ಸಂಸದರು ಮತ ಚಲಾಯಿಸುತ್ತಾರೆ. ಲೋಕಸಭೆಯಲ್ಲಿ ಬಿಜೆಪಿಗೆ ಭಾರಿ ಬಹುಮತವಿದೆ. ಲೋಕಸಭೆಯಲ್ಲಿ ಬಿಜೆಪಿ ಮತ್ತು ಎನ್‌ಡಿಎ ಒಟ್ಟು 303 ಸಂಸದರನ್ನು ಹೊಂದಿದೆ. ಅಷ್ಟೇ ಅಲ್ಲದೆ, ರಾಜ್ಯಸಭೆಯಲ್ಲಿ ಬಿಜೆಪಿ 91 ಸಂಸದರನ್ನು ಹೊಂದಿದೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ 3 ಸ್ಥಾನಗಳನ್ನು ಕಳೆದುಕೊಂಡಿದ್ದರೆ, ಉಪಚುನಾವಣೆಯಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಗಳಿಸಿದೆ.

ಉಪಾಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿ ಜಗದೀಪ್ ಧಂಖರ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ದೇಶದ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಸಂಸತ್ತು, ಲೋಕಸಭೆ ಮತ್ತು ರಾಜ್ಯಸಭೆಯ ಎರಡೂ ಸದನಗಳ ಸದಸ್ಯರು ಮತ ಚಲಾವಣೆ ಮಾಡಬೇಕಾಗುತ್ತದೆ. ಪ್ರಸ್ತುತ ಸಂಸತ್ತಿನ ಬಲ 780 ಆಗಿದ್ದು, ಈ ಪೈಕಿ ಬಿಜೆಪಿ 394 ಸಂಸದರನ್ನು ಹೊಂದಿದೆ. ಉಪರಾಷ್ಟ್ರಪತಿ ಗೆಲ್ಲಬೇಕಾದರೆ 390ಕ್ಕೂ ಹೆಚ್ಚು ಮತಗಳ ಅಗತ್ಯವಿದೆ. ಅಂದರೆ ಬಿಜೆಪಿಗೆ ಅಗತ್ಯಕ್ಕಿಂತ 4 ಮತಗಳು ಹೆಚ್ಚಿವೆ. ಈ ಮೂಲಕ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎನ್ನಬಹುದು. 2022ರ ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ: ಕೆಲವೇ ನಿಮಿಷಗಳಲ್ಲಿ ನಿಮ್ಮ ಸ್ಮಾರ್ಟ್ ಫೋನ್ ಇಂಟರ್ನೆಟ್ ವೇಗವನ್ನು 4 ಪಟ್ಟು ಹೆಚ್ಚಿಸಿ

ಆಗಸ್ಟ್ 6 ರಂದು ಮತದಾನ:
ಪ್ರಸ್ತುತ ಉಪರಾಷ್ಟ್ರಪತಿಯಾಗಿರುವ ವೆಂಕಯ್ಯ ನಾಯ್ಡು ಅವರು ಆಗಸ್ಟ್ 11 ರಂದು ನಿವೃತ್ತರಾಗುತ್ತಿದ್ದಾರೆ. ಇದಕ್ಕೂ ಮುನ್ನ ಆಗಸ್ಟ್ 6 ರಂದು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜುಲೈ 19ರವರೆಗೆ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ ಎಂದು ತಿಳಿಸಲಾಗಿದೆ.  ಇನ್ನು ದೇಶದಲ್ಲಿ ರಾಷ್ಟ್ರಪತಿ ಹುದ್ದೆಗೆ ನಾಳೆ ಅಂದರೆ ಜುಲೈ 18 ರಂದು ಮತದಾನ ನಡೆಯಲಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News