Vice Presidential Election 2022: ಯಾರು ಈ ಜಗದೀಪ್ ಧನಕರ್?

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಶನಿವಾರದಂದು ಭಾರತದ ಉಪರಾಷ್ಟ್ರಪತಿ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರನ್ನು ಹೆಸರನ್ನು ಘೋಷಿಸಿದೆ.

Written by - Manjunath N | Last Updated : Jul 16, 2022, 09:16 PM IST
  • ಈಗ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು,
  • ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ.
Vice Presidential Election 2022:  ಯಾರು ಈ ಜಗದೀಪ್ ಧನಕರ್?  title=

ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಶನಿವಾರದಂದು ಭಾರತದ ಉಪರಾಷ್ಟ್ರಪತಿ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರನ್ನು ಹೆಸರನ್ನು ಘೋಷಿಸಿದೆ.ದೆಹಲಿಯಲ್ಲಿ ನಡೆದ ಪಕ್ಷದ ಸಂಸದೀಯ ಮಂಡಳಿ ಸಭೆಯ ನಂತರ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಈ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಶಿವಣ್ಣನ 60ನೇ ಹುಟ್ಟುಹಬ್ಬಕ್ಕೆ ‘ಗೋಸ್ಟ್’! ಪೊಸ್ಟರ್ ರಿಲೀಸ್ ಮಾಡಲಿರುವ ಕಿಚ್ಚ ಸುದೀಪ್

ಪ್ರಸ್ತುತ ಪಶ್ಚಿಮ ಬಂಗಾಳದಲ್ಲಿ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿರುವ ಧನಕರ್, ಅಲ್ಲಿನ ವಿಶ್ವವಿದ್ಯಾನಿಲಯಗಳಿಂದ ಹಿಡಿದು ರಾಜಕೀಯ ಹಿಂಸಾಚಾರದವರೆಗಿನ ವಿಚಾರವಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ನಿರಂತರ ಸಂಘರ್ಷದಲ್ಲಿದ್ದಾರೆ.

ಬಿಜೆಪಿ ಮುಖ್ಯಸ್ಥ ಜೆಪಿ ನಡ್ದಾ ಅವರು ಉಪರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ಧನಖರ್ ಅವರ ಹೆಸರನ್ನು ಪ್ರಸ್ತಾಪಿಸುವ ಸಂದರ್ಭದಲ್ಲಿ ಅವರನ್ನು ರೈತರ ಮಗ ಹಾಗೂ ಜನಪರ ರಾಜ್ಯಪಾಲರು ಎಂದು ಶ್ಲಾಘಿಸಿದ್ದಾರೆ.

ಜಗದೀಪ್ ಧನಕರ್ ಮೂರು ದಶಕಗಳಿಗೂ ಹೆಚ್ಚು ಕಾಲ ಸಕ್ರೀಯ ರಾಜಕಾರಣದಲ್ಲಿದ್ದಾರೆ.ಅವರು 1989 ರ ಲೋಕಸಭಾ ಚುನಾವಣೆಯಲ್ಲಿ ಜುಂಜುನುದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾದ ನಂತರ ಅವರು ಸಾರ್ವಜನಿಕ ಜೀವನವನ್ನು ಪ್ರವೇಶಿಸಿದರು.ಇದಾದ ನಂತರ ಅವರು 1990 ರಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದರು.1993 ರಲ್ಲಿ ಅವರು ಅಜ್ಮೀರ್ ಜಿಲ್ಲೆಯ ಕಿಶನ್ಗಢ್ ಕ್ಷೇತ್ರದಿಂದ ರಾಜಸ್ಥಾನ ವಿಧಾನಸಭೆಗೆ ಆಯ್ಕೆಯಾದರು.

ಇದನ್ನೂ ಓದಿ: Singapore Open 2022: ಫೈನಲ್‌ಗೆ ಲಗ್ಗೆಯಿಟ್ಟ ಪಿ.ವಿ ಸಿಂಧು

ಜುಲೈ 2019 ರಲ್ಲಿ, ಅವರನ್ನು ಪಶ್ಚಿಮ ಬಂಗಾಳದ ಗವರ್ನರ್ ಆಗಿ ನೇಮಕ ಮಾಡಲಾಗಿತ್ತು, ಅಂದಿನಿಂದ ಅಲ್ಲಿನ ಸಿಎಂ ಮಮತಾ ಬ್ಯಾನರ್ಜೀ ಅವರ ಜೊತೆ ನಿರಂತರ ರಾಜಕೀಯ ಕದನದಲ್ಲಿ ತೊಡಗಿಸಿಕೊಂಡಿದ್ದಾರೆ.

ಈಗ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ.

2017 ರಲ್ಲಿ, ಬಿಹಾರದ ಗವರ್ನರ್ ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಸ್ಪರ್ಧೆಗೆ ಆಯ್ಕೆ ಮಾಡಿದ ನಂತರ ಬಿಜೆಪಿ ಅಂದಿನ ಕ್ಯಾಬಿನೆಟ್ ಸಚಿವ ಎಂ ವೆಂಕಯ್ಯ ನಾಯ್ಡು ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಹೆಸರಿಸಿತ್ತು. ಈಗ ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಅವಧಿ ಪೂರ್ಣಗೊಳ್ಳುತ್ತಿರುವುದರಿಂದ ಎರಡು ಉನ್ನತ ಹುದ್ದೆಗಳಿಗಾಗಿ ಚುನಾವಣೆ ಘೋಷಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News