Karnataka Election 2023: "ಮಲ್ಲಿಕಾರ್ಜುನ ಖರ್ಗೆ ಹತ್ಯೆಗೆ ಸಂಚು, ಮೌನಕ್ಕೆ ಶರಣಾಗಿದ್ದೇಕೆ ಪಿಎಂ, ಸಿಎಂ?"

Karnataka Election 2023: ಬಿಜೆಪಿ ತನ್ನ ದ್ವೇಷದ ಮೂಲಕ ಕರ್ನಾಟಕದ ಮಣ್ಣಿನ ಮಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲುವ ಸಂಚು ರೂಪಿಸಿ ಪಾಪದ ಕೃತ್ಯ ಎಸಗಿದೆ. ಖರ್ಗೆ ಹತ್ಯೆಗೆ ಸಂಚು ನಡೆದಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ.  

Written by - Prashobh Devanahalli | Edited by - Chetana Devarmani | Last Updated : May 6, 2023, 11:32 AM IST
  • ಕರ್ನಾಟಕದ ಮಣ್ಣಿನ ಮಗ ಮಲ್ಲಿಕಾರ್ಜುನ ಖರ್ಗೆ ಹತ್ಯೆಗೆ ಸಂಚು
  • ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ
  • ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಸುರ್ಜೇವಾಲ ಗಂಭೀರ ಆರೋಪ
Karnataka Election 2023: "ಮಲ್ಲಿಕಾರ್ಜುನ ಖರ್ಗೆ ಹತ್ಯೆಗೆ ಸಂಚು, ಮೌನಕ್ಕೆ ಶರಣಾಗಿದ್ದೇಕೆ ಪಿಎಂ, ಸಿಎಂ?"   title=

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ಸೇರಿದಂತೆ ಇಡೀ ಕುಟುಂಬವನ್ನೇ ಹತ್ಯೆ ಮಾಡುವ ಸಂಚು ರೂಪಿಸಿದೆ. ಮೋದಿ ಹಾಗೂ ಬೊಮ್ಮಾಯಿ ಅವರ ಆತ್ಮೀಯ ನೀಲಿ ಕಂಗಳ ಹುಡುಗ ಹಾಗೂ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ಕನ್ನಡ ನಾಡಿನ ಮಗ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ದ್ವೇಷ ಕಾರುತ್ತಲೆ ಬಂದಿದೆ. ಖರ್ಗೆ ಅವರು ದಲಿತ ಹಾಗೂ ಕಾರ್ಮಿಕ ಕುಟುಂಬದಲ್ಲಿ ಜನಿಸಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದವರೆಗೆ ಬೆಳೆದು ಬಂದಿರುವುದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಖರ್ಗೆ ಅವರ ವಿರುದ್ಧ ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಹಾಸನ ಜಿಲ್ಲೆಯಲ್ಲಿ ಹೇಗಿದೆ ರಾಜಕೀಯ ಪಕ್ಷ್ಗಗಳ ಬಲಾಬಲ?

ಫೆ.27, 2023 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಛತ್ರಿ ಕೆಳಗೆ ನಿಂತಿಲ್ಲ ಎಂದು ಹೇಳುವ ಮೂಲಕ ಲೇವಡಿ ಮಾಡಿದ್ದರು. ಬಿಜೆಪಿಯ ದ್ವೇಷಪೂರಿತ ಹೇಳಿಕೆ ಅಲ್ಲಿಗೆ ನಿಲ್ಲಲಿಲ್ಲ. ಮೇ 02, 2023ರಂದು ಬಿಜೆಪಿ ರಾಜಸ್ಥಾನದ ಶಾಸಕ ಹಾಗೂ ಪ್ರಧಾನ ಕಾರ್ಯದರ್ಶಿ ಮದನ್ ದಿಲಾವರ್ ಖರ್ಗೆ ಅವರಿಗೆ 80 ವರ್ಷ ವಯಸ್ಸಾಗಿದ್ದು, ದೇವರು ಅವರನ್ನು ಯಾವಾಗ ಬೇಕಾದರೂ ಕರೆಸಿಕೊಳ್ಳಬಹುದು ಎಂದು ಖರ್ಗೆ ಅವರ ಸಾವನ್ನು ಬಯಸಿದ್ದರು. ಈಗ ಬಿಜೆಪಿ ನಾಯಕರು ಬಹಿರಂಗವಾಗಿ ಖರ್ಗೆ ಹಾಗೂ ಅವರ ಕುಟುಂಬದ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದಿದ್ದಾರೆ. 

ಚುನಾವಣೆ ಸೋಲುವ ಹತಾಷೆಯಲ್ಲಿ ಬಿಜೆಪಿ ಹಾಗೂ ಅದರ ನಾಯಕರು ಅತ್ಯಂತ ಭಯಾನಕ ಹಂತಕ್ಕೆ ತಲುಪಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ರೂಪಿಸಿರುವ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡದೆ, ತಮ್ಮ 40% ಕಮಿಷನ್ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಪ್ರತಿನಿತ್ಯ ಭಾವನಾತ್ಮಕ ವಿಚಾರದ ಬಗ್ಗೆ ಮಾತನಾಡಿ ಸಮಾಜ ಒಡೆಯುವ ಪ್ರಯತ್ನಕ್ಕೆ ಮುಂದಾಗಿದೆ. ಈ ಕುತಂತ್ರದಲ್ಲೂ ಯಶಸ್ಸು ಕಾಣದೆ ಕುಸಿಯುತ್ತಿರುವ ಬಿಜೆಪಿ ಈಗ ತಮ್ಮ ಬತ್ತಳಿಕೆಯಿಂದ ಹತ್ಯೆ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮಾಡಿಟ್ಟ ಪಾಪ ತೊಳೆಯಲು ಕಾವೇರಿ, ಕೃಷ್ಣಾ ನದಿಗಳ ನೀರು ಸಾಲದು: ಸಿದ್ದರಾಮಯ್ಯ

ಬಸವಣ್ಣನ ನಾಡು ಸಾಮರಸ್ಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡ ನಾಡಿನ ಈ ಪರಂಪರೆಯ ಮೇಲೆ ಈಗ ದಾಳಿಯಾಗುತ್ತಿದೆ. ಇದು ಕೇವಲ ಖರ್ಗೆ ಅವರ ಮೇಲೆ ದಾಳಿಯ ಸಂಚು ಮಾತ್ರವಲ್ಲ, ಕನ್ನಡಿಗರ ಮೇಲೆ ದಾಳಿ ಮಾಡುವ ಸಂಚು. ಇಷ್ಟೆಲ್ಲಾ ಆದರೂ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪೊಲೀಸ್ ಇಲಾಖೆ ಹಾಗೂ ಚುನಾವಣಾ ಆಯೋಗ ಮೌನಕ್ಕೆ ಶರಣಾಗಿದೆ. ಆದರೆ ರಾಜ್ಯದ 6.50 ಕೋಟಿ ಕನ್ನಡಿಗರು ಈ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ರೋಡ್ ‘ಶೋ’ಕಿಗಾಗಿ ಮರಗಳ ಕಡಿದಿದ್ದು ಯಾವ ಸಾಧನೆಗೆ?- ಕಾಂಗ್ರೆಸ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News