Presidential Candidate : ಕಾಂಗ್ರೆಸ್ ರಾಷ್ಟ್ರಪತಿ ಅಭ್ಯರ್ಥಿ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ!

ವಿರೋಧ ಪಕ್ಷಗಳೂ ರಾಷ್ಟ್ರಪತಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತವೆಯೇ ಅಥವಾ ಎನ್‌ಡಿಎ ಅಭ್ಯರ್ಥಿಯ ಬಗ್ಗೆ ಮಾತ್ರ ಒಮ್ಮತ ಮೂಡುತ್ತದೆಯೇ ಎಂಬ ಪ್ರಶ್ನೆ ಉದ್ಬವಿಸುತ್ತದೆ.

Written by - Channabasava A Kashinakunti | Last Updated : Jun 9, 2022, 08:55 PM IST
  • ಇಂದು ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟ
  • ಶೀಘ್ರದಲ್ಲೇ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಡಳಿತ ಪಕ್ಷ ಅಂದರೆ ಎನ್‌ಡಿಎ ಪ್ರಕಟಿಸಲಿದೆ
  • ಕಾಂಗ್ರೆಸ್ ಪಕ್ಷದಲ್ಲಿ ರಾಷ್ಟ್ರಪತಿ ಅಭ್ಯರ್ಥಿ ಗುಲಾಂ ನಬಿ ಆಜಾದ್
Presidential Candidate : ಕಾಂಗ್ರೆಸ್ ರಾಷ್ಟ್ರಪತಿ ಅಭ್ಯರ್ಥಿ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ! title=

Presidential Candidate : ಇಂದು ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟಿಸಿದೆ. ಶೀಘ್ರದಲ್ಲೇ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಡಳಿತ ಪಕ್ಷ ಅಂದರೆ ಎನ್‌ಡಿಎ ಪ್ರಕಟಿಸಲಿದೆ. ಆದರೆ ವಿರೋಧ ಪಕ್ಷಗಳೂ ರಾಷ್ಟ್ರಪತಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತವೆಯೇ ಅಥವಾ ಎನ್‌ಡಿಎ ಅಭ್ಯರ್ಥಿಯ ಬಗ್ಗೆ ಮಾತ್ರ ಒಮ್ಮತ ಮೂಡುತ್ತದೆಯೇ ಎಂಬ ಪ್ರಶ್ನೆ ಉದ್ಬವಿಸುತ್ತದೆ.

ಕೇಳಿ ಬಂದಿತ್ತು ಗುಲಾಂ ನಬಿ ಆಜಾದ್ ಹೆಸರು 

ಹಿರಿಯ ಕಾಂಗ್ರೆಸ್ ನಾಯಕರ ಪ್ರಕಾರ, ರಾಷ್ಟ್ರಪತಿ ಅಭ್ಯರ್ಥಿಯ ಹೆಸರಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ನಡುವೆ ಒಮ್ಮತವನ್ನು ಸಾಧಿಸಲು ಪಕ್ಷವು ಪ್ರಯತ್ನಿಸುತ್ತದೆ. ಕಾಂಗ್ರೆಸ್ ನಾಯಕರ ಪ್ರಕಾರ, ಅಭ್ಯರ್ಥಿ ಕಾಂಗ್ರೆಸ್ ಅಥವಾ ಟಿಎಂಸಿ ಮೂಲಗಳ ಪ್ರಕಾರ ಕಾಂಗ್ರೆಸ್ ಪಕ್ಷದಲ್ಲಿ ರಾಷ್ಟ್ರಪತಿ ಅಭ್ಯರ್ಥಿ ಗುಲಾಂ ನಬಿ ಆಜಾದ್ ಹೆಸರಲ್ಲಿ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆದಿದೆ. ಗುಲಾಂ ನಬಿ ಆಜಾದ್ ಅವರ ಹೆಸರಿನಲ್ಲಿ ವಿರೋಧ ಪಕ್ಷಗಳ ನಡುವೆ ಒಮ್ಮತ ಮೂಡಿಸುವುದು ಸುಲಭ ಎಂದು ಪಕ್ಷದ ನಾಯಕರು ಹೇಳಿಕೊಂಡಿದ್ದಾರೆ. ಏಕೆಂದರೆ ಆಜಾದ್ ಅವರು ಬಹಳ ದಿನಗಳ ಕಾಲ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು. ಅಲ್ಲದೆ, ವಿರೋಧ ಪಕ್ಷದ ನಾಯಕರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಆದರೆ ಇವರ ಹೆಸರು ಇನ್ನೂ ಅಂತಿಮಗೊಂಡಿಲ್ಲ.

ಇದನ್ನೂ ಓದಿ : President Election 2022 : ಜು.18 ರಂದು ರಾಷ್ಟ್ರಪತಿ ಚುನಾವಣೆಗೆ ಮತದಾನ, ಜು. 21 ರಂದು ಫಲಿತಾಂಶ!

ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪ್ರಬಲ ಪೈಪೋಟಿ!

ಕಾಂಗ್ರೆಸ್ ಹೆಸರಿನಲ್ಲಿ ವಿರೋಧ ಪಕ್ಷಗಳ ನಡುವೆ ಒಮ್ಮತ ಮೂಡದಿದ್ದರೆ ಟಿಎಂಸಿಯಿಂದಲೂ ವಿರೋಧ ಪಕ್ಷದ ಅಭ್ಯರ್ಥಿಯ ಹೆಸರು ಕೇಳಿ ಬರಬಹುದು. ಇತರ ವಿರೋಧ ಪಕ್ಷಗಳು ಆ ಹೆಸರನ್ನು ಒಪ್ಪಿಕೊಂಡರೆ, ಕಾಂಗ್ರೆಸ್ ಪಕ್ಷವೂ ಅವರನ್ನು ಬೆಂಬಲಿಸಬಹುದು. ಹೀಗಾಗಿ, ಪ್ರತಿಪಕ್ಷಗಳು ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಬಲವಾಗಿ ಸ್ಪರ್ಧಿಸಲಿವೆ ಎಂದು ಕಾಂಗ್ರೆಸ್ ಪಕ್ಷ ಭಾವಿಸಿದೆ. ಎನ್‌ಡಿಎ ಶೇ.48.5 ರಷ್ಟು ಮತಗಳನ್ನು ಹೊಂದಿದ್ದರೆ, ಎನ್‌ಡಿಎಯೇತರ ಪಕ್ಷಗಳ ಸಂಖ್ಯೆ ಶೇ.51.5 ರಷ್ಟು ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಯುಪಿಎ ಪಕ್ಷಗಳ ಮತಗಳು ಮಾತ್ರ ಶೇ. 24 ರಿಂದ 25 ರಷ್ಟಿದೆ. ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟಿಗೆ ತೆಗೆದುಕೊಂಡರೆ, ಇದು ಕೂಡ ಶೇ.47 ರಷ್ಟು ತಲುಪುತ್ತದೆ. 

ಕಾಂಗ್ರೆಸ್ ನಾಯಕರ ಪ್ರಕಾರ, ಎಲ್ಲವೂ ಬಿಜೆಡಿ ಮತ್ತು ವೈಎಸ್ಆರ್ ಕಾಂಗ್ರೆಸ್ ನಿಲುವನ್ನು ಅವಲಂಬಿಸಿರುತ್ತದೆ. ಏಕೆಂದರೆ ಈ ಎರಡು ಪಕ್ಷಗಳ ಮತ ಶೇ.4ರಷ್ಟಿದೆ. ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿದರೆ ಗೆಲ್ಲಬಹುದು ಮತ್ತು ಆ ಮತ ಎನ್‌ಡಿಎಗೆ ಹೋದರೆ, ಆಗ ಎನ್‌ಡಿಎ ಅಭ್ಯರ್ಥಿಯ ಗೆಲುವು ಖಚಿತ. ಅಂದಹಾಗೆ, ಬಿಜೆಡಿ ಮತ್ತು ವೈಎಸ್‌ಆರ್‌ನ ಬೆಂಬಲದ ಬಗ್ಗೆ ಕಾಂಗ್ರೆಸ್ ನಾಯಕರು ಸ್ವಲ್ಪ ಭರವಸೆ ಇಟ್ಟಿದ್ದಾರೆ. ಏಕೆಂದರೆ ಈ ಇಬ್ಬರ ನಾಯಕರು ಇತ್ತೀಚೆಗೆ ಪ್ರಧಾನಿಯನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ : Rajya Sabha Election 2022 : ರಾಜ್ಯಸಭೆ ಚುನಾವಣೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜು : ಜಯದ ಮಾಲೆ ಯಾರಿಗೆ!?

ಭರ್ಜರಿ ಪೈಪೋಟಿಗೆ ತಯಾರಿ

ಕಾಂಗ್ರೆಸ್ ಪಕ್ಷವು ವಿರೋಧ ಪಕ್ಷಗಳೊಂದಿಗೆ ಮಾತನಾಡಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಬಯಸಿದೆ, ಅವರ ಹೆಸರಿನಲ್ಲಿ ಯಾರ ಅಭಿಪ್ರಾಯವಿದೆ ಮತ್ತು ಆಡಳಿತ ಪಕ್ಷದ ಅಭ್ಯರ್ಥಿಗೆ ಯಾರು ಕಠಿಣ ಹೋರಾಟ ನೀಡಬಹುದು.

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News