ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಪಡ್ತಿದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.  

Written by - Zee Kannada News Desk | Last Updated : May 12, 2023, 01:32 PM IST
  • ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ.
  • ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ
  • ಆರ್.ಟಿ ನಗರದ ಮನೆಯಲ್ಲಿ ಮಾಧ್ಯಮದವರೊಂದಿಗೆ ಬಸವಾರಾಜ ಬೊಮ್ಮಾಯಿ ಅವರು ಮಾತನಾಡಿದರು.
ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ title=

Basavaraj Bommai : ಇಂದು ಬೆಂಗಳೂರಿನ ಆರ್.ಟಿ ನಗರದ ಮನೆಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ನಾನು ಮೊದಲಿಂದಲೂ ಒಂದೇ ಮಾತು ಹೇಳುತ್ತ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತದೆ. ನಾವು ಗೆಲ್ಲುವ ವಿಶ್ವಾಸ ಇದ್ದು, ಬಹುಮತದ ಗಡಿ ದಾಟುತ್ತೇವೆ. ಮ್ಯಾಜಿಕ್ ನಂಬರ್ ತಲುಪುತ್ತೇವೆ. ಎಲ್ಲ ಕ್ಷೇತ್ರ, ಬೂತ್ ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ ಎಂದರು.

ಇದನ್ನೂ ಓದಿ-Karnataka Election 2023: ‘ತೆನೆ ಹೊತ್ತ ಮಹಿಳೆ’ಗೆ ಗಾಳ ಹಾಕುತ್ತಿದೆಯೇ BJP-CONG! ಬ್ಯಾಕ್ ರೂಂ ಆಪರೇಷನ್ ಸಕ್ಸಸ್ ಆಗುತ್ತಾ?

ನಾನೇ ವರಿಷ್ಠರಿಗೆ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ಬಗ್ಗೆ ಹೈಕಮಾಂಡ್ ನಾಯಕರಿಗೆ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ಸಹ ಗೆಲ್ಲುವ ವಿಶ್ವಾಸದಲ್ಲಿದ್ದು, ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದರು.

ಈಗ ನಮ್ಮ ಮುಂದೆ ಮೈತ್ರಿಯ ಪ್ರಶ್ನೆ ಇಲ್ಲ. ನಾವು ಬಹುಮತ ದಾಟುತ್ತೇವೆ. ಕಾಂಗ್ರೆಸ್‌ನವರು ಏನೇ ಸಭೆ ಮಾಡಲಿ. ಅವರಿಗೆ ಸಭೆ ಮಾಡುವ ಹಕ್ಕಿದೆ. ಎಲ್ಲ ಪಕ್ಷಗಳೂ ಸಭೆ ಮಾಡುತ್ತಾರೆ‌‌ ಎಂದರು.

ಇದನ್ನೂ ಓದಿ-ಕಾಂಗ್ರೆಸ್ ಬಿಜೆಪಿ ನಮ್ಮ ನಾಯಕರನ್ನು ಸಂಪರ್ಕಿಸಿದೆ ! ಯಾರಿಗೆ ಬೆಂಬಲ ಎನ್ನುವ ನಿರ್ಧಾರ ಪಕ್ಷ ತೆಗೆದುಕೊಂಡಿದೆ : ಜೆಡಿಎಸ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News