ಪ.ಬಂಗಾಳ ಚುನಾವಣೆಯಲ್ಲಿ ಜೆಎನ್‌ಯು ವಿದ್ಯಾರ್ಥಿ ನಾಯಕಿ ಐಷೆ ಘೋಷ್ ಕಣಕ್ಕೆ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ ಮುಖ್ಯಸ್ಥೆ ಆಯಿಷೆ ಘೋಷ್ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ (ಎಂ) ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಆ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿದ ಜೆಎನ್‌ಯು ವಿದ್ಯಾರ್ಥಿ ಸಂಘದ ಮೊದಲ ಹಾಲಿ ಅಧ್ಯಕ್ಷೆ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.

Last Updated : Mar 11, 2021, 05:07 PM IST
  • ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ ಮುಖ್ಯಸ್ಥೆ ಆಯಿಷೆ ಘೋಷ್ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ (ಎಂ) ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
  • ಆ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿದ ಜೆಎನ್‌ಯು ವಿದ್ಯಾರ್ಥಿ ಸಂಘದ ಮೊದಲ ಹಾಲಿ ಅಧ್ಯಕ್ಷೆ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.
ಪ.ಬಂಗಾಳ ಚುನಾವಣೆಯಲ್ಲಿ ಜೆಎನ್‌ಯು ವಿದ್ಯಾರ್ಥಿ ನಾಯಕಿ ಐಷೆ ಘೋಷ್ ಕಣಕ್ಕೆ title=
file photo

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ ಮುಖ್ಯಸ್ಥೆ ಆಯಿಷೆ ಘೋಷ್ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ (ಎಂ) ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಆ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿದ ಜೆಎನ್‌ಯು ವಿದ್ಯಾರ್ಥಿ ಸಂಘದ ಮೊದಲ ಹಾಲಿ ಅಧ್ಯಕ್ಷೆ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.

ಆಯಿಷೆ ಘೋಷ್ (Aishe Ghosh) ಅವರು ಜಮುರಿಯಾ ಕ್ಷೇತ್ರದಿಂದ ಸಿಪಿಎಂ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.ಅವರಿಗೆ ಸಂಯುಕ್ತ ಮೋರ್ಚಾ ಬೆಂಬಲ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಐಶೆ ಘೋಷ್ ಒಡೆದಿರುವ ತಲೆಯೊಂದಿಗೆ ಜೆಎನ್‌ಯು ಹೋರಾಟ ಮುನ್ನಡೆಸುತ್ತಿದ್ದಾರೆ- ಸಿಎಂ ಪಿಣರಾಯಿ ವಿಜಯನ್

294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ.ಮತ ಎಣಿಕೆ ಮೇ 2 ರಂದು ನಡೆಯಲಿದೆ.ಭಾರತೀಯ ಸೆಕ್ಯುಲರ್ ಫ್ರಂಟ್ ಅಥವಾ ಐಎಸ್ಎಫ್ ಜೊತೆಗೆ ಎಡ ಮತ್ತು ಕಾಂಗ್ರೆಸ್ ಜಂಟಿಯಾಗಿ ಬಂಗಾಳ ಚುನಾವಣೆಗೆ ಹೋರಾಡುತ್ತಿವೆ. ಮಾರ್ಚ್ 5 ರಂದು ಎಡರಂಗವು ಮೊದಲ ಎರಡು ಹಂತಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

ಇದನ್ನೂ ಓದಿ: ಜೆಎನ್‌ಯುನಲ್ಲಿ ನನ್ನ ಮೇಲೆ ಹಲ್ಲೆ ನಡೆದಿರುವುದಕ್ಕೆ ನನ್ನ ಬಳಿ ಪುರಾವೆಗಳಿವೆ -ಐಶೆ ಘೋಷ್

ಕಳೆದ ವರ್ಷ ಜನವರಿಯಲ್ಲಿ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ನಡೆದ ಕ್ರೂರ ದಾಳಿಯಲ್ಲಿ ಆಯಿಷೆ ಘೋಷ್ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದಷ್ಟೇ ಅಲ್ಲದೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೂಡ ಈ ಗಾಯಗೊಂಡ ವಿದ್ಯಾರ್ಥಿಗಳನ್ನು ಬೆಂಬಲಿಸಿದ್ದರು.

ಮಾಜಿ ಜೆಎನ್‌ಯು ವಿದ್ಯಾರ್ಥಿ ಸಂಘದ ಮುಖ್ಯಸ್ಥರೂ ಆಗಿರುವ ಕನ್ಹಯ್ಯ ಕುಮಾರ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಬೆಗುಸರಾಯ್‌ನಿಂದ ಎಡ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ವಿರುದ್ಧ ಭಾರಿ ಅಂತರದಿಂದ ಸೋತರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

 

Trending News